ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ನಾಯಕತ್ವದಲ್ಲಿ ಚುನಾವಣೆಗೆ ಹೋದರೆ ಗೆಲುವು

|
Google Oneindia Kannada News

ಬೆಂಗಳೂರು, ಜನವರಿ 11 : ವಿಧಾನಪರಿಷತ್ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ವಿಫಲವಾದ ಕರ್ನಾಟಕ ಬಿಜೆಪಿ, ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲು ನಿರ್ಧಾರ ಕೈಗೊಂಡಿದೆ.

ಭಾನುವಾರ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯನ್ನು ಹಾಲಿ ಮತ್ತು ಮಾಜಿ ಶಾಸಕರು, ಸಂಸದರಿಗೆ ನೀಡಲು ತೀರ್ಮಾನ ಕೈಗೊಳ್ಳಲಾಯಿತು. [ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ, ವೆಚ್ಚ ನಿಗದಿ]

ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, 'ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸ್ಥಳೀಯ ವಿಷಯ ಮತ್ತು ನಾಯಕತ್ವವನ್ನು ಆಧರಿಸಿ ನಡೆಯುತ್ತದೆ. ಆದ್ದರಿಂದ, ಸ್ಥಳೀಯ ಮಟ್ಟದ ಎಲ್ಲಾ ನಾಯಕರು ಒಗ್ಗೂಡಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ' ಎಂದು ಹೇಳಿದರು. [ಚುನಾವಣೆ ಮೈತ್ರಿ ಬಗ್ಗೆ ದೇವೇಗೌಡರು ನೀಡಿದ ಸುಳಿವೇನು?]

'ರಾಜ್ಯ ಸರ್ಕಾರದ ಷಡ್ಯಂತ್ರದಿಂದ ಹೊರಿಸಿದ್ದ ಭ್ರಷ್ಟಾಚಾರ ಆರೋಪಗಳಿಂದ ಬಿ.ಎಸ್. ಯಡಿಯೂರಪ್ಪ ಅವರು ಈಗ ಮುಕ್ತರಾಗಿದ್ದಾರೆ. ಈ ವಿಷಯವನ್ನು ಜನರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಕ್ಷ ನಿರ್ಧರಿಸಿದೆ' ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ತಿಳಿಸಿದರು. ಸಭೆಯಲ್ಲಿ ನಡೆದ ಚರ್ಚೆಯ ವಿವರಗಳು ಚಿತ್ರಗಳಲ್ಲಿ...

ಉಸ್ತುವಾರಿಗಳ ನೇಮಕ, 9 ತಂಡ ರಚನೆ

ಉಸ್ತುವಾರಿಗಳ ನೇಮಕ, 9 ತಂಡ ರಚನೆ

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ತಂತ್ರ ರೂಪಿಸಲು ಪ್ರಮುಖ ನಾಯಕರನ್ನು ಜಿಲ್ಲೆಗೊಬ್ಬರಂತೆ ಉಸ್ತುವಾರಿಯಾಗಿ ನೇಮಿಸಲಾಗಿದೆ. ರಾಜ್ಯ ನಾಯಕರ 9 ತಂಡ ಸೋಮವಾರದಿಂದ ಜ.14ರ ತನಕ ತಮಗೆ ವಹಿಸಲಾಗಿರುವ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಭೆಗಳನ್ನು ನಡೆಸಿ, ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಯಡಿಯೂರಪ್ಪ ನಾಯಕತ್ವದಲ್ಲಿ ಚುನಾವಣೆ

ಯಡಿಯೂರಪ್ಪ ನಾಯಕತ್ವದಲ್ಲಿ ಚುನಾವಣೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಎಂದು ಘೋಷಸಿ ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಯಡಿಯೂರಪ್ಪ ಅವರು ನಾಯಕತ್ವದಲ್ಲಿ ಚುನಾವಣೆ ಎದುರಿಸದಿದ್ದರೆ ಬಿಬಿಎಂಪಿ, ವಿಧಾನಪರಿಷತ್ ಚುನಾವಣೆಯಲ್ಲಿ ಸೋತ ರೀತಿಯಲ್ಲಿಯೇ ಸೋಲು ಅನುಭವಿಸಬೇಕು ಎಂದು ಕೆಲವು ನಾಯಕರು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರದ ವಿರುದ್ಧ ಬಿಎಸ್‌ವೈ ಗರಂ

ಸರ್ಕಾರದ ವಿರುದ್ಧ ಬಿಎಸ್‌ವೈ ಗರಂ

'ರಾಜ್ಯದಲ್ಲಿನ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ' ಎಂದು ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 'ತನ್ನ ಪಾಲಿನ ಹಣವನ್ನು ಸಮರ್ಪಕವಾಗಿ ಖರ್ಚು ಮಾಡದ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನಾದರೂ ಸಮರ್ಪಕವಾಗಿ ಬಳಸಬೇಕು. ಯುದ್ಧೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.

ಸಿಎಸ್ ಲೇವಡಿ ಮಾಡಿದ ಸಿ.ಟಿ.ರವಿ

ಸಿಎಸ್ ಲೇವಡಿ ಮಾಡಿದ ಸಿ.ಟಿ.ರವಿ

ಮಾಧ್ಯಮಗಳಿಂದ ತಪ್ಪಿಸಿಕೊಳ್ಳಲು ಓಡಿ ಹೋದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರನ್ನು ಸಿ.ಟಿ.ರವಿ ಅವರು ಲೇವಡಿ ಮಾಡಿದರು. 'ಜಾಧವ್ ಅವರನ್ನು ಕೌನ್ಸೆಲಿಂಗ್​ಗೆ ಒಳಪಡಿಸಬೇಕಾಗಿದೆ. ಜಾಧವ್ ಓಡಿ ಹೋಗಿರುವ ರೀತಿ ರಾಜ್ಯಕ್ಕೆ ಮಾಡಿರುವ ಅಪಮಾನ. ಮಾಧ್ಯಮಗಳನ್ನೇ ಎದುರಿಸಲಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಹೇಗೆ ಎದುರಿಸುತ್ತಾರೆ? ಎಂದು ರವಿ ಪ್ರಶ್ನೆ ಮಾಡಿದ್ದಾರೆ.

ಸರ್ಕಾರದ ವಿರುದ್ಧ ಹೋರಾಟ

ಸರ್ಕಾರದ ವಿರುದ್ಧ ಹೋರಾಟ

'ರಾಜ್ಯ ಸರ್ಕಾರ ಷಡ್ಯಂತ್ಯದಿಂದ ಹೊರಿಸಿದ್ದ ಭ್ರಷ್ಟಾಚಾರ ಆರೋಪಗಳಿಂದ ಬಿ.ಎಸ್. ಯಡಿಯೂರಪ್ಪ ಅವರು ಈಗ ಮುಕ್ತರಾಗಿದ್ದಾರೆ. ಈ ವಿಷಯವನ್ನು ಜನರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಕ್ಷ ನಿರ್ಧರಿಸಿದೆ' ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ತಿಳಿಸಿದರು.

English summary
Karnataka BJP on Sunday decided to face the upcoming zilla and taluk panchayat elections under collective leadership. The decisions taken at a meeting of party MLAs, MLCs and MPs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X