ಬಹುಮತ ಸಿಗುವುದು ಕಷ್ಟ: ಇಷ್ಟೇ ಸ್ಥಾನ ಬರಲಿವೆ ಎಂದು ಬಿಜೆಪಿ ವರಿಷ್ಠರಿಗೆ ತಿಳಿಸಿದ ಬೊಮ್ಮಾಯಿ- ಇಲ್ಲಿದೆ ಇನ್‌ಸೈಡ್ ಡಿಟೇಲ್ಸ್
ನವದೆಹಲಿ,
ಜನವರಿ 17: ಪ್ರಸ್ತುತ ಅಂದಾಜಿನ ಪ್ರಕಾರ, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 106 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ವರಿಷ್ಠರಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದ ವರದಿಯನ್ನು 'ಡೆಕ್ಕನ್ ಹೆರಾಲ್ಡ್' ಪ್ರಕಟಿಸಿದೆ. id="toptextpromo"> id='are-slot-1' class='oiad oi-axt oiadv'>ಮುಂಬರುವ
ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲಲಿದ್ದೇವೆ. ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಸುಧಾರಿಸಬಹುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬಿಜೆಪಿ ವರಿಷ್ಠ ನಾಯಕರಿಗೆ ಮಾಹಿತಿ ನೀಡಿದ್ದಾರೆ. id='are-slot-2' class='oiad oi-axt oiadv'>
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮುಂದೆ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಪಕ್ಷದ ನಿಲುವಿನ ಕುರಿತಾಗಿಯೂ ಈ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ವರಿಷ್ಠರು ಸೂಚಿಸಿದ್ದೇನು?
ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಪ್ರಚಾರ ತೀವ್ರಗೊಳ್ಳಬೇಕು ಎಂದು ಬೊಮ್ಮಾಯಿ ಮತ್ತು ಕಟೀಲ್‌ಗೆ ಬಿಜೆಪಿ ಮುಖಂಡರು ಸೂಚಿಸಿದ್ದಾರೆ.
'ಬಿಜೆಪಿಯು ಯಾವುದೇ ವಿಷಯಗಳ ಬಗ್ಗೆ ನಿರೂಪಣೆಗಳನ್ನು (ನೆರೆಟಿವ್) ಕಟ್ಟುತ್ತಾ ಹೋಗಬೇಕು. ಚುನಾವಣೆಗೆ ನಿರೂಪಣೆಯನ್ನು ಕಟ್ಟಲು ವಿರೋಧ ಪಕ್ಷಗಳಿಗೆ ಅವಕಾಶವನ್ನು ನೀಡಬಾರದು" ಎಂದು ಶಾ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳ ನಾಯಕರು ತಮ್ಮ ತಮ್ಮ ರಾಜ್ಯಗಳ ಕುರಿತು ಸಭೆಯ ಬಳಿಕ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೊಮ್ಮಾಯಿ ವಿಶ್ವಾಸವೇನಿದೆ?
ಇನ್ನು ಮೂರ್ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದರೂ, 106 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಗಳಿಸಲು 113 ಸ್ಥಾನಗಳ ಬೇಕಿದೆ.
ರಾಜ್ಯ ಸರ್ಕಾರ ಘೋಷಿಸಿರುವ ಕಲ್ಯಾಣ ಯೋಜನೆಗಳು ಚುನಾವಣೆಯ ಹೊಸ್ತಿಲಲ್ಲಿ ಸಹಾಯಕ್ಕೆ ಬರಬಹುದು. ನಮ್ಮ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ಸ್ವಂತವಾಗಿ ಚುನಾವಣೆ ಎದುರಿಸಿ
ಬಿಜೆಪಿ ಯಾವುದೇ ಮೈತ್ರಿ ಮಾಡಿಕೊಳ್ಳದೆ ಸ್ವಂತವಾಗಿ ಚುನಾವಣೆ ಎದುರಿಸಬೇಕು ಎಂದು ಬಿಜೆಪಿ ವರಿಷ್ಠರು ರಾಜ್ಯದ ನಾಯಕರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಕೈಗೊಂಡಿರುವ ಚಟುವಟಿಕೆಗಳನ್ನು ನಳಿನ್ ಕುಮಾರ್ ಕಟೀಲ್ ವಿವರಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚಿನ ಸಮಯ ಕಳೆಯಲು ಮತ್ತು ರ್ಯಾಲಿಗಳಲ್ಲಿ ಪಾಲ್ಗೊಳ್ಳುವಂತೆ ರಾಜ್ಯ ನಾಯಕರು ವರಿಷ್ಠರನ್ನು ಕೋರಿದ್ದಾರೆ.

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸರ್ಕಾರ
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಆಡಳಿತಾರೂಢ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ರಾಜ್ಯ ಸರ್ಕಾರದಲ್ಲಿನ ಸಚಿವರು ಹಾಗೂ ಶಾಸಕರು 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕಾರಣವೆಂಬ ಆರೋಪಗಳು ಕೇಳಬಂದಿದ್ದವು. 25 ಸಾವಿರ ಕೋಟಿ ರೂಪಾಯಿ ಬಿಲ್‌ಗಳನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ. ಈ ಬಿಲ್‌ಗಳನ್ನು ಪಾವತಿಸದೇ ಹೋದರೆ, ಫ್ರಿಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಬಹುದೆಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.












Click it and Unblock the Notifications