ರಾಜ್ಯಸಭೆಗೆ ಎಸ್‌.ಎಲ್.ಭೈರಪ್ಪ ಹೆಸರು ಶಿಫಾರಸು

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 22 : ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಹೆಸರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗುತ್ತದೆ. ಬಿ.ಜಯಶ್ರೀ ಅವರಿಂದ ತೆರವಾದ ಸ್ಥಾನಕ್ಕೆ ಭೈರಪ್ಪ ಹೆಸರನ್ನು ಶಿಫಾರಸು ಮಾಡಲಾಗುತ್ತದೆ.

ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, 'ಎಸ್‌.ಎಲ್.ಭೈರಪ್ಪ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡುವಂತೆ ಬಿಜೆಪಿ ಹೈಕಮಾಂಡ್ ನಾಯಕರಿಗೆ ಶಿಫಾರಸು ಮಾಡಲಾಗುತ್ತದೆ' ಎಂದು ಹೇಳಿದರು. [ಮೋದಿ ಗೆಲುವಿನಿಂದ ಬುದ್ದಿಜೀವಿಗಳಿಗೆ ದಿಗಿಲು: ಭೈರಪ್ಪ ವಾಗ್ದಾಳಿ]

sl bhyrappa

'ಬಿ.ಜಯಶ್ರೀ ಅವರಿಂದ ತೆರವಾದ ಸ್ಥಾನಕ್ಕೆ ಭೈರಪ್ಪ ಅವರ ಹೆಸರನ್ನು ಶಿಫಾರಸು ಮಾಡಲಾಗುತ್ತದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು. [ವಿಮರ್ಶೆ : ಅರಿವಿನ ಪರಿಧಿಯ ಹೊರಗೆ ಉಡಾಯಿಸುವ ವಿಮಾನ 'ಯಾನ']

17 ಮಂದಿ ನಿವೃತ್ತಿ : ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಂಗಕರ್ಮಿ ಬಿ.ಜಯಶ್ರೀ, ಬಾಲಿವುಡ್ ಗೀತ ರಚನೆಕಾರ ಜಾವೇದ್ ಅಖ್ತರ್ ಸೇರಿದಂತೆ 17 ರಾಜ್ಯಸಭಾ ಸದಸ್ಯರ ಅವಧಿ ಮಾರ್ಚ್ 16ರಂದು ಮುಕ್ತಾಯವಾಗಿದೆ. ನಿವೃತ್ತಿಯಿಂದ ತೆರವಾದ ಸ್ಥಾನಗಳಿಗೆ ನಾಮನಿರ್ದೇಶನ ನಡೆಯಬೇಕಾಗಿದೆ.

ಏ.4ರಂದು ಬಿಜೆಪಿ ಪ್ರತಿಭಟನೆ : 'ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿ ಏ.4ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಪ್ರಹ್ಲಾದ್ ಜೋಶಿ ಹೇಳಿದರು.

ಮಾರ್ಚ್ 13ರ ಭಾನುವಾರ ಸಂಜೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶ್ವಹಿಂದೂ ಪರಿಷತ್, ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ರಾಜು ಹತ್ಯೆ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ವೇಳೆ ಹಿಂಸಾಚಾರ ನಡೆದಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP president Prahlad Joshi said, party will nominate Saraswathi Samman recipient writer S.L. Bhyrappa name for Rajya Sabha from state.
Please Wait while comments are loading...