Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯಗೆ ಠಕ್ಕರ್‌ ಕೊಡಲು ಕುರುಬ ಸಮುದಾಯದ ನಾಯಕನನ್ನ ರಾಜ್ಯಾಧ್ಯಕ್ಷ ಮಾಡಲು ಹೊರಟಿದೆಯೇ ಬಿಜೆಪಿ ?

ಬೆಂಗಳೂರು, ನವೆಂಬರ್‌ 03: ಕಳೆದ ಮೂರು ವರ್ಷ ಕಾಲ ಆಡಳಿತ ನಡೆಸಿದ್ದ ಕರ್ನಾಟಕ ಬಿಜೆಪಿ, 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಕಮಲ ಪಾಳಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

ಹೌದು, ಬಿಜೆಪಿ ಹೈಕಮಾಂಡ್‌ 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ‌ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರುವ ಮೂಲಕ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಿಸಬೇಕು ಎಂಬ ನಿರೀಕ್ಷೆಯೊಂದಿಗೆ ಬಿಜೆಪಿ ಹೈಕಮಾಂಡ್‌ ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸಿದ್ರೂ ಆದರೆ, ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಆರು ತಿಂಗಳಾದರೂ ರಾಜ್ಯಾಧ್ಯಕ್ಷರ ಹಾಗೂ ವಿಪಕ್ಷ ನಾಯಕರ ಆಯ್ಕೆಯಾಗಿಲ್ಲ. ಇನ್ನೂ ಸೋಲು ಕಂಡ ಬಳಿಕ ಹೈಕಮಾಂಡ್‌ ಕರ್ನಾಟಕ ಬಿಜೆಪಿಯನ್ನ ಕಡೆಗಣಿಸಿದೆ ಎನ್ನುವ ಮಾತು ಕಮಲ ಪಾಳಯದಲ್ಲಿ ಕೇಳಿ ಬರುತ್ತಿದೆ.

BJP to Choose the Kuruba Leader KS Eshwarappa as Karnataka BJP President to Counter Siddaramaiah

ಈಗಾಗಲೇ ರಾಜ್ಯದಲ್ಲಿ ರಾಜ್ಯಾಧ್ಯಕ್ಷ ನೇಮಕ ಹಾಗೂ ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವ ಹಿನ್ನಲೆ ರಾಜ್ಯ ಬಿಜೆಪಿ ನಾಯಕರಿಗೆ ಸಾಕಷ್ಟು ಮುಜುಗರವನ್ನ ಅನುಭವಿಸಿದೆ, ಅಲ್ಲದೇ ಈಗಾಗಲೇ ಮುಂದಿನ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಭರ್ಜರಿಯಾಗಿ ತಯಾರಿ ನಡೆಸುತ್ತಿದ್ದು, ಬಿಜೆಪಿ ಪಾಳಯದಲ್ಲಿ ರಾಜ್ಯಾಧ್ಯಕ್ಷ ನಾಯಕನ ಆಯ್ಕೆ ಯಾವಾಗ? ಎನ್ನುವ ಕುರಿತು ಚರ್ಚೆಯಾಗುತ್ತಿದೆ.

ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಜನ ಆಕಾಂಕ್ಷಿಗಳು ಬಹಿರಂಗವಾಗಿ ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.ಇನ್ನೂ ಮಹಿಳಾ ನಾಯಕತ್ವಕ್ಕೆ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡಬೇಕು ಎಂಬ ಮಾತು ಕೆಲ ದಿನಗಳಿಂದ ಬಿಜೆಪಿ ಪಾಳಯದಲ್ಲಿ ಕೇಳಿ ಬಂದಿದ್ದು, ಬಿಜೆಪಿ ಮಹಿಳಾ ನಾಯಕಿ ಹಾಗೂ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್‌ ತಿರ್ಮಾನಿಸಿದೆ ಎಂಬ ಮಾತುಗಳು ಕೇಳಿ ಬಂದಿದೆ. ಆದರೆ, ಈ ನಡುವೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಹೈಕಮಾಂಡ್‌ ಮಾಸ್ಟರ್‌ ಪ್ಲಾನ್‌ ನಡೆಸಿದ್ದು, ಅದರಂತೆ ಕುರುಬ ಸಮುದಾಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಲು ಕುರುಬ ಸಮುದಾಯದ ನಾಯಕನನ್ನು ರಾಜ್ಯಾಧ್ಯಕ್ಷ ಮಾಡಲು ಬಿಜೆಪಿಪ ಹೊರಟಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

BJP to Choose the Kuruba Leader KS Eshwarappa as Karnataka BJP President to Counter Siddaramaiah

ಹೌದು, ಮೊನ್ನೆಯಷ್ಟೇ ಬಿಜೆಪಿ ಹೈಕಮಾಂಡ್‌ ಕುರುಬ ಸಮುದಾಯದ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿಯಾಗಿರುವ ಕೆ ಎಸ್‌ ಈಶ್ವರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದ್ದು, ರಾಜ್ಯಾಧ್ಯಕ್ಷ ಸ್ಥಾನ ಕೆ ಎಸ್‌ ಈಶ್ವರಪ್ಪ ಅವರಿಗೆ ಒಲಿದು ಬರಲಿದೆ ಎಂದು ಹೇಳಲಾಗಿದೆ. ಈಗಾಗಲೇ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಧ್ಯಕ್ಯ ಜೆ ಪಿ ನಡ್ಡಾ ಅವರನ್ನ ಕೆ ಎಸ್‌ ಈಶ್ವರಪ್ಪ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನೂ ರಾಜ್ಯಾಧ್ಯಕ್ಷ ಆಯ್ಕೆ ವಿಳಂಬ ಆಗುತ್ತಿರುವ ಹಿನ್ನಲೆ ಸಾಕಷ್ಟು ಲೆಕ್ಕಾಚಾರವನ್ನ ಬಿಜೆಪಿ ಹಾಕಿಕೊಂಡಿದೆ. ಏಕೆಂದರೆ, ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದೆ. ಅಲ್ಲದೇ 135 ಶಾಸಕರನ್ನ ಹೊಂದಿದ್ದರೂ ಸಹ ಆಪರೇಷನ್‌ ಹಸ್ತದ ಮೂಲಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ನಾಯಕರು ಗಾಳ ಹಾಕಿದ್ದು, ಕುರುಬ ಸಮುದಾಯದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಠಕ್ಕರ್‌ ಕೊಡಲು ಈಶ್ವರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿದೆ ಎನ್ನಲಾಗಿದೆ.

ಇನ್ನೂ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಸಮಕಾಲೀನವರಾದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕುರುಬ ಸಮುದಾಯದ ನಾಯಕ ಕೆ ಎಸ್‌ ಈಶ್ವರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವುದರಿಂದ ಪಕ್ಷದಲ್ಲಿ ಇರುವಂತಹ ಅಸಮಾಧಾನವೂ ಸಹಜವಾಗಿ ಶಮನವಾಗುತ್ತದೆ ಎಂಬ ಲೆಕ್ಕಾಚಾರವನ್ನ ಹೈಕಮಾಂಡ್‌ ಹಾಕಿಕೊಂಡಿದ್ದು, ಶೀಘ್ರದಲ್ಲಿಯೇ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರು ಯಾರೆಂಬುದನ್ನ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+