ಕಾಂಗ್ರೆಸ್‌ ಸಭೆಯಲ್ಲಿ ಶಾಸಕ ಎಸ್‌ ಟಿ ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಭಾಗಿ: ವಿಜಯೇಂದ್ರ ಹೇಳಿದ್ದೇನು?

ಬೆಳಗಾವಿ, ಡಿಸೆಂಬರ್‌ 15: ಬಿಜೆಪಿ ಶಾಸಕರಾದ ಎಸ್‌ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರು ಬುಧವಾರ ತಡರಾತ್ರಿ ಕಾಂಗ್ರೆಸ್ ಮುಖಂಡರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿದ್ದರು. ಬಿಜೆಪಿಯಿಂದ ದೂರ ಉಳಿದಿರುವ ಈ ಇಬ್ಬರು ಮಾಜಿ ಸಚಿವರು ಕಾಂಗ್ರೆಸ್‌ ಪಕ್ಷ ಸೇರುವ ಸಾಧ್ಯತೆ ದಟ್ಟವಾಗಿದೆ.

ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾತನಾಡಿ, ಈ ಬೆಳವಣಿಗೆಯನ್ನ ಗಂಭೀರ ವಿಷಯ ಎಂದು ಬಣ್ಣಿಸಿದ್ದು, ಸೋಮಶೇಖರ್ ಮತ್ತು ಹೆಬ್ಬಾರ್ ಅವರಿಂದ ವಿವರಣೆ ಕೇಳುವುದಾಗಿ ಹೇಳಿದ್ದಾರೆ.

BJP to seek explanation from MLAs S T Somashekar, Hebbar for attending Congress dinner

ಬುಧವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೋಜನವನ್ನು ಏರ್ಪಡಿಸಿದ್ದರು. ಸೋಮಶೇಖರ್ ಮತ್ತು ಹೆಬ್ಬಾರ್ ಭೋಜನಕ್ಕೆ ಬಂದರು. ಬಿಜೆಪಿ ಪಕ್ಷದ ಶಾಸಕರಾದರೂ ಇದೀಗ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿರುವ ಎಂಎಲ್ ಸಿ ಎಚ್ .ವಿಶ್ವನಾಥ್ ಕೂಡ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಇಂದು ಬೆಳಗ್ಗೆ ನನಗೆ ಅದರ ಬಗ್ಗೆ ಮಾಹಿತಿ ಸಿಕ್ಕಿತು. ಇದು ಗಂಭೀರ ವಿಚಾರ. ನಾನು ಇಂದು ಅವರೊಂದಿಗೆ ಮಾತನಾಡುತ್ತೇನೆ. ಅವರ ಉದ್ದೇಶವೇನು ಎಂದು ಕೇಳುತ್ತೇನೆ ಎಂದು ವಿಜಯೇಂದ್ರ ಹೇಳಿದರು.

ಸೋಮಶೇಖರ್ ಮತ್ತು ಹೆಬ್ಬಾರ್ ಅವರು 2019 ರವರೆಗೆ ಕಾಂಗ್ರೆಸ್‌ನಲ್ಲಿದ್ದರು ಮತ್ತು ಅವರು ಪಕ್ಷಾಂತರಗೊಂಡು ಬಿಜೆಪಿಗೆ ಸೇರಿ ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾದರು. ಯಶವಂತಪುರ ಶಾಸಕ ಸೋಮಶೇಖರ್ ಮತ್ತು ಯಲ್ಲಾಪುರ ಪ್ರತಿನಿಧಿಸುತ್ತಿರುವ ಹೆಬ್ಬಾರ್ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ರುಚಿ ಕಂಡಾಗಿನಿಂದ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದಾರೆ.

BJP to seek explanation from MLAs S T Somashekar, Hebbar for attending Congress dinner

ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಮಾತನಾಡಿ, ಸೋಮಶೇಖರ್ ಅವರು ಊಟಕ್ಕೆ ಆಹ್ವಾನಿಸಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಅಲ್ಲಿಗೆ ಹೋಗಿದ್ದಾರೆ ಎಂದು ಹೇಳಿದರು. ಅವರು ಪಕ್ಷದ ಶಿಸ್ತನ್ನು ಉಲ್ಲಂಘಿಸಿಲ್ಲ. ಬುಧವಾರ ಸಂಜೆ ಬಿಜೆಪಿಯ ಪ್ರತಿಭಟನೆಯಲ್ಲಿ ಸೋಮಶೇಖರ್ ಭಾಗವಹಿಸಿದ್ದರು.

ಸೋಮಶೇಖರ್ ಮತ್ತು ಹೆಬ್ಬಾರ್ ಸಿಎಲ್‌ಪಿ ಸಭೆಗೆ ಹಾಜರಾಗಿಲ್ಲ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೇರೆ ಪಕ್ಷಗಳ ಸದಸ್ಯರಿಗೂ ಆಹ್ವಾನ ನೀಡಿ ಪ್ರತ್ಯೇಕ ಔತಣಕೂಟ ಏರ್ಪಡಿಸಿದ್ದೆ. ಸೋಮಶೇಖರ್, ಹೆಬ್ಬಾರ್, ವಿಶ್ವನಾಥ್ ಮುಂತಾದ ಹತ್ತು ಜನ (ಬೇರೆ ಪಕ್ಷಗಳಿಂದ) ಬಂದಿದ್ದರು. ಅವರು ಕಾಂಗ್ರೆಸ್ ಶಾಸಕರಲ್ಲದ ಕಾರಣ ಅವರು ಸಿಎಲ್‌ಪಿ ಸಭೆಗೆ ಹಾಜರಾಗಲಿಲ್ಲ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸಿಎಲ್‌ಪಿ ಸಭೆಯಲ್ಲಿ ಲೋಕಸಭೆ ಚುನಾವಣೆ ಕುರಿತು ಚರ್ಚೆ

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುವಂತೆ ಸೂಚಿಸಲಾಗಿದೆ ಎನ್ನಲಾಗಿದೆ. ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಎತ್ತಿ ಹಿಡಿಯಲು ಪ್ರತಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಕಾಂಗ್ರೆಸ್ ಯೋಜಿಸುತ್ತಿದೆ. ಮುಂದಿನ ಹಣಕಾಸು ವರ್ಷದಲ್ಲಿ ಪ್ರತಿ ಕ್ಷೇತ್ರಕ್ಕೆ 25 ಕೋಟಿ ರೂ. ವಿಶೇಷ ಅನುದಾನ ಒದಗಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಧನ್ಯವಾದ ಅರ್ಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+