'ತಮ್ಮದೇ ಕ್ಷೇತ್ರದಲ್ಲಿ ಗೆಲ್ಲಲಾಗದವರು...': ಸಿದ್ದರಾಮಯ್ಯಗೆ ಚುಚ್ಚಿದ ಬಿಜೆಪಿ
ಬೆಂಗಳೂರು, ಮಾರ್ಚ್ 16: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರ್ನಾಟಕದಿಂದ ಸ್ಪರ್ಧಿಸುವಂತೆ ಆಹ್ವಾನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಬಿಜೆಪಿ ಕಟುವಾಗಿ ಟೀಕಿಸಿದೆ.
ತಮ್ಮದೇ ಕ್ಷೇತ್ರದಲ್ಲಿ ಗೆಲ್ಲಲಾಗದವರು ಮತ್ತೊಬ್ಬ ಪರಾಭವಿಗೆ ಕಾರ್ಪೆಟ್ ಹಾಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಕರ್ನಾಟಕವು ಕಾಂಗ್ರೆಸ್ ನಾಯಕರಿಗೆ ಯಾವಾಗಲೂ ಬೆಂಬಲ ಮತ್ತು ಉತ್ತೇಜನ ನೀಡಿದೆ. ಇಂದಿರಾ ಮತ್ತು ಸೋನಿಯಾ ಗಾಂಧಿ ಅವರ ವಿಚಾರದಲ್ಲಿ ಇದು ಸಾಬೀತಾಗಿತ್ತು. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧಿಸುವುದನ್ನು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ಕಾಲೆಳೆದಿದೆ. 'ತನ್ನದೇ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ವ್ಯಕ್ತಿ, ಮತ್ತೊಬ್ಬ ಪರಾಭವಿಗೆ ಕಾರ್ಪೆಟ್ ಹಾಸುತ್ತಿದ್ದಾರೆ' ಎಂದು ವ್ಯಂಗ್ಯವಾಡಿದೆ.
ಜತೆಗೆ 'ಕೋತಿ ತಾನು ಕೆಡೋದಲ್ದೆ...' ಎಂದು ಗಾದೆ ಮಾತಿನ ಅರ್ಧ ಭಾಗವನ್ನು ಪ್ರಕಟಿಸಿದೆ.












Click it and Unblock the Notifications