Panchayat Election: ವಿಜಯೇಂದ್ರ ನೇತೃತ್ವದಲ್ಲೇ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ; ಎಂಪಿ ರೇಣುಕಾಚಾರ್ಯ
ರಾಜ್ಯದಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲೇ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಿಡಿ ಕಾರಿರುವ ಅವರು ಅವರಿಗೆ ಬಿಜೆಪಿ ಮೇಲೆ ಅಭಿಮಾನ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಎಂಪಿ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕಿಡಿ ಕಾರಿದರು. ಯತ್ನಾಳ್ ಅವರನ್ನು ಲೂಸ್ ಟಾಕ್, ಬಿಜೆಪಿ ನಾಯಕರನ್ನು ನಿಂದಿಸುವುದೇ ಅವರ ಕೆಲಸವಾಗಿದೆ. ಪಕ್ಷದ ಮೇಲೆ ಅಭಿಮಾನವಿದ್ದ ಬೀದಿಯಲ್ಲಿ ಜಗಳ ಮಾಡುತ್ತಿರಲಿಲ್ಲ. ಶಿಸ್ತು ಸಮಿತಿ ಅಧ್ಯಕ್ಷರು ನೋಟಿಸ್ ಕೊಟ್ಟಾಗ ಅದನ್ನು ಫೇಕ್ ಅಂದರು, ವಿಜಯೇಂದ್ರ ಬಗ್ಗೆ ಮಾತನಾಡಲು ಅವರಿಗೆ ನೈತಿಕಥೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಸತ್ಯ. ಅವರ ನೇತೃತ್ವದಲ್ಲಿ ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮುಂದಿನ ವಿಧಾನಸಭಾ ಚುನಾವಣೆ ಎದುರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಪಕ್ಷದ ಜಗಳವನ್ನು ಬೀದಿಗೆ ತಂದು ನಿಲ್ಲಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ ನಾಯಕರ ವಿರುದ್ಧ ತಿರುಗಿಬಿದ್ದಿದ್ದು, ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಟೀಕಿಸುವ ಮೂಲಕ ಪಕ್ಷಕ್ಕೆ ಮುಜುಗರ ತರುತ್ತಿದ್ದಾರೆ.












Click it and Unblock the Notifications