ಅಪಹಾಸ್ಯ ಮಾಡಿದವರೇ 'ಮೋದಿ ಗ್ಯಾರಂಟಿ' ಶುರು ಮಾಡಿದ್ದಾರೆ: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಜನವರಿ 10: ಸತ್ಯ ಹೇಳಿ ಲಾಭ ಪಡೆಯುವ ಪ್ರಯತ್ನ ಮಾಡಬೇಕು. ಹಣವಿಲ್ಲದೆ ಇಷ್ಟು ದೊಡ್ಡ ಕಾರ್ಯಕ್ರಮ ಜಾರಿ ಮಾಡಲು ಸಾಧ್ಯವೇ?. 'ಗ್ಯಾರಂಟಿ'ಗಳನ್ನು ಅಪಹಾಸ್ಯ ಮಾಡಿದವರೇ ಈಗ 'ಮೋದಿ ಗ್ಯಾರಂಟಿ' ಶುರು ಮಾಡಿದ್ದಾರೆ ಎಂದು ಬರ ಪರಿಹಾರ ನೀಡಲ್ಲವೆಂದು ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು ಬರ ಪರಿಹಾರ, ಬಿಜೆಪಿ ನಡೆ, ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಪ್ರಸ್ತಾಪಿಸಿ ಕರ್ನಾಟಕ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ.
ಗ್ಯಾರೆಂಟಿ ನಿರ್ಧಾರ ಸಮರ್ಥಿಸಿಕೊಂಡ ಸಿದ್ದರಾಮಯ್ಯ
ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು ಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದು ಅವರು ತಮ್ಮ ಸರ್ಕಾರದ ನಿರ್ಧಾರಗಳನ್ನು ಸಮರ್ಥಿಸಿಕೊಂಡರು.

ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಬೇಕು. ಇಷ್ಟು ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯಲು ಸಾಧ್ಯವೇ? ನಮ್ಮವರೇ ವಿರೋಧ ಪಕ್ಷಗಳ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ಮಾಡಲು ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.
ಕೇಂದ್ರದ ನೆರವಿಗೆ ಕಾಯದೇ ರೈತರಿಗೆ ಹಣ ಜಮೆ
ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಗೃಹ ಸಚಿವ ಅಮಿತ್ ಶಾ ಅವರು, ಭೇಟಿ ಮಾಡಿ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ. ವರೆಗೆ ರೈತರಿಗೆ ಇನ್ಪುಟ್ ಸಬ್ಸಿಡಿ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
1ಲಕ್ಷ 66 ಸಾವಿರ ಕೋಟಿ ಹಣ ಬರಬೇಕಿತ್ತು, ಬಂದಿಲ್ಲ
ಬಿಜೆಪಿಯವರು ಬರ ಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. 25 ಸಂಸದರು ರಾಜ್ಯದಿಂದ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆಯಾಗಿದೆ. 1ಲಕ್ಷ 66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು. 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ ಹೊರತು ತಮ್ಮದಲ್ಲ ಎಂದು ಅವರು ದೂರಿದರು.
ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ.
— CM of Karnataka (@CMofKarnataka) January 10, 2024
ನಾವು ಸತ್ಯ ಹೇಳಿ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರು…
ಅನುದಾನ ಕೊಡದ್ದನ್ನು ಸಂಸದರ ಪ್ರಶ್ನಿಸಲಿ
ಸೆಸ್, ಸರ್ಚಾರ್ಜ್ ನಲ್ಲಿ ಕರ್ನಾಟಕಕ್ಕೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹಿಸುತ್ತಾರೆ. 52 ಸಾವಿರ ಕೋಟಿ ರೂ.ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು.
ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಸರಕು ಸೇವಾ ತೆರಿಗೆ (ಜಿಎಎಸ್‌ಟಿ) ನಷ್ಟವನ್ನು ಭರಿಸಿದ್ದರೂ, ನಮಗೆ ಹಣ ಕೊಟ್ಟಿಲ್ಲ. ರಾಜ್ಯದ ಸಂಸದರೂ ತುಟಿಕ್ ಪಿಟಿಕ್ಕೆನ್ನದೇ ಇದ್ದಾರೆ. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತದೆ.
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳಿಸಿಕೊಟ್ಟು ಅದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು ಎಂದು ಹೇಳಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications