ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು, ಫೆಬ್ರವರಿ 10 : ಕರ್ನಾಟಕ ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಜೂನ್‌ನಲ್ಲಿ ನಾಲ್ಕು ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.
ಕರ್ನಾಟಕ ಬಿಜೆಪಿ ಘಟಕ ಎಸ್. ವಿ. ಸಂಕನೂರು, ಶಶಿಲ್ ನಮೋಶಿ ಹೆಸರನ್ನು ಅಂತಿಮಗೊಳಿಸಿದೆ. ಕೇಂದ್ರ ಚುನಾವಣಾವಣಾ ಸಮಿತಿಗೆ ಹೆಸರುಗಳನ್ನು ಕಳುಹಿಸಲಾಗಿದ್ದು, ಪರಿಶೀಲನೆ ಬಳಿಕ ಅಂತಿಮ ಘೋಷಣೆಯಾಗಲಿದೆ.
ಜೂನ್ 30ರಂದು ಆಗ್ನೇಯ ಮತ್ತು ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ಅಷ್ಟರೊಳಗೆ ಚುನಾವಣೆ ನಡೆದು ಹೊಸ ಸದಸ್ಯರು ಆಯ್ಕೆಯಾಗಬೇಕು.

ನಾಲ್ಕು ಸ್ಥಾನಗಳಿಗೆ ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬಿಜೆಪಿ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ನಾಯಕರಾದ ಪುಟ್ಟಣ್ಣ ಆಕಾಂಕ್ಷಿಯಾಗಿದ್ದಾರೆ. ಈಗಾಗಲೇ ಜೆಡಿಎಸ್ ಚಟುವಟಿಕೆಯಿಂದ ದೂರವಾಗಿರುವ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.
ಜೆಡಿಎಸ್ ಪಟ್ಟಿ
* ಆಗ್ನೇಯ ಪದವೀಧರ ಕ್ಷೇತ್ರ : ಆರ್. ಚೌಡರೆಡ್ಡಿ ತೂಪಲ್ಲಿ
* ಪಶ್ಚಿಮ ಪದವೀಧರ ಕ್ಷೇತ್ರ : ಶಿವಶಂಕರ ಕಲ್ಲೂರ
* ಈಶಾನ್ಯ ಶಿಕ್ಷಕರ ಕ್ಷೇತ್ರ : ತಿಮ್ಮಯ್ಯ ಪುರ್ಲೆ
* ಬೆಂಗಳೂರು ಶಿಕ್ಷಕರ ಕ್ಷೇತ್ರ : ಎ. ಪಿ. ರಂಗನಾಥ್












Click it and Unblock the Notifications