ಸಿದ್ದರಾಮಯ್ಯ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ!

ಬೆಂಗಳೂರು, ಆಗಸ್ಟ್‌ 28; ಒಂದು ಕಡೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಮೊದಲ 100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿಗಳ ಈಡೇರಿಕೆಯ ಜೊತೆಗೆ ಅಭಿವೃದ್ಧಿಯ ರಥವನ್ನು ಮುನ್ನಡೆಸುತ್ತಿರುವ ನಮ್ಮೊಂದಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಜನರಿಗೆ ಮನವಿ ಮಾಡಿದ್ದಾರೆ.

ಮತ್ತೊಂದು ಕಡೆ ರಾಜ್ಯದ ಪ್ರತಿಪಕ್ಷ ಬಿಜೆಪಿ ' ಸಿದ್ದರಾಮಯ್ಯ ಅವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ'‌ ಎಂದು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.

BJP Tweet On Siddaramaiah And Yathindra Siddaramaiah

ಸೋಮವಾರ ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಯತೀಂದ್ರ ಸಿದ್ದರಾಮಯ್ಯರನ್ನು ಶ್ಯಾಡೋ ಸಿಎಂ ಎಂದು ಕರೆದಿದೆ. ಬಿಜೆಪಿ ಟ್ವೀಟ್‌ಗೆ ಪ್ರಮುಖ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಸದ್ದಿಲ್ಲದೇ ಸಾಂವಿಧಾನಿಕ ಹುದ್ದೆ ನೀಡಲಾಗಿದೆ ಎಂಬ ವಿಚಾರ.

ಬಿಜೆಪಿ ಟ್ವೀಟ್ ವಿವರಗಳು

ಬಿಜೆಪಿ ತನ್ನ ಟ್ವೀಟ್‌ನಲ್ಲಿ, 'ಸಿಎಂ ಸಿದ್ದರಾಮಯ್ಯ ರವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಡಾ. ಯತೀಂದ್ರರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ!' ಎಂದು ಟೀಕೆ ಮಾಡಿದೆ.

'ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು!' ಎಂದು ಬಿಜೆಪಿ ವಾಗ್ದಾಳಿಯನ್ನು ನಡೆಸಿದೆ.

ಸಿಎಂ ಪುತ್ರನಿಗೆ ಸಾಂವಿಧಾನಿಕ ಹುದ್ದೆ; ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರದ ಮಾಜಿ ಶಾಸಕರು. ಈ ಬಾರಿಯ ಚುನಾವಣೆಯಲ್ಲಿ ವರುಣ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟ ಅವರು ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿದ್ದವು. ಅವರನ್ನು ಶ್ಯಾಡೋ ಸಿಎಂ ಎಂದು ಕರೆದು ವಾಗ್ದಾಳಿ ನಡೆಸುತ್ತಿದ್ದವು.

ಈಗ ಡಾ. ಯತೀಂದ್ರ ಸಿದ್ದರಾಮಯ್ಯಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ ಎಂಬುದು ಆರೋಪವಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಡಾ. ಯತೀಂದ್ರ ಸಿದ್ದರಾಮಯ್ಯರನ್ನು ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ಈ ಕುರಿತ ಮಾಹಿತಿ ಭಾನುವಾರ ಬಹಿರಂಗವಾಗಿತ್ತು.

ಭಾನುವಾರ ಮೈಸೂರಿನಲ್ಲಿ ಮಾತನಾಡಿದ್ದ ಡಾ. ಯತೀಂದ್ರ ಸಿದ್ದರಾಮಯ್ಯ, "ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ಆದೇಶವಾಗಿದ್ದು, ವರುಣಾ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸುತ್ತೇನೆ. ಆದೇಶ ಪತ್ರವನ್ನು ನಿಮಗೆ ಕಳುಹಿಸಿಕೊಡುತ್ತೇನೆ" ಎಂದು ಹೇಳಿದ್ದರು.

ಡಾ. ಯತೀಂದ್ರ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಾರೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದವು. ವರುಣ ಕ್ಷೇತ್ರದಲ್ಲಿ ಅವರೇ ಶಾಸಕರಂತೆ ಕೆಲಸ ಮಾಡುತ್ತಿದ್ದಾರೆ, ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದ್ದವು.

ಈಗ ಡಾ. ಯತೀಂದ್ರ ಸಿದ್ದರಾಮಯ್ಯಗೆ ಸಾಂವಿಧಾನಿಕ ಹುದ್ದೆಯನ್ನು ನೀಡಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಬಿಜೆಪಿ ಈ ಕುರಿತು ಟ್ವೀಟ್ ಮಾಡಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದ ಬಿಜೆಪಿ, 'ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ ಅವರು, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024 ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ' ಎಂದು ಸಹ ಆರೋಪ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+