ಪಾಕಿಸ್ತಾನ್ ಜಿಂದಾಬಾದ್ ಘೋಷಣೆ; ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು ಎಂದ ಕಾಂಗ್ರೆಸ್ ಶಾಸಕ
ಶಿವಮೊಗ್ಗ, ಸೆಪ್ಟೆಂಬರ್ 9: ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಈ ಘಟನೆ ನಡೆದಿದ್ದು, ಇದರ ಬೆನ್ನಲ್ಲೇ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ಈದ್ ಮಿಲಾದ್ ಮೆರವಣಿಗೆಯ ವೇಳೆ 'ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಮರೆವಣಿಗೆಯ ಸಂದರ್ಭದಲ್ಲಿಯೇ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪಾಲಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ರೆ, ಇತ್ತ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ ಅವರು ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ ಅವರು, ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು. ಇದೇ ನನ್ನ ಆಸೆ ಎಂದಿದ್ದಾರೆ. ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತಾಡಿ ಬಂದಿದ್ದೇನೆ ಅಂದ್ರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು ಎಂದು ಹೇಳಿದ್ದಾರೆ. ನಿಮ್ಮ ಮನೆಯ ಮಗನಾಗಿ ಕೊನೆಯವರೆಗೂ ಇರುತ್ತೇನೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ, ಮುಸ್ಲಿಂ ಆಗಿ ಹುಟ್ಟಬೇಕು ಅನ್ನೋದೆ ನನ್ನ ಆಸೆ. ಈ ಕಾರ್ಯಕ್ರಮ ಪುತ್ರ ಮೇಲೂ ನಿಮ್ಮ ಆಶೀರ್ವಾದ ಇರಲಿ
ಇನ್ನೂ ತಮ್ಮ ಪುತ್ರ ಗಣೇಶನ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದು ಕಾಂಗ್ರೆಸ್ ಶಾಸಕ ಸಂಗಮೇಶ್ ಮನವಿ ಮಾಡಿದ್ದಾರೆ. ಈ ಮೂಲಕ ಪುತ್ರನ ರಾಜಕೀಯಕ್ಕೂ ಬುನಾದಿ ಹಾಕಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪುತ್ರ ಗಣೇಶನನ್ನು ಭದ್ರಾವತಿಯಲ್ಲಿ ಕಣಕ್ಕಿಳಿಸುವ ಸುಳಿವನ್ನ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ ನೀಡಿದ್ದಾರೆ.
'ಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್ ಅಜೆಂಡಾ: ವಿಜಯೇಂದ್ರ
ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ ದುಷ್ಕರ್ಮಿಗಳು ಈಗ ರಸ್ತೆ-ರಸ್ತೆಗಳಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ. ಇದೆ ನಿಟ್ಟಿನಲ್ಲಿ ನೆನ್ನೆ ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲೂ 'ಪಾಕಿಸ್ತಾನ್ ಜಿಂದಾಬಾದ್' ಕೂಗಿರುವ ಘಟನೆ ಕಡು ದೇಶದ್ರೋಹ ಕೃತ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಧರ್ಮಸ್ಥಳವಾಯಿತು, ಸಾಂಪ್ರದಾಯಿಕ ದಸರಾ ಉತ್ಸವಕ್ಕೆ ಕಳಂಕ ಹಚ್ಚಲು ನಿರ್ಧರಿಸಲಾಯಿತು, ಮದ್ದೂರು ಹಾಗೂ ರಾಜ್ಯದ ಇತರೆಡೆಗಳಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರಿಸಿ ಕರ್ನಾಟಕದ ಶಾಂತಿ ಹದಗೆಡಿಸಲು ಹೊರಟಿದ್ದಾರೆ. ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಏನು ಮಾಡಲು ಹೊರಟಿದೆ? ಈ ರೀತಿಯ ದೇಶದ್ರೋಹಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿ ಆಗ್ರಹಪಡಿಸುತ್ತದೆ ಎಂದು ತಿಳಿಸಿದ್ದಾರೆ.












Click it and Unblock the Notifications