Karnataka Election: ಕಿತ್ತೂರು ಕರ್ನಾಟಕ ಭಾಗದಲ್ಲಿ ಕಳೆದ ಚುನಾವಣೆಯ ಫಲಿತಾಂಶ ಏನಾಗಿತ್ತು?

ಕರ್ನಾಟಕ ವಿಧಾನಸಭೆಯ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮೂರು ಪ್ರಮುಖ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಬ್ಯೂಸಿಯಾಗಿವೆ. ಕಾಂಗ್ರೆಸ್ ತನ್ನ ಮೊದಲನೇ ಪಟ್ಟಿಯನ್ನು ನಿರಾಂತಕವಾಗಿಯೇನೂ ಬಿಡುಗಡೆ ಮಾಡಿದೆ, ಆದರೆ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲು ದೊಡ್ಡ ಸವಾಲನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್ ತನ್ನ ಎರಡನೇ ಪಟ್ಟಿಯನ್ನು ಏಪ್ರಿಲ್ ಒಂದರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆಮ್ ಆದ್ಮಿ ಪಕ್ಷ ಎರಡನೇ ಪಟ್ಟಿಯನ್ನು ಮಾರ್ಚ್ 31ರಂದು ಬಿಡುಗಡೆ ಮಾಡಿದೆ. ಬಿಜೆಪಿಗೆ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ತಲೆನೋವಾಗಿದ್ದು, ಆಯಾ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳೇ ಆಯ್ಕೆ ಮಾಡಬೇಕೆಂಬ ಹೊಸ ಫಾರ್ಮುಲಾಕ್ಕೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ.

BJP Was The Big Gainer In Kittur Karnataka Region During 2018 Elections

2018ರ ಚುನಾವಣೆಯ ಫಲಿತಾಂಶವನ್ನು ಅವಲೋಕಿಸುವುದಾದರೆ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮತಮ್ಮ ಪ್ರಾಬಲ್ಯವನ್ನು ಹೆಚ್ಚಿಸಲು ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಈ ಭಾಗದಲ್ಲಿನ 56 ಕ್ಷೇತ್ರಗಳು ರಾಜ್ಯ ರಾಜಕೀಯದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕಾರಣ ಮಾಡಿರುವುದು ಗೊತ್ತಿರುವ ವಿಚಾರ.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಉತ್ತರ ಕನ್ನಡ ಮತ್ತು ಹಾವೇರಿ ಒಳಗೊಂಡ ಜಿಲ್ಲೆಗಳು ಕಿತ್ತೂರು ಕರ್ನಾಟಕದ ಭಾಗದಲ್ಲಿ ಬರುತ್ತದೆ. ಶಶಿಕಲಾ ಜೊಲ್ಲೆ, ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಪಿ.ರಾಜೀವ್, ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸೇರಿದಂತೆ ಪ್ರಭಾವೀ ಶಾಸಕರು ಬೆಳಗಾವಿಯಿಂದ ಆಯ್ಕೆಯಾಗಿದ್ದಾರೆ.

ಇನ್ನು, ಬಾಗಲಕೋಟೆ ಜಿಲ್ಲೆಯಿಂದ ಸಿದ್ದರಾಮಯ್ಯ, ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ವಿಜಯಪುರ ಜಿಲ್ಲೆಯಿಂದ ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ.ಪಾಟೀಲ್ ಮುಂತಾದ ಜನಪ್ರಿಯ ಶಾಸಕರು ಈ ಭಾಗದಿಂದ ಆಯ್ಕೆಯಾಗಿದ್ದಾರೆ.

ಜಗದೀಶ್ ಶೆಟ್ಟರ್, ಅರವಿಂದ ಬೆಲ್ಲದ್ ಧಾರವಾಡ ಜಿಲ್ಲೆಯಿಂದ ಆರ್.ವಿ.ದೇಶಪಾಂಡೆ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರಬೈಲ್ ಶಿವರಾಂ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಕಿತ್ತೂರು ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ 2018ರ ಚುನಾವಣೆಯಲ್ಲಿ ಯಾವ ಪಕ್ಷ ಎಷ್ಟು ಸ್ಥಾನವನ್ನು ಗೆದ್ದಿತ್ತು ಎನ್ನುವುದನ್ನು ಟೇಬಲ್ ನಲ್ಲಿ ಕೊಡಲಾಗಿದೆ. ಒಟ್ಟು 56 ಕ್ಷೇತ್ರಗಳಲ್ಲಿ ಬಿಜೆಪಿ 39, ಜೆಡಿಎಸ್ 02 ಮತ್ತು ಕಾಂಗ್ರೆಸ್ 15 ಸ್ಥಾನದಲ್ಲಿ ಗೆಲುವನ್ನು ಕಂಡಿತ್ತು.

ಜಿಲ್ಲೆ ಒಟ್ಟು ಕ್ಷೇತ್ರಗಳು ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಇತರರು
ಬೆಳಗಾವಿ 18 12 06 00 00
ಬಾಗಲಕೋಟೆ 07 05 02 00 00
ವಿಜಯಪುರ 08 03 03 02 00
ಗದಗ 04 03 01 00 00
ಧಾರವಾಡ 07 05 02 00 00
ಹಾವೇರಿ 06 06 00 00 00
ಉತ್ತರ ಕನ್ನಡ 06 05 01 00 00
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+