ಬಿಜೆಪಿ ಜನರನ್ನು ನೈಜ ಸಮಸ್ಯೆಗಳಿಂದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದೆ: ಪ್ರಿಯಾಂಕಾ ಗಾಂಧಿ
ಬೆಳಗಾವಿ, ಏಪ್ರಿಲ್. 30: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷವು ಸಾರ್ವಜನಿಕರಿಗೆ ದ್ರೋಹ ಮಾಡಿದೆ ಮತ್ತು ಪಕ್ಷವು ಮುಖ್ಯ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
"ಬಿಜೆಪಿ ಎಲ್ಲಾ ಹಂತಗಳಲ್ಲಿ ಸಾರ್ವಜನಿಕರಿಗೆ ದ್ರೋಹ ಮಾಡಿದೆ. ಪಕ್ಷವು ನಿರುದ್ಯೋಗ ಕಡಿಮೆ ಮಾಡಲು ಪ್ರಯತ್ನಿಸಿಲ್ಲ. ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಇತ್ಯಾದಿ ಪ್ರಮುಖ ಸಮಸ್ಯೆಗಳಿಂದ ಸಾರ್ವಜನಿಕರನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಮುಂಬರುವ ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಎತ್ತಿರುವ ಸಮಸ್ಯೆಗಳನ್ನು ಮತ್ತೆ ಎತ್ತಿ ಹಿಡಿದ ಪ್ರಿಯಾಂಕಾ ಗಾಂಧಿ, ಪಕ್ಷವು ಸಾರ್ವಜನಿಕರನ್ನು ನೈಜ ಸಮಸ್ಯೆಗಳಿಂದ ಬೇರೆಡೆಗೆ ತಿರುಗಿಸುವುದಿಲ್ಲ ಎಂದಿದ್ದಾರೆ. ಈ ಚುನಾವಣೆಯು ಸಾರ್ವಜನಿಕರು ತಮ್ಮ ನಾಯಕನನ್ನು ಆಯ್ಕೆ ಮಾಡುವುದಕ್ಕಾಗಿ ಆಗಿದೆ. ಬಿಜೆಪಿ ಲೂಟಿ ಮಾಡುತ್ತದೆ ಎಂದು ಜನರಿಗೆ ಚೆನ್ನಾಗಿ ತಿಳಿದಿದೆ ಮತ್ತು ಜನರು ಈಗ ಬದಲಾವಣೆಯನ್ನು ಬಯಸುತ್ತಾರೆ" ಎಂದು ಕಾಂಗ್ರೆಸ್ ನಾಯಕಿ ತಿಳಿಸಿದ್ದಾರೆ.
ಕಾಂಗ್ರೆಸ್ ಈ ಹಿಂದೆ ಕೊಟ್ಟ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿದೆ ಮತ್ತು ಜನರಿಗಾಗಿ ಕೆಲಸ ಮಾಡಿದೆ. ಬಿಜೆಪಿಯು ಸುಳ್ಳು ಭರವಸೆಗಳನ್ನು ನೀಡುತ್ತದೆ ಮತ್ತು ಎಂದಿಗೂ ಈಡೇರಿಸುವುದಿಲ್ಲ. ಆದರೆ ಕಾಂಗ್ರೆಸ್ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಕಾಂಗ್ರೆಸ್ ಯಾವಾಗಲೂ ಜನರಿಗಾಗಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದೆ. ಜನರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ" ಎಂದು ಹೇಳಿದೆ.
"ನೀವು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಕೆಲಸವನ್ನು ನೋಡಿದ್ದೀರಿ. ನಿಮ್ಮೆಲ್ಲರಿಗೂ ನಾವು ಸಾರ್ವಜನಿಕರಿಗಾಗಿ ಏನಾದರೂ ಮಾಡುತ್ತೇವೆ ಎಂಬ ವಿಶ್ವಾಸವಿದೆ" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಮೊನ್ನೆ ಬುಧವಾರ, ಚಿತ್ರದುರ್ಗದಲ್ಲಿ ರೋಡ್ ಶೋ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಬಿಜೆಪಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು ಮತ್ತು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದ್ದು, ಇಂತಹ ಆಯೋಗವನ್ನು ಬೇರು ಸಹಿತ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.
"40 ಪರ್ಸೆಂಟ್ ಸರ್ಕಾರ ಯಾರದು..? ಎಲ್ಲ ಹಗರಣಗಳನ್ನು ಮಾಡಿದ್ದು ಯಾರು..? ಪಿಎಸ್‌ಐ ಹಗರಣ ಮಾಡಿದ್ದು ಯಾರು..? ಗುತ್ತಿಗೆದಾರರಿಗೆ ಕಿರುಕುಳ ನೀಡಿದವರು ಯಾರು..? ಹುದ್ದೆಗಳಿಗೆ ಕಮಿಷನ್ ಕೇಳುವವರು ಯಾರು..? ಇಲ್ಲಿಂದ ಯಾರನ್ನು ಕಿತ್ತೊಗೆಯಬೇಕು..?" ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರೋಡ್‌ಶೋನಲ್ಲಿ ಘೋಷಣೆಗಳನ್ನು ಕೂಗಿದ ಪ್ರಿಯಾಂಕಾ ಗಾಂಧಿ, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರು ತಮ್ಮ ಸ್ವಾಭಿಮಾನ ಮತ್ತು ಭವಿಷ್ಯಕ್ಕಾಗಿ ಮತ ಚಲಾಯಿಸುವಂತೆ ಕೇಳಿಕೊಂಡರು. "ಈ ಚುನಾವಣೆಯಲ್ಲಿ ನಿಮ್ಮ ಭವಿಷ್ಯ, ನಿಮ್ಮ ಮಕ್ಕಳು, ನಿಮ್ಮ ರಾಜ್ಯ ಮತ್ತು ನಿಮ್ಮ ಹೆಮ್ಮೆಗಾಗಿ ಮತ ಚಲಾಯಿಸಿ" ಎಂದು ಒತ್ತಾಯಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications