Assembly Elections 2023; ನಾನು ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ: ಬಿ ಎಸ್ ಯಡಿಯೂರಪ್ಪ

ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ‌ಪ್ರವಾಸ ಮಾಡುತ್ತೇನೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.

ಬೆಂಗಳೂರು,ಫೆಬ್ರವರಿ25: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರವನ್ನ ಕೈಗೊಂಡಿಡದ್ದು, 2ಈಗಾಗಲೇ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಮಾತನಾಡಿ, 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇನೆ. ಚುನಾವಣಾ ರಾಜಕೀಯದಿಂದ ಮಾತ್ರ ನಾನು ಹಿಂದೆ ಸರಿದಿದ್ದೇನೆ, ಆದರೆ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ‌ಪ್ರವಾಸ ಮಾಡುತ್ತೇನೆ ಹೇಳಿದ್ದಾರೆ.

BJP Will Come Power Winning 130 Seats Says Former CM BS Yediyurappa

27ನೇ ತಾರೀಕು ಏರ್ಪೋರ್ಟ್ ಉದ್ಘಾಟನೆಗೆ ಪ್ರಧಾನಿ ಬರ್ತಿದ್ದಾರೆ.‌ ನನ್ನ ಬಹಳ ವರ್ಷದ ಕನಸ್ಸು ನನಸ್ಸಾಗಿದೆ. ರಾಜ್ಯದ ಅಭಿವೃದ್ಧಿ ಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಮಾಡಿದ್ದೇನೆ ಎನ್ನು ತೃಪ್ತಿ ಇದೆ. ರಾಜ್ಯದ ಉದ್ದಗಲಕ್ಕೂ ‌ಪ್ರವಾಸ ಮಾಡುತ್ತೇನೆ, ನಾನು ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅಮಿಶ್ ಶಾ, ನರೇಂದ್ರ ಮೋದಿ ನೇತೃತ್ವದ ಆನೆ ಬಲ‌ ಸಿಕ್ಕಿದಂತೆ ಆಗಿದೆ ಎಂದು ಹೇಳಿದರು.

ವೀರಶೈವ ‌ಲಿಂಗಾಯತ ಬಂದುಗಳಲ್ಲಿ ಕೈ ಜೋಡಿಸಿ ಮನವಿ ಮಾಡುತ್ತೆನೆ. ಇದುವರೆಗೂ ನನಗೆ ಎಲ್ಲಾ ರೀತಿಯ ‌ಸಹಕಾರ ಅವಕಾಶವನ್ನು ಪ್ರಧಾನಿ ಮೋದಿ, ಅಮಿತ್ ಶಾ ಅವರು ಕೊಟ್ಟಿದ್ದಾರೆ, ನಾನೇ ಸ್ವಯಂ ‌ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೆನೆ. ಫೆಬ್ರವರಿ 27 ನೇ ತಾರೀಖು‌ ನನಗೆ 80 ವರ್ಷ ಆಗುತ್ತಿದೆ. ಹೀಗಾಗಿ ಯಾವುದೇ ವೀರಶೈವ ಬಂದುಗಳು ಅಪಾರ್ಥ ಮಾಡಿಕೊಳ್ಳಬಾರದು, ನನಗೆ ಎಲ್ಲಾ ಬೆಂಬಲ ಕೊಟ್ಟು ಬಿಜೆಪಿ ಗೆಲ್ಲಿಸಬೇಕೆಂದು ಕೈಜೋಡಿಸಿ ಪ್ರಾರ್ಥನೆ ಮಾಡ್ತೆನೆ ಎಂದು ಹೇಳಿದ್ದಾರೆ.

BJP Will Come Power Winning 130 Seats Says Former CM BS Yediyurappa

ಸಿದ್ದರಾಮಯ್ಯ ಮೇಲೆ ರೀಡೂ ಆರೋಪ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಇದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. ಅನಗತ್ಯವಾಗಿ ಒಂದು ವಿಚಾರದ ಬಗ್ಗೆ ಮಾತನಾಡಲ್ಲ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.

ರಾಜ್ಯದ ನಾಲ್ಕು ಸ್ಥಳಗಳಿಂದ ಯಾತ್ರೆ ಆರಂಭವಾಗಲಿದ್ದು, ಮಾರ್ಚ್ 1ರಂದು ಮಲೆ ಮಹದೇಶ್ವರ ಬೆಟ್ಟ, ಹನೂರು ತಾಲ್ಲೂಕಿನಿಂದ ಮೊದಲನೇ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದ ಚಾಲನೆ ನೀಡಲಿದ್ದಾರೆ. ಮಾರ್ಚ್ 2ರಂದು ಸಂಗೊಳ್ಳಿ ರಾಯಣ್ಣ ಸ್ಮಾರಕ, ನಂದಗಢದಿಂದ ಯಾತ್ರೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಚಾಲನೆ ಸಿಗಲಿದ್ದು, ನಂದಗಢದಿಂದ ಹೊರಡುವ ಯಾತ್ರೆಯು ಕಿತ್ತೂರು ಚೆನ್ನಮ್ಮನ ಹುಟ್ಟೂರಾದ ಕಿತ್ತೂರಿಗೂ ಹೋಗಲಿದೆ.

ಇನ್ನೂ ಮಾರ್ಚ್ 3ರಂದು ನೂತನ ಅನುಭವ ಮಂಟಪ ನಿರ್ಮಾಣವಾಗುತ್ತಿರುವ ಸ್ಥಳ, ಬಸವಕಲ್ಯಾಣ, ಬೀದರ್ ಜಿಲ್ಲೆಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಚಾಲನೆ ನೀಡಲಿದ್ದೇವೆ. ಅಲ್ಲದೆ ನಾಡಪ್ರಭು ಕೆಂಪೇಗೌಡ ಪ್ರತಿಮೆ, ದೇವನಹಳ್ಳಿ, ಬೆಂಗಳೂರು. ಈ ಯಾತ್ರೆಗೂ ಕೇಂದ್ರಗೃಹ ಸಚಿವ ಶ್ರೀ ಅಮಿತ್ ಅವರೇ ಚಾಲನೆ ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+