ಹೊನ್ನಾಳಿಯಲ್ಲಿ ರೇಣುಕಾಚಾರ್ಯಗೆ ಬಿಜೆಪಿ ಟಿಕೆಟ್ ಡೌಟ್‌

ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗೆ ಭರ್ಜರಿ ಫೈಟ್ ಏರ್ಪಟ್ಟಿದೆ. ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಾ.ಬಿ.ಡಿ.ಗಂಗಪ್ಪ ನಡುವೆ ಸ್ಪರ್ಧೆ ಏರ್ಪಟ್ಟಿದ್ದು ಟಿಕೆಟ್ ಯಾರ ಪಾಲಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಯಡಿಯೂರಪ್ಪ ಪಕ್ಕಾ ಅನುಯಾಯಿಯಾಗಿರುವ ರೇಣುಕಾಚಾರ್ಯ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲನ್ನಪ್ಪಿದ್ದರು. ಅವರು ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಡಾ.ಬಿ.ಡಿ.ಗಂಗಪ್ಪ ಅವರು ಈ ಬಾರಿಯೂ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ.

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್‌ ಶಾಂತಣ್ಣ ಗೌಡ ಅವರು ವಿಜಯಸಾಧಿಸಿದ್ದರೆ ಕೆಜೆಪಿಯಿಂದ ಸ್ಪರ್ಧಿಸಿದ್ದ ರೇಣುಕಾಚಾರ್ಯ ಅವರು ದ್ವಿತೀಯ ಸ್ಥಾನ ಪಡೆದಿದ್ದರು.

BJP Ticket fight in Honnali constituency

ವೈದ್ಯರಾಗಿಯೂ ಸೇವೆ ಸಲ್ಲಿಸಿರುವ ಮಾಜಿ ಶಾಸಕ ಡಾ.ಬಿ.ಡಿ.ಗಂಗಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಸಹ ಒತ್ತಾಯಗಳು ಕೇಳಿ ಬಂದಿದ್ದು, ಇಬ್ಬರ ಮಧ್ಯೆ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಪರಿವರ್ತನಾ ಯಾತ್ರೆ ಸಂದರ್ಭ ಯಡಿಯೂರಪ್ಪ ಅವರೇ, ರೇಣುಕಾಚಾರ್ಯ ಅವರನ್ನು ಗೆಲ್ಲಿಸುವಂತೆ ಸಾರ್ವಜನಿಕ ಸಭೆಯಲ್ಲಿ ಮನವಿ ಮಾಡಿದ್ದರಾದರೂ ಆ ನಂತರ ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆ ವರದಿ ರೇಣುಕಾಚಾರ್ಯ ಅವರಿಗೆ ವ್ಯತಿರಿಕ್ತವಾಗಿ ಬಂದ ಕಾರಣ ಈಗ ರೇಣುಕಾಚಾರ್ಯ ಅವರ ಟಿಕೆಟ್ ತಪ್ಪುವ ಸಂಭವ ಇದೆ ಎನ್ನಲಾಗುತ್ತಿದೆ.

ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿರುವ ರೇಣುಕಾಚಾರ್ಯ ಅವರು ತಮಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದು, ಈ ಬಾರಿ ತಾವೇ ಗೆದ್ದು ಬರುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+