ಕರ್ನಾಟಕದಲ್ಲಿ ಕೊರೊನಾ ಕಾಟದ ನಡುವೆ ಭಯ ಹುಟ್ಟಿಸುತ್ತಿರುವ ಬ್ಲಾಕ್ ಫಂಗಸ್!

ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಕೊಂಚ ಇಳಿಮುಖವಾಗಿವೆ ಎಂದು ನಿರಾಳರಾಗುವಂತಿಲ್ಲ. ಕೊವಿಡ್-19 ಇಳಿಕೆಯಾಗುತ್ತಿದ್ದಂತೆ ರಾಜ್ಯದಲ್ಲಿ ಕಪ್ಪು ಶಿಲೀಂಧ್ರ(ಬ್ಲಾಕ್ ಫಂಗಸ್) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ರಾಜ್ಯದಲ್ಲಿ ಒಟ್ಟು ಬ್ಲಾಕ್ ಫಂಗಸ್ ಪ್ರಕರಣಗಳ ಸಂಖ್ಯೆ 3,832ಕ್ಕೆ ಏರಿಕೆಯಾಗಿದ್ದು, ಬೆಂಗಳೂರು ನಗರವೊಂದರಲ್ಲೇ 1,206 ಸೋಂಕಿತ ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಕಪ್ಪು ಶಿಲೀಂಧ್ರ ರೋಗಕ್ಕೆ ಈವರೆಗೂ 437 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಪೈಕಿ ಬೆಂಗಳೂರು ನಗವೊಂದರಲ್ಲೇ 149 ಜನರು ಅದೇ ಬ್ಲಾಕ್ ಫಂಗಸ್ ರೋಗದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ನಗರವೇ ಅತಿಹೆಚ್ಚು ಬ್ಲಾಕ್ ಫಂಗಸ್ ಪ್ರಕರಣಗಳನ್ನು ವರದಿ ಮಾಡಿದೆ. ವಿಕ್ಟೋರಿಯಾದಲ್ಲಿ 209, ಬೌರಿಂಗ್ ಆಸ್ಪತ್ರೆ 433, ಕೆಸಿ ಜನರಲ್ 07 ಹಾಗೂ ಇಂದಿರಾಗಾಂಧಿ 3 ಪ್ರಕರಣಗಳು ವರದಿಯಾಗಿವೆ.

Black Fungus Cases in Karnataka: Cases raised to 3832

ಕರ್ನಾಟಕದಲ್ಲಿ ಕೊರೊನಾವೈರಸ್ ಪರೀಕ್ಷೆ:

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಿದಂತೆ ಹೊಸ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.01ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.46ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 36,073 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 92,196 ಮಂದಿಗೆ RT-PCR ಟೆಸ್ಟ್ ಸೇರಿದಂತೆ ಒಟ್ಟು 1,28,269 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದ್ದು, 1298 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ 76,51,631 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,35,01,733 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,11,53,364 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ಕೊವಿಡ್-19 ಸೋಂಕಿನ ಪರೀಕ್ಷೆ ಹೆಚ್ಚಿಸಿದಂತೆ ಸೋಂಕಿತ ಪ್ರಕರಣಗಳು ಸಹ ಏರಿಕೆಯಾಗಿರುವುದು ಇಂದಿನ ವರದಿಯಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಅಂಕಿ-ಸಂಖ್ಯೆ:

ರಾಜ್ಯದಲ್ಲಿ ಒಂದು ದಿನದಲ್ಲಿ 1298 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1833 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 32 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37039 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2931827ಕ್ಕೆ ಏರಿಕೆಯಾಗಿದೆ. ಒಟ್ಟು 2873281 ಸೋಂಕಿತರು ಗುಣಮುಖರಾಗಿದ್ದು. 21481 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+