ಪಿಎಫ್ ಐ ಮೇಲಿನ ಕೇಸ್ ವಾಪಸ್ ಪಡೆದಿದ್ದು ಬಿಜೆಪಿ: ದೊಡ್ಡ ಪಟ್ಟಿಯೇ ಇದೆ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರು, ಅಕ್ಟೋಬರ್‌ 15: ಶ್ರೀರಾಮ ಸೇನೆ, ಭಜರಂಗದಳ, ಹಿಂದೂ ಜಾಗರ ವೇದಿಕೆ ಸದಸ್ಯರೇ ಇದರ ಲಾಭ ಪಡೆದಿದ್ದಾರೆ. 2018- 20 ರ ಸಾಲಿನಲ್ಲಿ 127 ಕೇಸ್ ಗಳನ್ನು ಬಿಜೆಪಿ ಹಿಂದಕ್ಕೆ ಪಡೆದಿದೆ. ಇದರ ಫಲಾನುಭವಿಗಳು ಪಿಎಫ್ ಐ, ಎಸ್ ಡಿಪಿಐ ಅವರ ಮೇಲಿದ್ದ ಕೇಸ್ ಗಳನ್ನೂ ಹಿಂದಕ್ಕೆ ಪಡೆಯಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದರು.

ಇತ್ತೀಚೆಗೆ ನಡೆದ ಸಚಿವ ಸಂಪುಟಸಭೆಯಲ್ಲಿ 43 ಕೇಸ್ ಗಳನ್ನು ಹಿಂಪಡೆಯಲಾಗಿದೆ. ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದವರ ಮೇಲಿನ ಪ್ರಕರಣಗಳನ್ನು ಡಾ.ಎಂ.ಸಿ.ಸುಧಾಕರ್ ಅವರ ಮನವಿ ಮೇರೆಗೆ ಹಿಂಪಡೆಯಲಾಗಿದೆ.

BJP withdrew the case on PFI Says Ramalinga Reddy

ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್.ಭಾಸ್ಕರ್, ಕರವೇಯ ನಾರಾಯಣ ಗೌಡ, ಗಣರಾಜ್ಯ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಇರುವ ಕಾರಣಕ್ಕೆ ನಡೆದ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ದ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆ.

ಇದರಲ್ಲಿ ಹಳೇ ಹುಬ್ಬಳ್ಳಿ ಪ್ರಕರಣವೂ ಒಂದು ಇದನ್ನೂ ಸಹ ನಾವು ವಾಪಸ್ ಪಡೆದಿದ್ದೇವೆ. ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆದಿದ್ದರು ಎನ್ನುವ ದೊಡ್ಡ ಪಟ್ಟಿಯೇ ಇದೆ.

ಬಿಜೆಪಿಯವರು 385 ಪ್ರಕರಣಗಳನ್ನು ಹಿಂದಕ್ಕೆ ಪಡೆದಿದ್ದರು. ಇದರಲ್ಲಿ 182 ಪ್ರಕರಣಗಳು ಕೋಮು ದ್ವೇಷ ಸೇರಿದಂತೆ ಅನೈತಿಕ ಪೊಲೀಸ್ ಗಿರಿ, ಪಬ್ ದಾಳಿ ಸೇರಿದಂತೆ ಈ ರೀತಿಯ ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ. ಇದರಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಆರೋಪಿಗಳ ಮೇಲಿನ ಪ್ರಕರಣಗಳು ಇಲ್ಲವಾಗಿದೆ. 2022 ರಲ್ಲಿ 62 ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗುತ್ತದೆ. ಸಿ.ಟಿ.ರವಿ, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ, ಹಾಲಪ್ಪ ಆಚಾರ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜೆ.ಸಿ.ಮಾಧುಸ್ವಾಮಿ ಅವರು ಇದರ ಫಲಾನುಭವಿಗಳು.

ನಾನು ಗೃಹ ಸಚಿವ ಆಗಿದ್ದಾಗ ನಡೆದ ಪರೇಸ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಏನೇನೋ ಮಾಡಿದರು. ನಂತರ ಎನ್ ಐಎ ತನಿಖಾ ತಂಡ ಆತನ ಸಾವನ್ನು ಆಕಸ್ಮಿಕ ಎಂದು ಹೇಳಿತು.
ಬಿಜೆಪಿಯವರು ಹೆಣ ಬಿದ್ದರೆ ಸಾಕು ರಣಹದ್ದುಗಳಂತೆ ಕಾಯುತ್ತಿರುತ್ತಾರೆ. ಬಿಜೆಪಿಯವರ ಹೆಣದ ಮೇಲಿನ ರಾಜಕೀಯದ ಬಗ್ಗೆ ಪುಸ್ತಕವಿದ್ದು ಅದನ್ನು ಮತ್ತೊಮ್ಮೆ ಮುದ್ರಿಸಲಾಗುವುದು.

ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ ಕಲಂ 321 ರ ಅಡಿ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದರೂ ವಾಪಸ್ ಪಡೆಯುವ ಅಧಿಕಾರ ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗಿದೆ. ಗೃಹ ಇಲಾಖೆಗೆ ಕೇಸಿಗೆ ಸಂಬಂಧ ಪಟ್ಟವರು ವಾಪಸ್ ಪಡೆಯಬೇಕು ಎಂದು ಮನವಿ ಸಲ್ಲಿಸಿರುತ್ತಾರೆ.

ಇದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅನೇಕ ಬಾರಿ ದುರುದ್ದೇಶಪೂರಿತವಾಗಿ ಕೇಸ್ ದಾಖಲಿಸಲಾಗಿರುತ್ತದೆ. ರೈತರ ಪರ, ಭಾಷೆ, ಜಲವಿವಾದ ಸೇರಿದಂತೆ ಅನೇಕ ಸಂಘಟನೆಗಳು ಹೋರಾಟ ನಡೆಸಿರುತ್ತವೆ. ಬಿಜೆಪಿಯಲ್ಲಿ ಸುಳ್ಳು ಹೇಳುವವರನ್ನೇ ವಕ್ತಾರನ್ನಾಗಿ ಮಾಡಿಕೊಂಡಿದ್ದಾರೆ. ಬಿಜೆಪಿಯವರ ಸುಳ್ಳುಗಳನ್ನೇ ಜನರು ನಂಬಬಾರದು ಎಂದು ಸತ್ಯವನ್ನು ತಿಳಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+