ಇಸ್ತ್ರಿ ಪೆಟ್ಟಿಗೆ, ಕುಕ್ಕರ್, ಹಣ ಕೊಟ್ಟು ಗೆದ್ದ ಸಿದ್ದರಾಮಯ್ಯ; ರಾಜೀನಾಮೆಗೆ ಎನ್. ರವಿಕುಮಾರ್ ಆಗ್ರಹ
ಬೆಂಗಳೂರು, ಸೆಪ್ಟೆಂಬರ್ 23: ಸಿದ್ದರಾಮಯ್ಯನವರು ನೈತಿಕತೆ ಕುರಿತು, ಡಾ. ಅಂಬೇಡ್ಕರರ ಸಂವಿಧಾನದ ಬಗ್ಗೆ ಬಹಳ ಮಾತನಾಡುತ್ತಾರೆ. ಇಸ್ತ್ರಿ ಪೆಟ್ಟಿಗೆ, ಕುಕ್ಕರ್, ಹಣ ಕೊಟ್ಟು ಸಿದ್ದರಾಮಯ್ಯ ಗೆಲುವು ಸಾಧಿಸಿದ್ದು,ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಹೇಳಿದ್ದಾರೆ.
ಈ ಕುರಿತು ಶುಕ್ರವಾರ ರಾಜ್ಯ ಚುನಾವಣಾಧಿಕಾರಿಗೆ ಮನವಿಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮತದಾರರಿಗೆ ಆಮಿಷವೊಡ್ಡಿ ಗೆದ್ದಿರುವ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುವಂತೆ ಬಿಜೆಪಿ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.

ಸಿದ್ದರಾಮಯ್ಯನವರು ರಾಜೀನಾಮೆ ನೀಡುವಂತೆ ನಿರ್ದೇಶಿಸಲು ಚುನಾವಣಾಧಿಕಾರಿಯನ್ನು ಕೋರಲಾಗಿದೆ. ಮತದಾರರಿಗೆ ಆಸೆ, ಆಮಿಷ, ಅಭಿಲಾಷೆ, ಒತ್ತಡ ವಿಧಿಸಬಾರದೆಂದು ಕಾನೂನಿದೆ. ಆದರೆ, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆಮನೆಗೆ ಕುಕ್ಕರ್, ಹಣ ಹಂಚಿದ ಬಗ್ಗೆ ಸಿದ್ದರಾಮಯ್ಯನವರ ಸುಪುತ್ರ, ಮಾಜಿ ಶಾಸಕ ಯತೀಂದ್ರ ಅವರು ಭಾಷಣದಲ್ಲಿ ತಿಳಿಸಿದ್ದಾರೆ. ಈ ವಿಡಿಯೋ ತುಣುಕು, ಸುದ್ದಿ ನಾಡಿನಾದ್ಯಂತ ಪಸರಿಸಿದೆ ಎಂದು ವಿವರಿಸಿದರು.
ಸಿದ್ದರಾಮಯ್ಯನವರು ನೈತಿಕತೆ ಕುರಿತು, ಡಾ. ಅಂಬೇಡ್ಕರರ ಸಂವಿಧಾನದ ಬಗ್ಗೆ ಬಹಳ ಮಾತನಾಡುತ್ತಾರೆ. ಅದೇ ಸಂವಿಧಾನ, ಅದೇ ಚುನಾವಣೆ ನೀತಿಸಂಹಿತೆ ಪ್ರಕಾರ ಸಿದ್ದರಾಮಯ್ಯನವರು ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಪರಿಣಾಮವಾಗಿ ಅವರು ಗೆದ್ದಿದ್ದಾಗಿ ಅವರ ಮಗನೇ ಹೇಳಿದ್ದಾರೆ. ಸಿದ್ದರಾಮಯ್ಯನವರೂ ಈ ಸಭೆಯಲ್ಲಿದ್ದರು ಎಂದು ತಿಳಿಸಿದರು.
ಜೆಡಿಎಸ್ ಎನ್‍ಡಿಎ ಭಾಗವಾಗಿರುವುದರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಆನೆಯ ಬಲ ಬಂದಂತಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಈ ಮೈತ್ರಿಕೂಟ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಮೂರೇ ತಿಂಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ. ಬೆಲೆ ಏರಿಕೆಯಿಂದ ಜನರು ಶಾಪ ಹಾಕುವಂತಾಗಿದೆ. ಗ್ಯಾರಂಟಿಗಳನ್ನು ಮನೆಮನೆಗೆ ಮುಟ್ಟಿಸದೆ ಇರುವುದು, ಕುಡಿಯುವ ನೀರಿಲ್ಲದಿದ್ದರೂ ಕಾವೇರಿ ನೀರನ್ನು ತಮಿಳುನಾಡಿನ ಹೊಲಗಳಿಗೆ ಹರಿಸುತ್ತಿರುವುದು, ಬರ ನಿರ್ವಹಣೆಯಲ್ಲಿ ವೈಫಲ್ಯ, ಮೇವಿಲ್ಲ, ನೀರಿಲ್ಲ, ಕರೆಂಟಿಲ್ಲ, ಒಂದು ಕಿಮೀ ರಸ್ತೆ ಮಾಡಿಲ್ಲ ಎಂಬುದು ರಾಜ್ಯದ ಪರಿಸ್ಥಿತಿಯಾಗಿದೆ. ಇದು ನಮ್ಮ ಗೆಲುವಿಗೆ ಪೂರಕ ಎಂದರು.
ಮೈತ್ರಿ ವಿಚಾರದಲ್ಲಿ ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ ಎಂದು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿಯವರು ಇವತ್ತು ದೆಹಲಿಯಲ್ಲಿ ನಮ್ಮ ಮುಖಂಡರನ್ನು ಭೇಟಿ ಮಾಡಿ ಎನ್‍ಡಿಎಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ದೇಶದ ಸುಭದ್ರತೆಗಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಜೆಡಿಎಸ್ ನಮ್ಮ ಜೊತೆ ಬಂದಿರುವುದು ಬಹಳ ಸಂತಸದ ಸಂಗತಿ ಎಂದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications