ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ತೀರ್ಪನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಲ್ಲ

|
Google Oneindia Kannada News

ಬೆಂಗಳೂರು, ನವೆಂಬರ್ 09 : "ಇಡೀ ದೇಶವೇ ಅಯೋಧ್ಯೆ ತೀರ್ಪನ್ನು ಸ್ವಾಗತಿಸಿದೆ. ಬಿಜೆಪಿಗೆ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ" ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶನಿವಾರ ಅಯೋಧ್ಯೆ ಭೂ ವಿವಾದದ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು, "ಈ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ" ಎಂದರು.

ಅಯೋಧ್ಯೆ : ಸುಪ್ರೀಂ ತೀರ್ಪಿನಲ್ಲೂ ಬಿಜೆಪಿಗೆ 'ಎಚ್ಚರಿಕೆ' ನೀಡಿದ ಶಿವಸೇನೆ ಅಯೋಧ್ಯೆ : ಸುಪ್ರೀಂ ತೀರ್ಪಿನಲ್ಲೂ ಬಿಜೆಪಿಗೆ 'ಎಚ್ಚರಿಕೆ' ನೀಡಿದ ಶಿವಸೇನೆ

"ಬಹಳ ವರ್ಷಗಳಿಂದ ಅಯೋಧ್ಯೆ ವಿವಾದ ಇತ್ತು. ಈ ವಿವಾದವನ್ನು ಬಗೆಹರಿಸಿದ ನ್ಯಾಯಾಂಗ ಮೇಲೆ ಗೌರವ ಹೆಚ್ಚಾಗಿದೆ. ಸತ್ಯ ಮೇವ ಜಯತೆ ಎನ್ನುವ ಮಾತು ಮತ್ತೊಮ್ಮೆ ನಿಜವಾಗಿದೆ" ಎಂದು ತಿಳಿಸಿದರು.

ಅಯೋಧ್ಯೆ ಐತಿಹಾಸಿಕ ತೀರ್ಪು: ಅರ್ಜಿದಾರರಿಗೆ ಸಿಹಿ-ಕಹಿಅಯೋಧ್ಯೆ ಐತಿಹಾಸಿಕ ತೀರ್ಪು: ಅರ್ಜಿದಾರರಿಗೆ ಸಿಹಿ-ಕಹಿ

BJP Will Not Use Ayodhya Verdict For Politics

"ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಎಲ್ಲರೂ ಶಾಂತಿಯಿಂದ ಇರಬೇಕು. ಬಿಜೆಪಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ" ಎಂದು ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದರು.

ಅಯೋಧ್ಯೆ ವಿವಾದ; ಅಲಹಾಬಾದ್ ಕೋರ್ಟ್ ತೀರ್ಪು ಏನಾಗಿತ್ತು? ಅಯೋಧ್ಯೆ ವಿವಾದ; ಅಲಹಾಬಾದ್ ಕೋರ್ಟ್ ತೀರ್ಪು ಏನಾಗಿತ್ತು?

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಶನಿವಾರ ಅಯೋಧ್ಯೆ ಭೂ ವಿವಾದದ ತೀರ್ಪು ನೀಡಿದೆ.

ಅಯೋಧ್ಯೆ ತೀರ್ಪಿನ ಹಿನ್ನಲೆಯಲ್ಲಿ ದೇಶಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಬಿಜೆಪಿ ಈ ತೀರ್ಪನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳಲಿದೆ ಎಂದು ಕೆಲವು ನಾಯಕರು ಆರೋಪ ಮಾಡುತ್ತಿದ್ದಾರೆ.

English summary
Karnataka BJP president Nalin Kumar Kateel welcomed Ayodhya verdict by the supreme court. Party will not use it for politics clarified state unit president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X