• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೋಗಿಲೆಯ ಬುದ್ಧಿ ಏಕೆ?

|

ಬೆಂಗಳೂರು, ಅಕ್ಟೋಬರ್ 29: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಚರ್ಚೆ ಜೋರಾಗಿದೆ. ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು 'ಸಿದ್ದರಾಮಯ್ಯಗೆ ಕೋಗಿಲೆಯ ಬುದ್ಧಿ ಏಕೆ?' ಎಂದು ಪ್ರಶ್ನಿಸಿದೆ.

ಕರ್ನಾಟಕ ಬಿಜೆಪಿಯ ಗುರುವಾರ ಟ್ವಿಟರ್ ಸಿದ್ದರಾಮಯ್ಯಗೆ ಪ್ರಶ್ನೆಯೊಂದನ್ನು ಮಾಡಿದೆ. ಪ್ರತಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯೆಯನ್ನು ನೀಡಿದ್ದು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರಶ್ನೆ ಮಾಡಿದೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ: ಜಮೀರ್ ಬ್ಯಾಟಿಂಗ್

"ದೇವೇಗೌಡರು ಬೆಳೆಸಿದ ಜೆಡಿಎಸ್‌ನಲ್ಲಿ ಸ್ಥಾನಮಾನ ಅನುಭವಿಸಿದಿರಿ, ಪರಮೇಶ್ವರ್‌ ಬೆಳೆಸಿದ ಕಾಂಗ್ರೆಸ್‌ನಲ್ಲಿ‌ ಮುಖ್ಯಮಂತ್ರಿಯಾದಿರಿ, ಡಿಕೆಶಿ ಕಟ್ಟುತ್ತಿರುವ ಪಕ್ಷದಲ್ಲಿ ಮತ್ತೆ ಸಿಎಂ ಕನಸು ಕಾಣುತ್ತಿದ್ದೀರಿ, ಕಾಗೆ ಕಟ್ಟಿದ ಗೂಡಲ್ಲಿ ಮೊಟ್ಟೆ ಇಡಲು ಹವಣಿಸುವ ಕೋಗಿಲೆಯ ಬುದ್ಧಿ ಏಕೆ?" ಮಾನ್ಯ ಸಿದ್ದರಾಮಯ್ಯ ಅವರೇ ಎಂದು ಕೇಳಿದೆ.

ಬುಧವಾರ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರು, "ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ?" ಎಂದು ಕೇಳಿದ್ದರು.

ಲಸಿಕೆ ಉಚಿತವಾಗಿ ಕೊಡಿಸುವ 'ಧಮ್' ಇದೆಯೇ? ನಳಿನ್; ಸಿದ್ದರಾಮಯ್ಯ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಶಾಸಕರ ಹೇಳಿಕೆಗಳು ಸಂಚಲನ ಉಂಟು ಮಾಡಿವೆ.

English summary
Karnataka BJP tweet about former CM and Opposition leader Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X