ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ಹೀನ ಪರಿಸ್ಥಿತಿಗೆ ಕಾರಣ ಬಿಚ್ಚಿಟ್ಟ ಬಿಜೆಪಿ ಟ್ವೀಟ್!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 02; "ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದು ಹಣ ಸಂಗ್ರಹಕ್ಕೆ ಮಾತ್ರ. ಹಣ ವಸೂಲಿಗಾಗಿ ಅವರು ಆಗಾಗ್ಗೆ ರಾಜ್ಯಕ್ಕೆ ಬರುತ್ತಿದ್ದಾರೆ" ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದರು.

ಕರ್ನಾಟಕ ಬಿಜೆಪಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದೆ. "ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ, ಇದು ಅವರ ಪಕ್ಷದ ಸಂಸ್ಕೃತಿಯೂ ಹೌದು" ಎಂದು ಟ್ವೀಟ್‌ ಮೂಲಕ ತಿರುಗೇಟು ಕೊಟ್ಟಿದೆ.

 ಅರುಣ್ ಸಿಂಗ್ ಹಣ ವಸೂಲಿಗೆ ರಾಜ್ಯಕ್ಕೆ ಬಂದಿದ್ದಾರೆ: ಎಚ್‌ಡಿಕೆ ಆರೋಪ ಅರುಣ್ ಸಿಂಗ್ ಹಣ ವಸೂಲಿಗೆ ರಾಜ್ಯಕ್ಕೆ ಬಂದಿದ್ದಾರೆ: ಎಚ್‌ಡಿಕೆ ಆರೋಪ

ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದ ಅರುಣ್ ಸಿಂಗ್, "ಹಿರಿಯರಾದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಅವರ ಮಗ ಇತರರಿಗೆ ಗೌರವ ಕೊಡುವುದನ್ನು, ಯಾವ ರೀತಿ ಮಾತನಾಡಬೇಕು ಎಂಬುದನ್ನು ತಂದೆಯನ್ನು ನೋಡಿ ಕಲಿಯಲಿ" ಎಂದು ಪ್ರತಿಕ್ರಿಯಿಸಿದ್ದರು.

 ಮೇಕೆದಾಟು, ಕಾವೇರಿ‌ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡಲು ಬಿಜೆಪಿ ಕಟಿಬದ್ಧ: ಅರುಣ್ ಸಿಂಗ್ ಮೇಕೆದಾಟು, ಕಾವೇರಿ‌ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡಲು ಬಿಜೆಪಿ ಕಟಿಬದ್ಧ: ಅರುಣ್ ಸಿಂಗ್

"ರಾಜಕೀಯ ಪಕ್ಷಗಳ ಹಿರಿಯ ನಾಯಕರ ವಿರುದ್ಧ ಆತುರದ ಹೇಳಿಕೆಗಳನ್ನು ನೀಡುವುದನ್ನು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಿಲ್ಲಿಸಬೇಕು" ಎಂದು ಅರುಣ್ ಸಿಂಗ್ ಸಲಹೆ ನೀಡಿದ್ದರು.

ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲ: ಅರುಣ್ ಸಿಂಗ್ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲ: ಅರುಣ್ ಸಿಂಗ್

ಜೆಡಿಎಸ್‌ ಪಕ್ಷದವರಿಗೆ ನಾಲಿಗೆ ಸರಿ ಇದ್ದಿದ್ದರೆ

"ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ, ಇದು ಅವರ ಪಕ್ಷದ ಸಂಸ್ಕೃತಿಯೂ ಹೌದು. ಹಳದಿ ರೋಗವಿದ್ದವರಿಗೆ ನೋಡಿದ್ದೆಲ್ಲಾ ಹಳದಿಯಾಗಿ ಕಾಣುವುದರಲ್ಲಿ ಯಾವುದೇ ಅಚ್ಚರಿಯಿಲ್ಲ. ಜೆಡಿಎಸ್‌ ಪಕ್ಷದವರಿಗೆ ನಾಲಿಗೆ ಸರಿ ಇದ್ದಿದ್ದರೆ ಇಂದು ಹೀನ ಪರಿಸ್ಥಿತಿ ಬರುತ್ತಿರಲಿಲ್ಲ" ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಎಚ್. ಡಿ. ಕುಮಾರಸ್ವಾಮಿಗೆ ತಿರುಗೇಟು

ಕರ್ನಾಟಕ ಬಿಜೆಪಿ #NalinSpeaks ಎಂಬ ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದು, "ಬಿಜೆಪಿ ಉಸ್ತುವಾರಿಗಳು ದುಡ್ಡು ವಸೂಲಿಗಾಗಿ ರಾಜ್ಯಕ್ಕೆ ಬರುತ್ತಾರೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಹಿಂದೆ ಕುಮಾರಸ್ವಾಮಿ ಅವರ ಅನುಭವವಿದೆ. ಜೆಡಿಎಸ್ ಪಕ್ಷದವರು ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ" ಎಂದು ಆರೋಪಿಸಿದೆ.

ಎಚ್. ಡಿ. ಕುಮಾರಸ್ವಾಮಿ ಹೇಳಿದ್ದೇನು?

ಎಚ್. ಡಿ. ಕುಮಾರಸ್ವಾಮಿ ಹೇಳಿದ್ದೇನು?

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಬಗ್ಗೆ ಮಾತನಾಡಿದ್ದ ಕುಮಾರಸ್ವಾಮಿ, "ಅವರು ಬಂದು ಕೇವಲ ಸೂಟ್‌ಕೇಸ್ ತೆಗೆದುಕೊಂಡರೆ ಸಾಲದು. ರಾಜ್ಯದ ಯೋಜನೆಗಳ ಕುರಿತು ಮಾತನಾಡಬೇಕು. ಜೆಡಿಎಸ್‌ ಅನ್ನು ಮುಳುಗುವ ಹಡಗು ಎಂದು ಲಘುವಾಗಿ ಹೇಳಿದ್ದಾರೆ. ಕೇಂದ್ರದಿಂದ ಬರುವ ಇಂತಹ ದಲ್ಲಾಳಿಗಳಿಗೆ ರಾಜ್ಯದ ನಾಯಕರು ವಾಸ್ತವ ಸ್ಥಿತಿಯನ್ನು ಮನದಟ್ಟು ಮಾಡಿಸಬೇಕು" ಎಂದು ಕುಮಾರಸ್ವಾಮಿ ಮೈಸೂರಿನಲ್ಲಿ ವಾಗ್ದಾಳಿ ನಡೆಸಿದ್ದರು.

ಜೆಡಿಎಸ್‌ ಬಗ್ಗೆ ಏನು ಗೊತ್ತು?

ಜೆಡಿಎಸ್‌ ಬಗ್ಗೆ ಏನು ಗೊತ್ತು?

"ಜೆಡಿಎಸ್ ಪಕ್ಷದ ಬಗ್ಗೆ ಯಾರೊಬ್ಬರೂ ಹಗುರವಾಗಿ ಮಾತನಾಡಬಾರದು. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದಾದ ಮೇಲೆ ಮೇಯರ್ ಚುನಾವಣೆ ವೇಳೆ ಶಾಸಕ ಸಾ. ರಾ. ಮಹೇಶ್ ಕಚೇರಿಗೆ ಬಿಜೆಪಿ ನಾಯಕರು ಏಕೆ ಬಂದಿದ್ದರು?. ನಾವು ಬೆಂಬಲ ಕೋರಿ ಅವರ ಬಳಿಗೆ ಹೋಗಿಲ್ಲ" ಎಂದು ಎಚ್. ಡಿ. ಕುಮಾರಸ್ವಾಮಿ ಅರುಣ್ ಸಿಂಗ್ ವಿರುದ್ಧ ಟೀಕೆ ಮಾಡಿದ್ದರು.

ಕಾಂಗ್ರೆಸ್ ವಿರುದ್ಧ ವೂ ಆಕ್ರೋಶ

ಕರ್ನಾಟಕ ಬಿಜೆಪಿ #NalinSpeaks ಎಂಬ ಹ್ಯಾಷ್ ಟ್ಯಾಗ್ ಅಡಿ ಕಾಂಗ್ರೆಸ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದೆ. "ಕಾಂಗ್ರೆಸ್‌ ಪಕ್ಷದ ಒಳ ಬೇಗುದಿಯಿಂದಾಗಿ ಇತಿಹಾಸದ ಪುಟ ಸೇರುತ್ತಿದೆ. ಕಾಂಗ್ರೆಸ್‌ ತನ್ನ ಕಾರ್ಯಕರ್ತರ ವಿಶ್ವಾಸ ಕಳೆದುಕೊಂಡಿದೆ. ವರ್ಷ ಕಳೆದರೂ ರಾಜ್ಯ ಪದಾಧಿಕಾರಿಗಳ ನೇಮಕ ಮಾಡಲು ಸಾಧ್ಯವಾಗಿಲ್ಲ. ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದವರು ದೇಶ, ರಾಜ್ಯವನ್ನು ಹೇಗೆ ಮುನ್ನಡೆಸಲು ಸಾಧ್ಯ?" ಎಂದು ಕೇಳಿದೆ.

"ಸಿದ್ದರಾಮಯ್ಯ, ಡಿಕೆಶಿ, ಖರ್ಗೆ, ಈಶ್ವರ್‌ ಖಂಡ್ರೆ ಹೀಗೆ ಅನೇಕ ನಾಯಕರ ತೆಕ್ಕೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರು ಸಿಲುಕಿದ್ದಾರೆ. ಅಸ್ತಿತ್ವಕ್ಕಾಗಿ ಹೆಣಗಾಡುವ ಪರಿಸ್ಥಿತಿ ತಂದುಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವದ ಕೊರತೆಯಿದೆ" ಎಂದು ಟ್ವೀಟ್‌ ಮಾಡಿದೆ.

Recommended Video

ಗಾಯದಿಂದ ಗುಣಮುಖರಾಗಿ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದ ಆಲ್-ರೌಂಡರ್ | Oneindia Kannada

English summary
Karnataka BJP tweet against former chief minister H. D. Kumaraswamy for his comment on BJP Karnataka in-charge Arun Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X