ಕರ್ನಾಟಕ; ರಾಜ್ಯಸಭೆ ಉಪ ಚುನಾವಣೆ, ಬಿಜೆಪಿ ಅಭ್ಯರ್ಥಿ ಆಯ್ಕೆ

ಬೆಂಗಳೂರು, ನವೆಂಬರ್ 23: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯಬೇಕಿದ್ದ ಉಪ ಚುನಾವಣೆಯಲ್ಲಿ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾದರು. ಡಿಸೆಂಬರ್ 1ರಂದು ಉಪ ಚುನಾವಣೆ ನಡೆಯಬೇಕಿತ್ತು.

ಸೋಮವಾರ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಯಾವ ಅಭ್ಯರ್ಥಿಯೂ ನಾಪತ್ರ ಸಲ್ಲಿಸಿದ ಕಾರಣ ಬಿಜೆಪಿಯ ಡಾ. ಕೆ. ನಾರಾಯಣ ಅವರು ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದರು.

ಉಪ ಚುನಾವಣೆಯ ಚುನಾವಣಾಧಿಕಾರಿ, ಕರ್ನಾಟಕ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದರು. ಡಾ. ಕೆ. ನಾರಾಯಣ ಅವರು ವಿಶಾಲಕ್ಷಿ ಅವರಿಂದ ಪ್ರಮಾಣ ಪತ್ರ ಸ್ವೀಕಾರ ಮಾಡಿದರು.

BJP Wins Rajya Sabha By Election Unopposed

ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಅಶೋಕ್ ಗಸ್ತಿ ಅವರು ಕೋವಿಡ್‌ನಿಂದಾಗಿ ಮೃತಪಟ್ಟ ಕಾರಣ ಸ್ಥಾನ ತೆರವಾಗಿತ್ತು. ಚುನಾವಣಾ ಆಯೋಗ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಿತ್ತು. ಡಿಸೆಂಬರ್ 1ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನವೆಂಬರ್ 18ರಂದು ರಾಜ್ಯಸಭೆ ಉಪ ಚುನಾವಣೆ ಅಭ್ಯರ್ಥಿ ಡಾ. ಕೆ. ನಾರಾಯಣ ಅವರಿಗೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿ-ಫಾರಂ ವಿತರಣೆ ಮಾಡಿದ್ದರು. ಅಂದೇ ನಾಮಪತ್ರವನ್ನು ಸಲ್ಲಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+