ಬಿಜೆಪಿ ಟ್ವೀಟ್; ಸುಮ್ಮನೆ ರೈಲು ಬಿಟ್ಟರೆ ಸಾಕೆ ಸಿದ್ದರಾಮಯ್ಯ?
ಬೆಂಗಳೂರು, ಆಗಸ್ಟ್ 19; ರೈತರ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರವನ್ನು ಬರೆದಿದ್ದರು. ಈಗ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ ರೈತ ಪರ ಕಾಳಜಿ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದೆ.
ಗುರುವಾರ ಕರ್ನಾಟಕ ಬಿಜೆಪಿ #ಬುರುಡೆರಾಮಯ್ಯ ಹ್ಯಾಷ್ ಟ್ಯಾಗ್ ಬಳಕೆ ಮಾಡಿಕೊಂಡು ಸರಣಿ ಟ್ವೀಟ್‌ಗಳನ್ನು ಮಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಪ್ರೊ. ನಂಜುಂಡಸ್ವಾಮಿ ಅವರ ಶಿಷ್ಯ ಎಂದು ಸುಮ್ಮನೆ ರೈಲು ಬಿಟ್ಟರೆ ಸಾಕೆ? ಸಿದ್ದರಾಮಯ್ಯ? ಎಂದು ಪ್ರಶ್ನೆ ಮಾಡಿದೆ.
ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಕೋವಿಡ್ ಮತ್ತು ಲಾಕ್‌ಡೌನ್ ಕಾರಣದಿಂದ ಮೊದಲೇ ವಿಪರೀತ ಸಂಕಷ್ಟದಲ್ಲಿದ್ದ ವ್ಯಾಪಾರಿಗಳ, ರೈತರು, ಕೂಲಿ ಕಾರ್ಮಿಕರ ಬದುಕು ಈಗ ಸಂಪೂರ್ಣ ನೆಲಕಚ್ಚಿದೆ. ಇವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವ ಜತೆಗೆ ಆರ್ಥಿಕ ನೆರವು ನೀಡಿ ಈ ಸಣ್ಣ ಪುಟ್ಟ ವ್ಯಾಪಾರಿ ಸಮುದಾಯ, ರೈತರು, ಬೆಳೆಗಾರರು, ಕಾರ್ಮಿಕ ಸಮುದಾಯ ಮತ್ತೆ ತಲೆ ಎತ್ತಿ ನಿಲ್ಲುವಂತೆ ಮಾಡಬೇಕಿದೆ ಎಂದು ಆಗ್ರಹಿಸಿದ್ದರು.
ಬಿಜೆಪಿ ಸಿದ್ದರಾಮಯ್ಯಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು, 'ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಕುಡುಕನ ಪಟ್ಟಕಟ್ಟಿದ ಮಹಾನುಭಾವರು ನೀವಲ್ಲವೇ?' ಎಂಬ ಪ್ರಶ್ನೆಯನ್ನು ಮುಂದಿಟ್ಟಿದೆ. ಕರ್ನಾಟಕದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಾಯಕರಲ್ಲಿ ಸಿದ್ದರಾಮಯ್ಯ ಸಹ ಒಬ್ಬರು ಬಿಜೆಪಿ ಟ್ವೀಟ್‌ಗಳಿಗೆ ಹೇಗೆ ಉತ್ತರ ಕೊಡುತ್ತಾರೆ? ಎಂದು ಕಾದು ನೋಡಬೇಕಿದೆ.
|
ಸುಮ್ಮನೆ ರೈಲು ಬಿಟ್ಟರೆ ಸಾಕೆ?
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ದೇಶದ್ರೋಹಿಗಳ ವಿರುದ್ಧ ದಾಖಲಾದ ಪ್ರಕರಣಗಳನ್ನು ಸರಾಗವಾಗಿ ಹಿಂಪಡೆದಿದ್ದರು. ಆದರೆ, ರೈತರ ವಿರುದ್ಧ ದಾಖಲಾದ ಪ್ರಕರಣವನ್ನು ಅಭಿಯೋಜನೆಯಿಂದ ಹಿಂದಕ್ಕೆ ಪಡೆಯಲು ಕಾಯ್ದೆಯ ನೆಪವೊಡ್ಡಿದರು. ಪ್ರೊ. ನಂಜುಂಡಸ್ವಾಮಿ ಅವರ ಶಿಷ್ಯ ಎಂದು ಸುಮ್ಮನೆ ರೈಲು ಬಿಟ್ಟರೆ ಸಾಕೆ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
|
ಕುಡುಕನ ಪಟ್ಟಕಟ್ಟಿದ ಮಹಾನುಭಾವ
ರೈತರು ಯಾರು, ದಲ್ಲಾಳಿಗಳು ಯಾರು ಎಂಬುದನ್ನು ಪ್ರತ್ಯೇಕಿಸಿ ನೋಡುವ ವಿವೇಚನೆ ನಮಗಿದೆ. ಕಳಸಾ - ಬಂಡೂರಿ ಯೋಜನೆಗಾಗಿ ಹೋರಾಟ ನಡೆಸಿದ ರೈತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದನ್ನು ಮರೆತು ಬಿಟ್ಟಿರಾ ಸಿದ್ದರಾಮಯ್ಯ?. ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಕುಡುಕನ ಪಟ್ಟಕಟ್ಟಿದ ಮಹಾನುಭಾವರು ನೀವಲ್ಲವೇ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
|
ಬುರುಡೆರಾಮಯ್ಯ ಹ್ಯಾಷ್ ಟ್ಯಾಗ್ ಬಳಕೆ
ಸಿದ್ದರಾಮಯ್ಯ ಅವರೇ, ನಿಮ್ಮ ದುರಾಡಳಿತ ಮತ್ತು ರೈತ ವಿರೋಧಿ ನೀತಿಯ ಪ್ರತಿಫಲವಾಗಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ ರೈತ ವಿಠಲ ಅರಬಾವಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಮ್ಮ ರೈತರ ಮೇಲಿನ ನಿಮ್ಮ ಕಾಳಜಿಗೆ ಈ ನಾಡು ಅನೇಕ ಬಾರಿ ಸಾಕ್ಷಿಯಾಗಿದೆ, ಉದಾಹರಣೆ ಸಮೇತ ಬಿಚ್ಚಿಡಬೇಕೇ? ಎಂದು ಬಿಜೆಪಿ ಕೇಳಿದೆ.
Recommended Video
|
ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ
ಕಾಂಗ್ರೆಸ್ ಪಕ್ಷದ ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದ ಸಿದ್ದರಾಮಯ್ಯ ಅವರಿಗೆ ತಮ್ಮ ಅಧಿಕಾರಾವಧಿಯಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಲೇ ಇಲ್ಲ. ಅಂತಹ ಸಿದ್ದರಾಮಯ್ಯ ಇಂದು ರೈತರ ಪರವಾಗಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಈ ಮೂಲಕ ತಮ್ಮ ದ್ವಿಮುಖ ನೀತಿಯನ್ನು ಅನಾವರಣಗೊಳಿಸಿದ್ದಾರೆ ಎಂದು ಬಿಜೆಪಿ ಟೀಕೆ ಮಾಡಿದೆ.











Click it and Unblock the Notifications