Get Updates
Get notified of breaking news, exclusive insights, and must-see stories!

HD Deve Gowda: ಬಿ.ಎಲ್ ಸಂತೋಷ್ ಯಾವುದೇ ಅಧಿಕಾರಕ್ಕೆ ಆಸೆ ಪಟ್ಟವರಲ್ಲ: ಹೆಚ್‌ ಡಿ ದೇವೇಗೌಡ

ಬೆಂಗಳೂರು, ಡಿಸೆಂಬರ್‌ 26: ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ. ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ್ರು ಬಿ.ಎಲ್ ಸಂತೋಷ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದ ದೇವೇಗೌಡ ಅವರು, ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಸಂತೋಷ್ ಅವರನ್ನು ಉದ್ದೇಶಿಸಿ ದೇವೇಗೌಡ್ರು ಮಾತನಾಡಿದರು.

BL Santosh is not someone who desires any power Said HD Deve Gowda

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ. ಅಧಿವೇಶನದಲ್ಲಿ ‌ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ.ಅವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಎಂದು ಆರೋಪಿಸಿದರು.

ಅಟಲ್ ಜೀ ಅವರು ವಿರೋಧ ಪಕ್ಷದಲ್ಲಿದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳುತ್ತಿದ್ದೆ. ಅವರ ಭಾಷಣ ಕೇಳುತ್ತಾ ನಾನು ವಿರೋಧ ಪಕ್ಷ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. ಅವರು ವಿರೋಧ ಪಕ್ಷ ನಾಯಕರಾಗಿ ಬಹಳ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರು. ಅವರು ಮಾದರಿಯಾಗಿದ್ದರು ಎಂದು ದೇವೇಗೌಡರು ಆ ಸಂದರ್ಭವನ್ನು ನೆನಪು ಮಾಡಿಕೊಂಡರು.

ನಾನು ವಾಜಪೇಯಿ ಅವರ ಬಗ್ಗೆ ಬಹಳಷ್ಟು ಹೇಳಬಲ್ಲೆ. ನಾನು ಆಳುವ ಪಕ್ಷದ ನಾಯಕನಾಗಿದ್ದಾಗ ಅಟಲ್ ಜೀ ವಿರೋಧ ಪಕ್ಷದ ನಾಯಕರಾಗಿದ್ದರು. ನಾನು ವಿರೋಧ ಪಕ್ಷದಲ್ಲಿದ್ದಾಗ ಅವರು ನನ್ನನ್ನು ತುಂಬಾ ಗೌರವದಿಂದ ಕಾಣುತ್ತಿದ್ದರು. ಅವರ ಹಿಂದಿ ಭಾಷಣದ ಅರ್ಥ ತಿಳಿದುಕೊಳ್ಳುತ್ತಿದ್ದೆ. ಬಹಳ ಸೊಗಸಾಗಿ ಅವರು ಹಿಂದಿ ಮಾತನಾಡುತ್ತಿದ್ದರು. ನಾನು ಆಗಾಗ ಅವರ ತಮಾಷೆಗೆ 'ಸರ್ ನಿಮ್ಮ ಹಿಂದಿಯಿಂದ ದೇಶದ ಸಮಸ್ಯೆ ಬಗೆಹರಿಯಲ್ಲ' ಅಂತ ಹೇಳುತ್ತಿದ್ದೆ. ಅವರು ನಗುತ್ತಿದ್ದರು. ಬಹಳ ದೊಡ್ಡ ವ್ಯಕ್ತಿ, ದೂರದೃಷ್ಟಿ ಇದ್ದ ನಾಯಕ ಎಂದು ವಾಜಪೇಯಿ ಅವರ ಗುಣಗಾನ ಮಾಡಿದರು.

ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಆಗುತ್ತೇನೆ ಎಂದು ಆಲೋಚನೆ ಮಾಡಿರಲಿಲ್ಲ. ಅವರು ಬರೀ 13 ದಿನ ಅಧಿಕಾರದಲ್ಲಿದ್ದರು. ಕಾಕತಾಳೀಯ ಎಂದರೆ, ಅವರ ನಂತರ 13 ಪಕ್ಷಗಳು ಸೇರಿ ಸಂಯುಕ್ತ ರಂಗ ರಚನೆ ಮಾಡಿ ನನ್ನನ್ನು ಪ್ರಧಾನಿ ಮಾಡಿದರು. ಆಗ ಏನೆಲ್ಲಾ ನಡೆಯಿತು ಎಂದು ನಾನು ಹೇಳಲು ಹೋಗಲ್ಲ. ನಾನು ಬರೀ 320 ದಿನ ಪ್ರಧಾನಿ ಆಗಿದ್ದೆ ಅಷ್ಟೇ ಎಂದು ದೇವೇಗೌಡರು ಹೇಳಿದರು.

ನಾನು ವಾಜಪೇಯಿ ಅವರು ಅಧಿಕಾರದಿಂದ ಇಳಿದ ಮೇಲೆ ಅವರ ಮನೆಗೆ ಹೋಗಿದ್ದೆ. ನನ್ನ ಕಾಲದಲ್ಲಿ ಅಷ್ಟು ಕೆಲಸ ಮಾಡಲು ಆಗಿಲ್ಲ, ನೀವು ದೇಶವನ್ನು ಎಷ್ಟು ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂದು ಅವರಿಗೆ ಹೇಳಿದ್ದೆ. ನಾನು ಆರ್ಡಿನರಿ ಡಿಪ್ಲೊಮಾ ಮಾಡಿದವನು, ರೈತನ ಮಗ. ನೀರನ್ನು ಹೇಗೆ ಉಳಿಸಿಕೊಳ್ಳಬೇಕು, ಬಳಸಿಕೊಳ್ಳಬೇಕು ಎಂದು ತೋರಿಸಿದೆ. ಜನ ಕೊಟ್ಟ ಶಕ್ತಿಯಿಂದ ಈ ಎಲ್ಲ ಕೆಲಸ‌ ಮಾಡಿದೆ ಎಂದು ಅವರಿಗೆ ಹೇಳಿದೆ ಎಂದು ಮಾಜಿ ಪ್ರಧಾನಿಗಳು ಅಂದಿನ ನೆನಪುಗಳನ್ನು ಸಭಿಕರ ಮುಂದೆ ಹಂಚಿಕೊಂಡರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+