ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ: ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 01: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಲಿದೆ. ತಂದೆಯವರ ಆಶಯ ಮತ್ತು ಸೂಚನೆಯಂತೆ ಲೋಕಸಭಾ ಚುನಾವಣೆ ಮುಗಿಯುವ ವರೆಗೆ ರಾಜ್ಯಾಧ್ಯಕ್ಷನಾಗಿ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಈ ಕುರಿತು ಬಿ ವೈ ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಆದರೂ, ರಾಜ್ಯ ಸರಕಾರ ಮಲಗಿದೆ. ಅಧಿವೇಶನದಲ್ಲಿ ಸರಕಾರದ ಕಿವಿ ಹಿಂಡುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ಭರವಸೆ ನೀಡಿದರು. ಬರಗಾಲದ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಇಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ರಾಜ್ಯದ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲಲು ಸಹಕರಿಸಿ ಎಂದು ಮನವಿ ಮಾಡಿದ ಅವರು, ಕಾಂಗ್ರೆಸ್ ಸರಕಾರ ಭ್ರಷ್ಟ, ದುಷ್ಟ ಸರಕಾರ. ರಾಜ್ಯದಲ್ಲಿ ರೈತವಿರೋಧಿ, ದಲಿತವಿರೋಧಿ ಸರಕಾರವಿದೆ. ಅದಕ್ಕೆ ತಕ್ಕ ಪಾಠ ಕಲಿಸಿ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು. ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಶಿಕಾರಿಪುರದ ಕಾಂಗ್ರೆಸ್ ಪುಡಾರಿಗಳ ಆರ್ಭಟ ಸ್ವಲ್ಪ ಹೆಚ್ಚಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಲಿದೆ. ಆ ಬಳಿಕ ಕಾಂಗ್ರೆಸ್ ಪಕ್ಷದ ಟೈರ್ ಪಂಕ್ಚರ್ ಆಗಿ, ಪುಡಾರಿಗಳ ಪುಂಗಿ ಊದುವುದು ನಿಲ್ಲಲಿದೆ ಎಂದು ತಿಳಿಸಿದರು.
ಬಡವರು, ರೈತರು, ಪರಿಶಿಷ್ಟ ಜಾತಿ, ಪಂಗಡದ ಜನರು ಸೇರಿ ಎಲ್ಲರಿಗಾಗಿ ಶ್ರಮಿಸಿದ ಮಾಜಿ ಸಿಎಂ ಯಡಿಯೂರಪ್ಪ ಅವರು ಬಿಜೆಪಿಯನ್ನು ರಾಜ್ಯದ ಮೂಲೆಮೂಲೆಗೆ ಒಯ್ದವರು. 9 ಬಾರಿ ಯಡಿಯೂರಪ್ಪ ಅವರನ್ನು ಶಾಸಕರಾಗಿ ಮಾಡಿದ ಶಿಕಾರಿಪುರದ ಜನತೆಗೆ ಧನ್ಯವಾದಗಳು ಎಂದು ತಿಳಿಸಿದ ಅವರು, ರಾಘವೇಂದ್ರರನ್ನು ಸಂಸದರಾಗಿ ಮಾಡಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷನಾಗಿ ರಾಜ್ಯದ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲಲು ಸಹಕರಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಸರಕಾರ ಭ್ರಷ್ಟ, ದುಷ್ಟ ಸರಕಾರ. ರಾಜ್ಯದಲ್ಲಿ ರೈತವಿರೋಧಿ, ದಲಿತವಿರೋಧಿ ಸರಕಾರವಿದೆ. ಅದಕ್ಕೆ ತಕ್ಕ ಪಾಠ ಕಲಿಸಿ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ರೂಪಿಸುವಂಥದ್ದು. ಕಾರ್ಯಕರ್ತರು ನಾನೇ ರಾಘಣ್ಣ, ನಾನೇ ಯಡಿಯೂರಪ್ಪ ಎಂದು ಭಾವಿಸಿ ಮನೆಮನೆಗೆ ಭೇಟಿ ಕೊಡಿ. ಈ ಮೂಲಕ ದೊಡ್ಡ ಅಂತರದಲ್ಲಿ ಶಿಕಾರಿಪುರದಲ್ಲಿ ಹಾಗೂ ಇತರ ಕಡೆ ಪಕ್ಷದ ಗೆಲುವಿಗೆ ಸಹಕರಿಸಿ ಎಂದು ಮನವಿ ಮಾಡಿದರು.
ಕನ್ನಡ ನಾಡಿನ ಕೋಟ್ಯಾಂತರ ಹೃದಯಗಳಲ್ಲಿ ನೆಲೆಸಿರುವ ಹೋರಾಟವನ್ನೇ ಉಸಿರಾಗಿಸಿಕೊಂಡಿರುವ ಯಡಿಯೂರಪ್ಪ ಅವರನ್ನು ಆಶೀರ್ವದಿಸಿದ ಶಿಕಾರಿಪುರದ ಜನರ ಪ್ರೀತಿ ಅನನ್ಯವಾದುದು. ಈ ಮಣ್ಣಿನ ಪ್ರಭಾವ ಹಾಗೂ ಜನರ ಹಾರೈಕೆ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಹೆಗಲಿಗೇರಿಸಿದೆ. ಈ ನಿಟ್ಟಿನಲ್ಲಿ ಯಶಸ್ಸಿನ ಹೆಜ್ಜೆಗಳನ್ನಿಟ್ಟು ಕ್ಷೇತ್ರಕ್ಕೆ ಘನತೆ ತಂದು ಕೊಡುವ ಹೊಣೆ ನನ್ನ ಮೇಲಿದ್ದು ಕ್ಷೇತ್ರದ ಜನರ ಸಹಕಾರ, ಬೆಂಬಲವೇ ನನಗೆ ಶ್ರೀರಕ್ಷೆ ಎಂದು ತಿಳಿಸಿ ಆಶೀರ್ವಾದ ಕೋರಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಜನರ ಆಶೀರ್ವಾದದಿಂದ ವಿಜಯಣ್ಣ ಮತ್ತು ಅಶೋಕ್ ಅವರು ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿಜೀ ಅವರಿಗೆ ಒಂದು ಕೊಡುಗೆ ಕೊಡಬೇಕಿದೆ ಎಂದು ಹೇಳಿದರು.












Click it and Unblock the Notifications