ಕುಮಾರಸ್ವಾಮಿ ಕಣ್ಣೀರು ಸುರಿಸುವುದು ಕೇವಲ ಜನರನ್ನು ಮೂರ್ಖರನ್ನಾಗಿಸಲು ಮಾಡುವ ತಂತ್ರ: ಬಿಜೆಪಿ
ಬೆಂಲಗಳೂರು,ಡಿಸೆಂಬರ್ 28: ಹಳೇ ಮೈಸೂರು ಭಾಗದ ಅಭಿವೃದ್ದಿಗಾಗಿ ಏನು ಮಾಡ ಕಾಂಗ್ರೆಸ್ ಹಾಗೂ ಜೆಡಿಎಸ್ ಜನರಿಗೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸಗ್ ವಿರುದ್ದ ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕೇವಲ ಹಳೆ ಮೈಸೂರು ಭಾಗದ ಜನರಿಂದ ಬದುಕಿರುವ ಪಕ್ಷ ಅವರಿಗೇ ಇಂದು ದ್ರೋಹ ಬಗೆಯುತ್ತಿದೆ. ಜಿ. ಪಂ.ಯಿಂದ ಹಿಡಿದು ಸಂಸತ್ತಿನ ತನಕ ಹುದ್ದೆ ಹೊಂದಿರುವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮಾತ್ರ ಯಾವುದೇ ಹುದ್ದೆಯಿಲ್ಲ, ಅಭಿವೃದ್ಧಿಯ ಹೆಸರಿನಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿ ಮಾಡಿದ್ದೆಲ್ಲಾ ಜನರ ಲೂಟಿ ಎಂದು ಕಿಡಿಕಾರಿದೆ.
ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಆಷಾಢಭೂತಿತನವನ್ನು ಕಂಡು ಬದಲಾವಣೆಗೆ ತೆರೆದುಕೊಂಡಿದ್ದಾರೆ. ಇದೆಲ್ಲದಕ್ಕೂ ಮಂಡ್ಯದಲ್ಲಿ ನಡೆಯುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ @AmitShah ಅವರ ಕಾರ್ಯಕ್ರಮವೇ ಮುನ್ನುಡಿಯಾಗಲಿದೆ. #OldMysuruWelcomesAmitShah
— BJP Karnataka (@BJP4Karnataka) December 28, 2022
8/8
ಇಷ್ಟು ವರ್ಷಗಳ ಕಾಲ ಅಧಿಕಾರ ಕೊಟ್ಟ ಜನರಿಗೆ ತಿರುಗಿ ಕೊಟ್ಟಿದ್ದು ಮಾತ್ರ ಶೂನ್ಯ. ಎಚ್.ಡಿ ಕುಮಾರಸ್ವಾಮಿ ಅವರು ಸಾರ್ವಜನಿಕವಾಗಿ ಕಣ್ಣೀರು ಸುರಿಸುವುದು ಕೇವಲ ಈ ಭಾಗದ ಜನರನ್ನು ಮೂರ್ಖರನ್ನಾಗಿಸಲು ಮಾಡುವ ತಂತ್ರ. 'ಏನಾದರೂ ಮಾಡಿ ಅಧಿಕಾರ ಹಿಡಿಯಲೇಬೇಕು' ಎನ್ನುವುದಷ್ಟೇ ಅವರ ಪಕ್ಷದ ಸಿದ್ಧಾಂತ. ಹೆಸರಲ್ಲಷ್ಟೇ ಜಾತ್ಯಾತೀತತೆ ಆಗಿರುವ ಪಕ್ಷ ಮಾಡಿದ್ದೆಲ್ಲವೂ ಜಾತಿ ರಾಜಕಾರಣವೇ. ಕೇವಲ ಒಂದು ಸಮುದಾಯದವರನ್ನು ನೆಚ್ಚಿ ಬದುಕುತ್ತಿರುವ ಪಕ್ಷ ಆ ಸಮುದಾಯದ ಉದ್ದಾರವನ್ನೂ ಕಡೆಗಣಿಸಿ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಿಳಿದು ಬಿಟ್ಟಿದೆ ಎಂದು ಟ್ವೀಟ್ ಮಾಡಿದೆ.

ಕಾರ್ಯಕರ್ತರೇ ರಾಜಕೀಯ ಪಕ್ಷಗಳ ಬೆನ್ನೆಲುಬು. ಆದರೆ, ಜೆಡಿಎಸ್ ಕಾರ್ಯಕರ್ತರನ್ನೇ ಕಡೆಗಣಿಸಿ ಕೇವಲ ತಮ್ಮ ಕುಟುಂಬದವರನ್ನೇ ಚುನಾವಣಾ ಅಭ್ಯರ್ಥಿಯನ್ನಾಗಿಸುತ್ತದೆ. ಇದಕ್ಕೆ ಸ್ವಂತ ಕಾರ್ಯಕರ್ತರನ್ನೇ ನಂಬದ ಹೆಚ್.ಡಿ.ರೇವಣ್ಣನವರ ಸಮಜಾಯಿಷಿ, 'ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದರೆ ಟೋಪಿ ಹಾಕಿ ಹೋಗ್ತಾರೆ' ಅನ್ನೋದು ಎಂದು ಟ್ವೀಟ್ ಮಾಡಿದೆ.
ಇನ್ನೂ ಕಾಂಗ್ರೆಸ್ ಪಕ್ಷ ಈ ಭಾಗದ ಅಭಿವೃದ್ಧಿಗಾಗಿ ಏನೂ ಮಾಡಲಿಲ್ಲ. ಸ್ವತಃ ಮುಖ್ಯಮಂತ್ರಿಯಾಗಿದ್ದ ಈ ಭಾಗದವರಾದ ಸಿದ್ದರಾಮಯ್ಯನವರು ಕೂಡ ಅಭಿವೃದ್ಧಿ ಕಡೆಗಣಿಸಿ ಒಡೆದಾಳುವ ನೀತಿ ಅನುಸರಿಸಿ ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಿಳಿದುಬಿಟ್ಟರು. ಆದರೆ ಜನ ಇದಾವುದನ್ನೂ ಮರೆಯದೇ ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದರು ಎಂದು ಟೀಕಿಸಿದೆ.
2018ರ ಚುನಾವಣೆಯಲ್ಲಿ ಸೋಲು ಖಚಿತ ಎಂದು ಅರಿವಾದಾಗ ಸಿದ್ದರಾಮಯ್ಯ ಅವರು ತಮ್ಮನ್ನು ನಂಬಿದವರನ್ನು ಅನಾಥರನ್ನಾಗಿಸಿ ಬಾದಾಮಿಗೆ ಓಡಿಹೋದರು. ಅಲ್ಲಿಂದ ಮತ್ತೆ ಇಲ್ಲಿಗೆ ಬರುವ ಯೋಚನೆ ಮಾಡುತ್ತಿದ್ದಾರೆ. ಆದರೆ ಒಡೆಯರ್ ಅವರಿಗೆ ಅಗೌರವದ ಏಕವಚನದ ಪದ ಬಳಸಿದವರನ್ನು ಈ ಭಾಗದ ಸುಸಂಸ್ಕೃತ ಜನರು ಶಾಶ್ವತವಾಗಿ ತಿರಸ್ಕರಿಸಿದ್ದಾರೆ.

ಈಗ ಮತ್ತೆ ಸಿದ್ದರಾಮಯ್ಯ ನವರು ಓಡಲೆಂದು ನಮ್ಮ ಸರ್ಕಾರ ರಾಜ್ಯದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುತ್ತಿದೆ. ಆದರೆ ಈಗ ಬನ್ನೂರು-ಮಳವಳ್ಳಿ ಮಾರ್ಗದಲ್ಲಿ ಓಡಲು ಕನಕಪುರದಲ್ಲಿ ಬಂಡೆ ಅಡ್ಡಲಾಗಿದೆ! ಸಿಎಂ ಆಗಿದ್ದಾಗ ನಿದ್ದೆ ಮಾಡಿ, ಈಗ ಚುನಾವಣೆಯೆಂದು ತಟ್ಟನೆ ಎಚ್ಚರಗೊಂಡು ಈ ಭಾಗದ ಬಗ್ಗೆ ಮಾತಾಡುತ್ತಿದ್ದಾರೆ.
ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಆಷಾಢಭೂತಿತನವನ್ನು ಕಂಡು ಬದಲಾವಣೆಗೆ ತೆರೆದುಕೊಂಡಿದ್ದಾರೆ. ಇದೆಲ್ಲದಕ್ಕೂ ಮಂಡ್ಯದಲ್ಲಿ ನಡೆಯುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರ ಕಾರ್ಯಕ್ರಮವೇ ಮುನ್ನುಡಿಯಾಗಲಿದೆ ಎಂದು ಟ್ವೀಟ್ ಮಾಡಿದೆ.












Click it and Unblock the Notifications