ಡಿಕೆಶಿ, ಜಾರಕಿಹೊಳಿ ರಾಜೀನಾಮೆಗಾಗಿ ಶುಕ್ರವಾರದಿಂದ ಬಿಜೆಪಿ ಹೋರಾಟ
ಬೆಂಗಳೂರು, ಅ.17 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಜವಳಿ ಖಾತೆ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಶುಕ್ರವಾರದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಸಚಿವರು ರಾಜೀನಾಮೆ ನೀಡುವ ತನಕ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಕರ್ನಾಕಟ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ. 'ಆದಾಯ ತೆರಿಗೆ ಇಲಾಖೆ ದಾಳಿ ನಡೆದ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರದಿಂದ ಪ್ರತಿಭಟನೆ ನಡೆಸುವುದಾಗಿ' ಯಡಿಯೂರಪ್ಪ ಹೇಳಿದರು.

ಆಗಸ್ಟ್ 18ರ ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಫ್ರೀಡಂಪಾರ್ಕ್‌ನಿಂದ ವಿಧಾನಸೌಧದ ತನಕ ಸುಮಾರು ಇಪ್ಪತೈದು ಸಾವಿರ ಕಾರ್ಯಕರ್ತರು ಜಾಥಾ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ ಶುಕ್ರವಾರ ಪ್ರತಿಭಟನೆ ನಡೆಯಲಿದೆ. ಇಬ್ಬರು ಸಚಿವರು ರಾಜೀನಾಮೆ ನೀಡುವ ತನಕ ಪ್ರತಿಭಟನೆ ಮುಂದುವರೆಸಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದಾಗ ಐಟಿ ದಾಳಿಗೆ ಒಳಗಾದ ಸಚಿವರ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು.












Click it and Unblock the Notifications