ಕಾಂಗ್ರೆಸ್‌ ಮುಖಂಡರನ್ನು ಬಿಜೆಪಿಯತ್ತ ಸೆಳೆಯಲು ಐಟಿ, ಇಡಿ ದಾಳಿ ಅಸ್ತ್ರ: ಎಂ. ಲಕ್ಷ್ಮಣ್ ಆರೋಪ

ಮೈಸೂರು,ಡಿಸೆಂಬರ್ 21: ಕಾಂಗ್ರೆಸ್ ಮುಖಂಡರನ್ನು ಬಿಜೆಪಿಯತ್ತ ಸೆಳೆಯಲು ಬಿಜೆಪಿ ಇಡಿ ಹಾಗೂ ಐಟಿಯನ್ನ ಅಸ್ತ್ರವಾಗಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್‌ನ 21 ಮುಖಂಡರ ಮೇಲೆ ಇಡಿ ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಕರ್ನಾಟಕಕ್ಕೆ 300 ಐಟಿ ಅಧಿಕಾರಿಗಳು ಬಂದಿದ್ದಾರೆ. ಇವರಿಗೆ 1200 ಆರ್‌ಎಸ್‌ಎಸ್‌ ಕಾರ್ಯಕರ್ತರು ಸಹಾಯ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಇನ್ನೂ 2023 ಜರ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಅನ್ಯಮಾರ್ಗ ತುಳಿದಿದೆ. ರಾಜ್ಯದ 224 ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಮೇಲೆ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ ನಡೆಸಲು ಸಿದ್ಧತೆ ನಡೆಸಿದೆ. ಪೊಲೀಸರ ಮೂಲಕ ಕಾಂಗ್ರೆಸ್‌ ಮುಖಂಡರ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ. ಇದು ಬಿಜೆಪಿಯ ರಾಕ್ಷಸ ಪ್ರವೃತ್ತಿಯಾಗಿದೆ ಎಂದು ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದರು.

Bjp Using It And Ed Weapons To Attract Congressmen To Bjp Says M Laxman

ಇನ್ನೂ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಾಯಕರ ಮೇಲೆ ಇಡಿ ಹಾಗೂ ಐಟಿ ದಾಳಿಯನ್ನ ಅಸ್ತ್ರವನ್ನಾಗಿಸಿಕೊಂಡಿದೆ. ಕಾಂಗ್ರೆಸ್‌ನ 21 ಮುಖಂಡರ ಮೇಲೆ ಇಡಿ ದಾಳಿ ಮಾಡಲು ಸಿದ್ಧತೆ ನಡೆದಿದೆ. 8 ರಿಂದ 9 ಶಾಸಕರಿಗೆ ನೀವು ಬಿಜೆಪಿಗೆ ಬಂದರೆ ನಿಮ್ಮನ್ನು ಮುಟ್ಟುವುದಿಲ್ಲ ಎಂದು ಅಧಿಕಾರಿಗಳು ಮನವೊಲಿಸುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ 300 ಐಟಿ ಅಧಿಕಾರಿಗಳು ಬಂದಿದ್ದಾರೆ. ಇವರಿಗೆ 1200 ಆರ್‌ಎಸ್‌ಎಸ್‌ ಕಾರ್ಯಕರ್ತರು ಸಹಾಯ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಕೇಂದ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಭದ್ರತೆ ನೀಡುವ ಗನ್‌ ಮ್ಯಾನ್‌ಗಳಲ್ಲಿ ಒಬ್ಬ ಇಡಿ ಅಧಿಕಾರಿ ಇದ್ದಾರೆ. ಆ ಮೂಲಕ ಯಡಿಯೂರಪ್ಪ ಮತ್ತು ಅವರ ಕುಟುಂಬಕ್ಕೆ ಬಿಜೆಪಿ ಕಿರುಕುಳ ನೀಡುತ್ತಿದೆ. ಲಿಂಗಾಯತ ಸಮುದಾಯ ಇದನ್ನು ಅರ್ಥ ಮಾಡಿಕೊಳ್ಳಬೇಕು. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮೇಲೆ 17 ಬಾರಿ ಇಡಿ ದಾಳಿ ಮಾಡಿದೆ. ಒಕ್ಕಲಿಗರು ತಮ್ಮ ನಾಯಕನಿಗೆ ಆಗುತ್ತಿರುವ ಕಿರುಕುಳದ ವಿರುದ್ಧ ಧ್ವನಿ ಎತ್ತಬೇಕು ಎಂದು ಹೇಳಿದರು.

Bjp Using It And Ed Weapons To Attract Congressmen To Bjp Says M Laxman

ತನಿಖಾ ಸಂಸ್ಥೆಗಳಿಂದ ದಾಳಿ ಅಸಮಾಧಾನಗೊಂಡ ಡಿ.ಕೆ.ಶಿವಕುಮಾರ್

ತನ್ನ ವಿರುದ್ಧ ತನಿಖಾ ಸಂಸ್ಥೆಗಳು ಪದೇ ಪದೇ ದಾಳಿ ನಡೆಸುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನನಗೆ ತೊಂದರೆ ಕೊಡಲೇಬೇಕೆಂದು ನಿರ್ಧಾರ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಸಿದ್ದರು. ಅಧಿಕಾರಿಗಳು ಅನೇಕ ವಿಚಾರ ಕೇಳಿದ್ದಾರೆ. ಕಾನೂನಿನಲ್ಲಿ ‌ಏನು‌ ಅವಕಾಶ ಇದೆ ಮಾಡಲಿ. ನಾನು ಮೂರು ನಾಲ್ಕು ತಿಂಗಳ ಹಿಂದೆ ಸಿಬಿಐಗೆ ಪತ್ರ ಬರೆದಿದ್ದೆ. ಎಫ್ ಐ ಆರ್ ಹಾಕಿ ಎರಡು ವರ್ಷ ಆಯ್ತು. ಇನ್ನೂ‌ ಏನು ಮಾಡಿಲ್ಲ.‌ ಏನಾದರೂ ಇದ್ರೆ ಸ್ಪಷ್ಟನೆ ಕೇಳಿ ಕೊಡುತ್ತೇನೆ ಎಂದಿದ್ದೆ. ಕೇಸನ್ನು ಪ್ರಕರಣ ರದ್ದು ಮಾಡಬೇಕು ಎಂದು ನ್ಯಾಯಾಲಯಕ್ಕೂ ಮನವಿ ಮಾಡಿದ್ದೆ. ತನಿಖೆಗೆ ಅನುಮತಿ ಕೊಟ್ಟ ಸರ್ಕಾರದ ನಡೆ ಸರಿಯಲ್ಲ ಎಂದು ಹೇಳಿದ್ದಾರೆ.

ನನಗೆ ತೊಂದರೆ ಕೊಡಲೇಬೇಕೆಂದು ನಿರ್ಧಾರ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳು ನಮಗೆ ಸೇರಿದ‌ ಸಂಸ್ಥೆಗೆ ಬಂದು ತನಿಖೆ ಮಾಡಿದ್ದಾರೆ. ಸಿಬ್ಬಂದಿ ಹಾಗೂ‌ ಟ್ರಸ್ಟಿಗಳನ್ನು ಕರೆದು ತನಿಖೆ ಮಾಡಿದ್ದಾರೆ. ಏನೇನು ಮಾಹಿತಿ ತೆಗೆದುಕೊಂಡಿದ್ದಾರೆ ಗೊತ್ತಿಲ್ಲ. ಏನು ಬೇಕಾದರೂ ಮಾಡಲಿ. ಅವರಿಗೆ ತನಿಖೆ ಮಾಡುವಂತಹ ಅಧಿಕಾರ ಇದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+