ಚುನಾವಣಾ ರಣಕಣ; ಎಸ್‍ಡಿಪಿಐ, ಕೆಎಫ್‍ಡಿ, ಪಿಎಫ್‍ಐ ಕಾರ್ಯಕರ್ತರು ಸಿದ್ದರಾಮಯ್ಯನವರ ದತ್ತು ಮಕ್ಕಳು: ಪ್ರತಾಪ್‌ ಸಿಂಹ

ಮೈಸೂರು, ಏಪ್ರಿಲ್‌ 15: ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ಜೋರಾಗಿದೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿರುವ ಮೂರು ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ.

ಇನ್ನೂ ಮೈಸೂರಿನ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ದ ಮೈಸೂರು ಸಂಸದ ಪ್ರತಾಪ್‌ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ, ಕರ್ನಾಟಕದಲ್ಲಿ ತಾಲಿಬಾನಿ ಸರ್ಕಾರ ರಚಿಸಲು ಕಾಂಗ್ರೆಸ್‌ ಸಿದ್ದತೆಯನ್ನ ನಡೆಸಿದೆ ಎಂದು ಪ್ರತಾಪ್‌ ಸಿಂಗ್‌ ಕಿಡಿಕಾರಿದ್ದಾರೆ.

BJP Will Come Back To Power In The State Says MP Pratap Singh

ಎಸ್‍ಡಿಪಿಐ, ಕೆಎಫ್‍ಡಿ, ಪಿಎಫ್‍ಐ ಕಾರ್ಯಕರ್ತರು ಸಿದ್ದರಾಮಯ್ಯನವರ ದತ್ತು ಮಕ್ಕಳು ಎಂದು ಸಂಸದ ಪ್ರತಾಪ ಸಿಂಹ ಅವರು ಆರೋಪಿಸಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದಲ್ಲಿ ತಾಲಿಬಾನಿ ಸರಕಾರವನ್ನು ಎಸ್‍ಡಿಪಿಐ ಬೆಂಬಲದೊಂದಿಗೆ ತರಲು ಹೊರಟಿದ್ದಾರೆ. ಇದನ್ನು ಗಮನಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಿ ಎಂದು ಮನವಿ ಮಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2047ರಲ್ಲಿ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡಲು ಹೊರಟ ಭಯೋತ್ಪಾದಕರನ್ನು ಬೆಂಬಲಿಸುವ ಸಂಘಟನೆಗಳ ಜೊತೆ ಕೈಜೋಡಿಸಿದ್ದಾರೆ. ಕಾಂಗ್ರೆಸ್ ಸರಕಾರ ಬಂದರೆ ಕರ್ನಾಟಕದಲ್ಲಿ ರಾಜಕೀಯ ಹತ್ಯೆಗಳು ನಡೆಯಲಿವೆ ಎಂದು ಎಚ್ಚರಿಸಿದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ನಡೆದ ಅನೇಕ ಹತ್ಯೆಗಳ ಕುರಿತು ಅವರು ಮಾಹಿತಿ ನೀಡಿದರು.

ಸಿದ್ದರಾಮಯ್ಯ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ಅನುಮಾನಾಸ್ಪದ ಸಾವು ಮುಂದುವರಿಯಿತು. ಅನೇಕ ಅಧಿಕಾರಿಗಳ ಮೇಲೆ ದಾಳಿ ನಡೆಯಿತು. ಸಿದ್ದರಾಮಯ್ಯನವರ ಸಾಕು ಮಕ್ಕಳಿಂದ ಇದೆಲ್ಲ ಆಗಿದೆ. ತಮ್ಮ ಪಕ್ಷದ ಶಾಸಕರ ಮೇಲೆ ದಾಳಿ ನಡೆದರೂ ಕಾಂಗ್ರೆಸ್ಸಗರು ಎಚ್ಚರವಾಗಲಿಲ್ಲ ಎಂದು ಟೀಕಿಸಿದರು.

BJP Will Come Back To Power In The State Says MP Pratap Singh

ರಾಜ್ಯ ಇನ್ನೊಂದು ಕೇರಳ ಆಗಲಿದೆ ಎಂದು ಎಚ್ಚರಿಸಿದರು. ಎಸ್‍ಡಿಪಿಐಗೆ ರಾಜ್ಯ ಕೊಡುವ ಮನಸ್ಥಿತಿ ಇದು ಎಂದು ಎಚ್ಚರಿಸಿದರು. ಕರ್ನಾಟಕವನ್ನು ಒಡೆಯುವ ದಿನ ದೂರವಿಲ್ಲ. ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಿ ಎಂದು ಎಚ್ಚರಿಸಿದರು.

ಸೋಮಣ್ಣ ಅವರು ಸೋಮವಾರ ವರುಣಾ ಮತ್ತು ಚಾಮರಾಜನಗರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಅಪ್ಪ ಮತ್ತು ಮಗನ ಕಾರುಬಾರು, ದರ್ಬಾರ್ ಅಂತ್ಯವಾಗುವ ದಿನ ಹತ್ತಿರವಾಗುತ್ತಿದೆ. ಮೈಸೂರು ಭಾಗದಲ್ಲಿ 8-10 ಸೀಟು ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು- ಬೆಂಗಳೂರು ಹೈವೇ ಕಾರ್ಯಗತವಾಗಿದೆ. ಜಲಜೀವನ್ ಮಿಷನ್‍ನಲ್ಲಿ ಗ್ರಾಮಾಂತರದ ಎಲ್ಲ ಮನೆಗಳಿಗೆ ನಳ್ಳಿ ನೀರು ಕೊಡಲಿದ್ದೇವೆ. ಅಭಿವೃದ್ಧಿ ಕಾರ್ಯವನ್ನು ಗಮನಿಸಿ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+