ಉಪ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ; ಸಮೀಕ್ಷೆ ವರದಿ

ಬೆಂಗಳೂರು, ಅಕ್ಟೋಬರ್ 14 : ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಹಿನ್ನಡೆಯಾಗಲಿದೆ. ಪಕ್ಷವೇ ನಡೆಸಿರುವ ಸಮೀಕ್ಷೆ ಪ್ರಕಾರ ಉಪ ಚುನಾವಣೆಯಲ್ಲಿ ಗೆಲ್ಲುವುದು 3 ರಿಂದ 4 ಕ್ಷೇತ್ರಗಳನ್ನು ಮಾತ್ರ.

17 ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದಾರೆ. ಈ ಪೈಕಿ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ಬಿಜೆಪಿ ಸರ್ಕಾರದ ಪಾಲಿಗೆ ಉಪ ಚುನಾವಣೆ ಮಹತ್ವದ್ದಾಗಿದೆ. ಸರ್ಕಾರವನ್ನು ಉಳಿಸಿಕೊಳ್ಳಲು ಕನಿಷ್ಠ 6 ಸ್ಥಾನ ಗೆಲ್ಲಬೇಕಿದೆ.

ಅನರ್ಹಗೊಂಡಿರುವ ಶಾಸಕರ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ. ಸ್ಪೀಕರ್ ಆದೇಶವನ್ನು ನ್ಯಾಯಾಲಯ ಎತ್ತಿ ಹಿಡಿದರೆ ಅನರ್ಹ ಶಾಸಕರಿಗೆ ಸಂಕಷ್ಟ ಎದುರಾಗಲಿದ್ದು, ಉಪ ಚುನಾವಣೆ ಎದುರಿಸಬೇಕಾಗಿದೆ.

Recommended Video

      ಯಾರು ನನ್ನನ್ನೂ ಏನು ಮಾಡೋಕೆ ಆಗೊಲ್ಲ. | Basanagouda Patil Yatnal | Oneindia Kannada

      ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಉಪ ಚುನಾವಣೆ ಸಿದ್ಧತೆಯನ್ನು ಆರಂಭಿಸಿವೆ. ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಬಿಜೆಪಿಗೆ 3 ರಿಂದ 4 ಸ್ಥಾನ ಸಿಕ್ಕರೆ ಉಳಿದ ಕ್ಷೇತ್ರಗಳು ಜೆಡಿಎಸ್-ಕಾಂಗ್ರೆಸ್ ನಡುವೆ ಹಂಚಿಕೆಯಾಗಲಿವೆ.

      ಸ್ಪೀಕರ್‌ರಿಂದ 17 ಶಾಸಕರು ಅನರ್ಹ

      ಸ್ಪೀಕರ್‌ರಿಂದ 17 ಶಾಸಕರು ಅನರ್ಹ

      ವಿಧಾನಸಭೆ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ 14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಪೈಕಿ ರಾಣೆಬೆನ್ನೂರು ಮತ್ತು ರಾಜರಾಜೇಶ್ವರಿ ನಗರ ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, 9 ರಂದು ಫಲಿತಾಂಶ ಪ್ರಕಟವಾಗಲಿದೆ.

      ಸರ್ಕಾರಕ್ಕೆ ಮಹತ್ವದ ಚುನಾವಣೆ

      ಸರ್ಕಾರಕ್ಕೆ ಮಹತ್ವದ ಚುನಾವಣೆ

      ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸರ್ಕಾರಕ್ಕೆ ಉಪ ಚುನಾವಣೆ ಮಹತ್ವದ್ದಾಗಿದೆ. 15 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕಿದೆ. ಆದರೆ, ಪಕ್ಷವೇ ನಡೆಸಿರುವ ಸಮೀಕ್ಷೆ ಪ್ರಕಾರ ಬಿಜೆಪಿಗೆ 3 ರಿಂದ 4 ಸ್ಥಾನಗಳಲ್ಲಿ ಮಾತ್ರ ಜಯಗಳಿಸಲಿದೆ.

      ಈಗಲೇ ಬಂಡಾಯದ ಬಿಸಿ

      ಈಗಲೇ ಬಂಡಾಯದ ಬಿಸಿ

      ಉಪ ಚುನಾವಣೆ ಘೋಷಣೆಯಾದ ತಕ್ಷಣವೇ ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಇದೇ ವಿಚಾರ ಚುನಾವಣೆಯಲ್ಲಿ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ. ಹೊಸಕೋಟೆ, ಹಿರೇಕೆರೂರು, ಕಾಗವಾಡ, ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಪಕ್ಷದ ನಾಯಕರಿಗೆ ಟಿಕೆಟ್ ನೀಡಬೇಕು. ಅನರ್ಹಗೊಂಡ ಶಾಸಕರಿಗೆ ಬಿಜೆಪಿ ಟಿಕೆಟ್ ಬೇಡ ಎಂಬ ಕೂಗು ಎದ್ದಿದೆ. ಇದರಿಂದಾಗಿ ಬಂಡಾಯದ ಬಿಸಿ ತಟ್ಟುವ ನಿರೀಕ್ಷೆ ಇದೆ.

      ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ತಂತ್ರ

      ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ತಂತ್ರ

      2018ರಲ್ಲಿ ಗೆದ್ದಿದ್ದ 14 ಕ್ಷೇತ್ರಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡಬಾರದು ಎಂಬುದು ಕಾಂಗ್ರೆಸ್ ಪಣವಾಗಿದೆ. ಆದ್ದರಿಂದ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಚುನಾವಣೆ ಕಾರ್ಯತಂತ್ರ ಹಣೆಯುತ್ತಿದ್ದಾರೆ. ಕನಿಷ್ಠ 10 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬ ಗುರಿಯೊಂದಿಗೆ ಚುನಾವಣಾ ಆಖಾಡಕ್ಕೆ ಇಳಿದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+