Get Updates
Get notified of breaking news, exclusive insights, and must-see stories!

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ವಿಜಯಯಾತ್ರೆ: ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರುವುದೇ? ವರದಿ, ವಿಶ್ಲೇಷಣೆ

ಈಶಾನ್ಯ ರಾಜ್ಯಗಳಾದ ತ್ರಿಪುರಾ ಮತ್ತು ನಾಗಾಲ್ಯಾಂಡ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು ಸ್ಪಷ್ಟ ಬಹುಮತ ಪಡೆದಿವೆ. ಈ ಚುನಾವಣೆ ಫಲಿತಾಂಶವು ಮುಂಬರುವ ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ? ಈ ವಿಶ್ಲೇಷಣೆ ಓದಿ

ಬೆಂಗಳೂರು, ಮಾರ್ಚ್‌ 02: ಈಶಾನ್ಯ ರಾಜ್ಯಗಳಾದ ತ್ರಿಪುರಾ ಮತ್ತು ನಾಗಾಲ್ಯಾಂಡ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು ಸ್ಪಷ್ಟ ಬಹುಮತ ಪಡೆದಿವೆ. ಮೇಘಾಲಯದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಈ ಚುನಾವಣೆ ಫಲಿತಾಂಶವು ಮುಂಬರುವ ಕರ್ನಾಟಕದ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ? ಎಂಬ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ.

 ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು

ತ್ರಿಪುರಾದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು

ತ್ರಿಪುರಾದ 60 ಸ್ಥಾನಗಳಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಐಪಿಎಫ್‌ಟಿ (ಇಂಡಿಜಿನಸ್ ಪ್ರೋಗ್ರೆಸ್ಸಿವ್ ಫ್ರಂಟ್ ಆಫ್ ತ್ರಿಪುರ) 34 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 36 ಸ್ಥಾನಗಳನ್ನು ಗೆದ್ದುಕೊಂಡಿದ್ದತ್ತು. ಇದಕ್ಕೆ ಹೋಲಿಸಿದರೆ ಬಿಜೆಪಿಗೆ 10ರಷ್ಟು ಸ್ಥಾನಗಳು ಕಡಿಮೆಯಾಗಬಹುದು. ಕಳೆದ ಚುನಾವಣೆಯಲ್ಲಿ ಐಪಿಎಫ್‌ಟಿ 8ರಲ್ಲಿ ಗೆದ್ದಿತ್ತು. ಸ್ಪಷ್ಟ ಬಹುಮತ ಪಡೆಯುವುದರೊಂದಿಗೆ ತ್ರಿಪುರಾದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಮೈತ್ರಿಕೂಟವು ಅಧಿಕಾರ ಹಿಡಿಯಲಿದೆ.

 ಬಿಜೆಪಿ ಮೈತ್ರಿಕೂಟಕ್ಕೆ ಮತ್ತೆ ಮಣೆ ಹಾಕಿದ ನಾಗಾಲ್ಯಾಂಡ್‌

ಬಿಜೆಪಿ ಮೈತ್ರಿಕೂಟಕ್ಕೆ ಮತ್ತೆ ಮಣೆ ಹಾಕಿದ ನಾಗಾಲ್ಯಾಂಡ್‌

ಇನ್ನೊಂದು ಈಶಾನ್ಯ ರಾಜ್ಯವಾದ ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆತಿದೆ. 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಆಡಳಿತಾರೂಢ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟವು 33 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) 21 ಸ್ಥಾನಗಳನ್ನು ಗೆದ್ದರೆ, ಅದರ ಮೈತ್ರಿ ಪಾಲುದಾರ ಬಿಜೆಪಿ 12 ಸ್ಥಾನಗಳನ್ನು ಪಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

 ಮೇಘಾಲಯದಲ್ಲಿ ಅತಂತ್ರ ಫಲಿತಾಂಶ

ಮೇಘಾಲಯದಲ್ಲಿ ಅತಂತ್ರ ಫಲಿತಾಂಶ

ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ 16 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಇದುವರೆಗೆ ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಇನ್ನೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಮೂರು ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಅಂಕಿಅಂಶಗಳ ಸೂಕ್ಷ್ಮವಾಗಿ ಗಮನಿಸುವುದಾದರೆ, ಮೇಘಾಲಯದಲ್ಲಿ ಅತಂತ್ರ ಫಲಿತಾಂಶ ಬರುವುದು ಖಚಿತವಾಗಿದೆ. ಮೇಘಾಲಯದ 60 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.

 ದೇಶದಲ್ಲಿ ಬಿಜೆಪಿ ವಿಜಯಯಾತ್ರಿ ಮುಂದುವರಿಕೆ

ದೇಶದಲ್ಲಿ ಬಿಜೆಪಿ ವಿಜಯಯಾತ್ರಿ ಮುಂದುವರಿಕೆ

ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ತನ್ನ ವಿಜಯಯಾತ್ರೆಯನ್ನು ಮುಂದುವರಿಸಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಗುಜರಾತ್‌ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಆದರೆ, ಹಿಮಾಚಲ ಪ್ರದೇಶವನ್ನು ಕಳೆದುಕೊಂಡಿತ್ತು. ಪ್ರಸ್ತುತ ಬಿಜೆಪಿಯು ದೇಶದ 11 ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಅಧಿಕಾರದಲ್ಲಿದೆ. ಐದು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್‌ ಮೂರು ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಆಡಳಿತ ನಡೆಸುತ್ತಿದೆ. ಮೂರು ರಾಜ್ಯಗಳಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ. ಉಳಿದಂತೆ ಎಂಟು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿವೆ.

 ಈಶಾನ್ಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಬಹುದೇ?

ಈಶಾನ್ಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಬಹುದೇ?

ಇನ್ನೆರಡು ತಿಂಗಳಲ್ಲಿ ಕರ್ನಾಟಕದ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಇಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ತೀವ್ರ ಪೈಪೋಟಿಗೆ ಇಳಿದಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಪ್ರಬಲ ಪೈಪೋಟಿ ಇದೆ. ಬಿಜೆಪಿ ಮೋದಿಯವರ ವರ್ಚಸ್ಸನ್ನೇ ನಂಬಿಕೊಂಡಿದೆ. ಇಲ್ಲಿ ಆಡಳಿತ ವಿರೋಧಿ ಅಲೆಯೂ ಕಂಡುಬರುತ್ತಿದೆ. ಈಶಾನ್ಯ ರಾಜ್ಯಗಳ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಸಕಾರಾತ್ಮಕ ಪರಿಣಾಮವನ್ನು ಉಂಟು ಮಾಡಬಹುದು ಎಂಬ ಊಹೆಗಳು ಹರಿದಾಡುತ್ತಿವೆ. ಆದರೆ, ಈಶಾನ್ಯ ರಾಜ್ಯಗಳ ಫಲಿತಾಂಶ ದಕ್ಷಣ ರಾಜ್ಯದ ಜನರ ಮೇಲೆ ಅಷ್ಟೇನು ಪರಿಣಾಮ ಬೀರಲಿಕ್ಕಿಲ್ಲ ಎಂಬ ವಾದಗಳೂ ಹುಟ್ಟಿಕೊಂಡಿವೆ.

 ಕರ್ನಾಟಕದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಎದುರಾಳಿ

ಕರ್ನಾಟಕದಲ್ಲಿ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಎದುರಾಳಿ

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಗೆ ಪ್ರಬಲವಾದ ವಿರೋಧಿ ಮೈತ್ರಿಕೂಟವಿಲ್ಲ. ಆ ರಾಜ್ಯಗಳಲ್ಲಿ ಕಾಂಗ್ರೆಸ್‌ ಕಳೆಗುಂದಿದೆ. ಆದರೆ, ಕರ್ನಾಟಕದ ಪರಿಸ್ಥಿತಿ ಹಾಗಿಲ್ಲ. ಇಲ್ಲಿ ಕಾಂಗ್ರೆಸ್‌ ಪಕ್ಷಗಳ ಬೇರುಗಳು ಇನ್ನೂ ಆಳವಾಗಿಯೇ ಇವೆ. ಕಳೆದ ಬಾರಿಯ ಚುನಾವಣೆಯಲ್ಲಿ ಮೋದಿ ವರ್ಚಸ್ಸು ಇದ್ದರೂ, ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಈ ಬಾರಿ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರ ಕಾರ್ಯತಂತ್ರ ಹಾಗೂ ಸಿದ್ದರಾಮಯ್ಯನವರ ಮಾಸ್‌ ಪಾಪ್ಯೂಲಾರಿಟಿಯನ್ನು ಬಿಜೆಪಿಗೆ ಮೆಟ್ಟಿ ನಿಲ್ಲಲಿದೆಯೇ ಎಂಬ ಪ್ರಶ್ನೆಗಳು ಉದ್ಬವಗೊಂಡಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+