• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾಜ್ ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಎನ್.ರವಿಕುಮಾರ್

|
Google Oneindia Kannada News

ಬೆಂಗಳೂರು,ಡಿಸೆಂಬರ್ 6: ಗುಜರಾತ್ ನಲ್ಲಿ 27 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಕುರಿತು ಮಂಗಳವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಎಂದರೆ ಅಭಿವೃದ್ಧಿ, ಬಿಜೆಪಿ ಎಂದರೆ ರೈತಪರ, ಸ್ವಚ್ಛ ಭಾರತ ಎಂದರೆ ಬಿಜೆಪಿ, ಮೂಲಸೌಕರ್ಯ, ರಸ್ತೆಗಳ ನಿರ್ಮಾಣ ಎಂದರೆ ಬಿಜೆಪಿ, ಬಿಜೆಪಿ ಎಂದರೆ ಇಡೀ ದೇಶಕ್ಕೇ ಗೌರವ, ಗೌರವಯುತ ಪಾರ್ಟಿ ಎಂದರೆ ಬಿಜೆಪಿ- ಹೀಗೆ ಭಾರತೀಯ ಜನತಾ ಪಾರ್ಟಿ ದೇಶದ 130 ಕೋಟಿ ಜನರು ದೇಶದ ಕುರಿತು ಹೆಮ್ಮೆ ಪಡುವ ರೀತಿಯಲ್ಲಿ ಕೇಂದ್ರ- ವಿವಿಧ ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದೆ ಎಂದು ತಿಳಿಸಿದರು.

 ಬಿಜೆಪಿ ಕಚೇರಿ ಮೇಲೆ ನಿಂತಿದ್ದ ಜನರಿಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ರಾಹುಲ್‌ ಗಾಂಧಿ: ವಿಡಿಯೊ ನೋಡಿ ಬಿಜೆಪಿ ಕಚೇರಿ ಮೇಲೆ ನಿಂತಿದ್ದ ಜನರಿಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ರಾಹುಲ್‌ ಗಾಂಧಿ: ವಿಡಿಯೊ ನೋಡಿ

ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ ಮಾಡಲಿದೆ. ಮತ್ತೆ ಅಧಿಕಾರಕ್ಕೆ ಏರಲಿದೆ. ಬೊಮ್ಮಾಯಿ- ಯಡಿಯೂರಪ್ಪ ಅವರ ಜೋಡಿಯು ಈ ಮೋಡಿ ಮಾಡುವುದು ಖಚಿತ ಎಂದು ತಿಳಿಸಿದರು.

ಎಸ್‍ಸಿ, ಎಸ್‍ಟಿ ಮೀಸಲಾತಿಯನ್ನು ನಮ್ಮ ಸರಕಾರ ಹೆಚ್ಚಿಸಿದೆ. 55 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ನೀಡಲಾಗಿದೆ. ರೈತರ ಮಕ್ಕಳಿಗೆ, ನೇಕಾರರ ಮಕ್ಕಳಿಗೆ, ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸ್ಕಾಲರ್‍ಶಿಪ್ ಕೊಡುತ್ತಿದ್ದಾರೆ. ಪ್ರವಾಹಪೀಡಿತರ ಪರಿಹಾರ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಹಸು, ಎತ್ತು, ಮೇಕೆ ಕಳಕೊಂಡವರಿಗೆ ಪರಿಹಾರವನ್ನೂ ನಮ್ಮ ಸರಕಾರ ಕೊಡುತ್ತಿದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಅಭಿವೃದ್ಧಿಯ ಪರ್ವ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದವರು ಸುಮ್ಮನೆ ಬೊಗಳೆ ಬಿಟ್ಟುಕೊಂಡು ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಬರಿಯ ಭಾಷಣ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರೇನೂ ಜನ ಸೇರಿಸಬೇಕಿಲ್ಲ ಎಂದು ಆರೋಪಿಸಿದರು.

ಗುಜರಾತ್ ಚುನಾವಣೋತ್ತರ ಸಮೀಕ್ಷೆ; ಕರ್ನಾಟಕದಲ್ಲಿಯೂ ಪರಿಣಾಮ ಬೀರಲಿದೆ

ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ಜನ ಇಂದು ಸುಶಾನ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲವಿಲ್ಲ ಎಂದು ಸ್ಪಷ್ಟವಾಗಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಹೊಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದರು.

English summary
bjp will come to power again in gujarat says N. Ravikumar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X