ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೆ 130 ಸೀಟು, ಕಾಂಗ್ರೆಸ್ 70 ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ : ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮೇ 13 : 'ಬಿಜೆಪಿ 125 ರಿಂದ 130 ಸ್ಥಾನಗಳಲ್ಲಿ ಜಯಗಳಿಸಲಿದೆ. ಸೋಮವಾರ ಪ್ರಮಾಣ ವಚನದ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಭಾನುವಾರ ಬೆಂಗಳೂರಿನ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು, 'ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಕರೆ ಮಾಡಿ ಮಾಹಿತಿ ಸಂಗ್ರಹಣೆ ಮಾಡಲಾಗಿದೆ. ಪಕ್ಷ 125-130 ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

Exit Poll ಬಗ್ಗೆ ಹೆಚ್ಚು‌ ತಲೆಕೆಡಿಸಿಕೊಳ್ಳಬೇಡಿ : ಸಿದ್ದರಾಮಯ್ಯ ಟ್ವೀಟ್Exit Poll ಬಗ್ಗೆ ಹೆಚ್ಚು‌ ತಲೆಕೆಡಿಸಿಕೊಳ್ಳಬೇಡಿ : ಸಿದ್ದರಾಮಯ್ಯ ಟ್ವೀಟ್

BJP will win more than 125 seats says BS Yeddyurappa

ಕರ್ನಾಟಕ ಸಮೀಕ್ಷೆ ಸರಾಸರಿ : ಬಿಜೆಪಿಗೆ 107, ಅಧಿಕಾರಕ್ಕೆ ಹತ್ತಿರಕರ್ನಾಟಕ ಸಮೀಕ್ಷೆ ಸರಾಸರಿ : ಬಿಜೆಪಿಗೆ 107, ಅಧಿಕಾರಕ್ಕೆ ಹತ್ತಿರ

ಯಡಿಯೂರಪ್ಪ ಪತ್ರಿಕಾಗೋಷ್ಠಿ ಮುಖ್ಯಾಂಶಗಳು

Newest FirstOldest First
11:38 AM, 13 May

* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ ಮತ್ತು ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲಿ ಸೋಲು ಅನುಭವಿಸಲಿದ್ದಾರೆ.
11:38 AM, 13 May

* ಕರ್ನಾಟಕದ ಭ್ರಷ್ಟ, ರೈತ, ಜನ ವಿರೋಧಿ ಸರ್ಕಾರವನ್ನು ಜನರು ತಿರಸ್ಕರಿಸಿದ್ದಾರೆ. ಎಲ್ಲಾ ಕ್ಷೇತ್ರಗಳಿಂದಲೂ ಅಭಿಪ್ರಾಯವನ್ನು ಸಂಗ್ರಹಿಸಿದ್ದೇವೆ
11:35 AM, 13 May

* ಮಂಗಳವಾರ ಸಂಜೆ ದೆಹಲಿಗೆ ಭೇಟಿ ನೀಡಿದ ಬಳಿಕ ವರಿಷ್ಠರ ಜೊತೆ ಚರ್ಚಿಸಿ ಪ್ರಮಾಣ ವಚನದ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ.
11:33 AM, 13 May

* ಮಂಗಳವಾರ ನಾವೆಲ್ಲರೂ ಒಟ್ಟಿಗೆ ಇರುತ್ತೇವೆ. ಅಂದು ಸಂಜೆ ದಹೆಲಿಗೆ ತೆರಳಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ
11:32 AM, 13 May

* ಇಂದು ಮತ್ತು ನಾಳೆ ಬೆಂಗಳೂರಿನಲ್ಲಿಯೇ ಇರುತ್ತೇನೆ. ಕಾರ್ಯಕರ್ತರ ಜೊತೆ ಮಾತುಕತೆ ನಡೆಸುತ್ತೇನೆ. ಪ್ರತಿ ಜಿಲ್ಲೆಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸುತ್ತೇನೆ.
11:31 AM, 13 May

* ಕರ್ನಾಟಕದ ಜನರು ಸಿದ್ದರಾಮಯ್ಯ ಸರ್ಕಾರವನ್ನು ಎಂದಿಗೂ ಕ್ಷಮಿಸುವುದಿಲ್ಲ. ಮತದಾನದ ಮೂಲಕ ಅವರು ಕಾಂಗ್ರೆಸ್ ಪಕ್ಷಕ್ಕೆ ಪೆಟ್ಟು ಕೊಟ್ಟಿದ್ದಾರೆ.
11:29 AM, 13 May

* ಕಾಂಗ್ರೆಸ್ ಪಕ್ಷ 70ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವುದಿಲ್ಲ. ಜೆಡಿಎಸ್ 22.23, ಇತರೆ ಪಕ್ಷದ ಅಭ್ಯರ್ಥಿಗಳು 3-4 ಸ್ಥಾನಗಳಲ್ಲಿ ಜಯಗಳಿಸಲಿದೆ
Advertisement

English summary
Karnataka BJP president B.S.Yeddyurappa on Sunday, May 13, 2018 said that, BJP will win more than 125 seats in Karnataka assembly elections 2018. In a confident he said that Congress will not win more than 70 seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X