ಲೋಕಸಭಾ ಚುನಾವಣೆಯಲ್ಲಿ 200 ಗಡಿ ದಾಟದ ಬಿಜೆಪಿ: ಚರ್ಚೆಯಾಗುತ್ತಿದೆ ಆರ್‌ಎಸ್‌ಎಸ್ ಸರ್ವೇ
ಬೆಂಗಳೂರು, ಏಪ್ರಿಲ್, 07: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗೆಯೇ ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಅಮಿತ್ ಅವರು ಪರಪರಿಹಾರದ ಬಗ್ಗೆ ಮಾಡಿರುವ ಆರೋಪ ಹಾಗೂ ಆಎಸ್‌ಎಸ್ ಸಮೀಕ್ಷೆಯ ಬಗ್ಗೆ ಪ್ರಿಯಾಂಕ್ ಖರ್ಗೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆ ಪ್ರಕಾರ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಗೆಲ್ಲುವುದಿಲ್ಲ ಮತ್ತು ರಾಜ್ಯದಲ್ಲಿ 8 ಸ್ಥಾನಗಳನ್ನೂ ದಾಟುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ (ಏಪ್ರಿಲ್ 06) ಹೇಳಿದ್ದಾರೆ.

ಇನ್ನು ಆರ್‌ಎಸ್‌ಎಸ್‌ನ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿಗೆ 200 ಸೀಟು ಬರುವುದಿಲ್ಲ ಎಂದು ಆರ್‌ಎಸ್‌ಎಸ್ ಹೇಳುತ್ತಿದೆ. ರಾಜ್ಯದಲ್ಲಿ 8 ಸೀಟನ್ನೂ ದಾಟುವುದಿಲ್ಲ, ಇನ್ನೂ 14-15 ಸೀಟುಗಳನ್ನು ಅವರು ಹೇಗೆ ಗೆಲ್ಲುತ್ತಾರೆ? ಎಂದು ಪ್ರಿಯಾಂಕ್ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.
ಕೆಲವು ಬಿಜೆಪಿ ನಾಯಕರು ಒಂದು ಕುಟುಂಬದಿಂದ ಬಿಜೆಪಿ ರಾಜ್ಯದಲ್ಲಿ ಕಲುಷಿತವಾಗಿದೆ ಎಂದು ಹೇಳುತ್ತಿದ್ದಾರೆ. ಹಾಗೂ ಮೂಲ ಬಿಜೆಪಿಯನ್ನು ಮರುಸ್ಥಾಪನೆ ಮಾಡಲು ಬಯಸಿದ್ದಾರೆ ಎಂದು ಹೇಳುತ್ತಿದ್ದಾರೆ. ನಾವು ಅದನ್ನು ಹೇಳುತ್ತೇವೆಯೇ?. ಇನ್ನು ಬಿಜೆಪಿಯಲ್ಲಿ ಹಿಂದುತ್ವವಾದಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ.ಟಿ.ರವಿ, ಅನಂತ್‌ಕುಮಾರ್ ಹೆಗಡೆ, ಈಶ್ವರಪ್ಪ ಅವರಿಗೆ ಅನ್ಯಾಯ ಆಗುತ್ತಿದೆ ಎಂದು ಹೇಳುವ ಮೂಲಕ ಅವರೇ ಹೋರಾಟ ಮಾಡುತ್ತಿದ್ದಾರೆ ಅಂತಾ ಹೇಳಿದರು.
ಇನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ 370 ಸ್ಥಾನಗಳನ್ನು ಗೆಲ್ಲಲಿದೆ ಮತ್ತು ಒಟ್ಟಾರೆಯಾಗಿ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಎಲ್ಲಾ ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ ಅಂತಲೂ ಹೇಳಿದ್ದಾರೆ.
ಮತ್ತೊಂದೆಡೆ ಬರ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂದು ಆರೋಪಿಸಿದ ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ ಅವರು, ಅಮಿತ್ ಶಾ ಅವರು "ತಪ್ಪು ಮಾಹಿತಿಯ ಮಂತ್ರಿ" ಆಗಿರಬೇಕು ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಪರಿಹಾರಕ್ಕಾಗಿ ಮುಖ್ಯಮಂತ್ರಿ ಭೇಟಿ ಮಾಡಿದ್ದು ಸುಳ್ಳೇ? ಕೇಂದ್ರ ತಂಡ ಬಂದು ಇಲ್ಲಿ ಸಮೀಕ್ಷೆ ನಡೆಸಿದ್ದು ಸುಳ್ಳೇ? ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ್ದು, ಈ ವೇಳೆ ಕರ್ನಾಟಕದ ಬರ ನಿರ್ವಹಣೆಯ ಬಗ್ಗೆ ಆಶ್ವಾಸನೆ ನೀಡಿದ್ದು ಸುಳ್ಳೇ? ಅಮಿತ್ ಶಾ ಯಾಕೆ ಇಷ್ಟೊಂದು ಸುಳ್ಳು ಹೇಳುತ್ತಿದ್ದಾರೆ? ಎಂದು ಪ್ರಶ್ನಿಸುವ ಮೂಲಕ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನುದ್ದೇಶಿಸಿ ಮಾತನಾಡಿದ ಶಾ, ಕರ್ನಾಟಕದಲ್ಲಿ ಬರಗಾಲವಿದೆ, ರಾಜ್ಯ ಸರ್ಕಾರ ಮೂರು ತಿಂಗಳು ತಡವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ ಮತ್ತು ಇಂದು ಕೇಂದ್ರದಿಂದ ಬರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು.
ಇನ್ನು ರಾಜ್ಯ ಬಿಜೆಪಿ ಉಸ್ತುವಾರಿ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರಿಂದ ಉತ್ತರ ನೀಡುವಂತೆ ಆಗ್ರಹಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಉತ್ತರ ಕೇಳಿದರು.
ರಾಜ್ಯ ಸರ್ಕಾರವು ಪ್ರಸ್ತಾವನೆಯನ್ನು ನೀಡಿದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ತಿಳಿಸಿ. ಅಕ್ಟೋಬರ್ 31ಕ್ಕೆ ಗಡುವು ನೀಡಲಾಗಿತ್ತು. ಬಳಿಕ ನಾವು ಸೆಪ್ಟೆಂಬರ್ 23ಕ್ಕೆ ನೀಡಿದ್ದೆವು. ಆದರೆ ಅಮಿತ್ ಶಾ ಬರೀ ಸುಳ್ಳು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.












Click it and Unblock the Notifications