ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಗ್ರಾಮೀಣ ಪ್ರದೇಶದ ಇಬ್ಬರು ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು

|
Google Oneindia Kannada News

ಬೆಂಗಳೂರು, ಮೇ 31: ಕರ್ನಾಟಕ ಗ್ರಾಮೀಣ ಭಾಗದ ಇಬ್ಬರು ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕರ್‌ಮೈಕೋಸಿಸ್ ಪ್ರಕರಣ ಕಂಡುಬಂದಿದೆ. ಈವರೆಗೂ ಕೇವಲ ವಯಸ್ಸಾದವರಲ್ಲಿ ಹಾಗೂ ಮಧ್ಯವಯಸ್ಕರಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಸೋಂಕು ಈಗ ಮಕ್ಕಳಲ್ಲಿಯೂ ಪತ್ತೆಯಾಗಿದೆ.

ಬಳ್ಳಾರಿ ಜಿಲ್ಲೆಯ 11 ವರ್ಷದ ಬಾಲಕಿ ಹಾಗೂ ಚಿತ್ರದುರ್ಗ ಜಿಲ್ಲೆಯ 14 ವರ್ಷದ ಬಾಲಕನಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

 ಕರ್ನಾಟಕದಲ್ಲಿರುವ ಬ್ಲ್ಯಾಕ್ ಫಂಗಸ್‌ ಪ್ರಕರಣಗಳೆಷ್ಟು, ಮೃತಪಟ್ಟವರೆಷ್ಟು? ಕರ್ನಾಟಕದಲ್ಲಿರುವ ಬ್ಲ್ಯಾಕ್ ಫಂಗಸ್‌ ಪ್ರಕರಣಗಳೆಷ್ಟು, ಮೃತಪಟ್ಟವರೆಷ್ಟು?

ಈ ಇಬ್ಬರು ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಈ ಸೋಂಕಿತ ಮಕ್ಕಳನ್ನು ಬೌರಿಂಗ್ ಹಾಗೂ ಲೇಡಿ ಕರ್ಜನ್ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಇಬ್ಬರು ಮಕ್ಕಳು ಅಕ್ಯೂಟ್ ಜುವೆನೈಲ್ ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹಿರಿಯ ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Black Fungus Detected In Two Children From Rural Areas

ಇಬ್ಬರಿಗೂ ಕೊರೊನಾ ಸೋಂಕು ತಗುಲಿತ್ತು. ಆದರೆ ಅದರ ಬಗ್ಗೆ ಅರಿವಿರಲಿಲ್ಲ. ಆದರೆ ಬ್ಲ್ಯಾಕ್ ಫಂಗಸ್‌ ಸಮಸ್ಯೆ ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ರಾಜ್ಯದಲ್ಲಿ ಇದುವರೆಗೆ 1250 ಮಂದಿಗೆ ಕಪ್ಪು ಶಿಲೀಂಧ್ರ ಸೋಂಕು ತಗುಲಿದೆ. ಅದರಲ್ಲಿ 39 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಧಾರವಾಡದಲ್ಲಿ 119 ಮಂದಿಗೆ ಸೋಂಕು ಉಂಟಾಗಿದ್ದು, ಎಂಟು ಮಂದಿ ಬಲಿಯಾಗಿದ್ದಾರೆ. ಉಳಿದ 11 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿಯಲ್ಲಿ 102 ಮಂದಿಗೆ ಸೋಂಕು ಉಂಟಾಗಿದ್ದು, 94 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರ ಪ್ರದೇಶದಲ್ಲಿ 521 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ಉಂಟಾಗಿದ್ದು, ಇದರಲ್ಲಿ 508 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಂದಿ ಗುಣಮುಖರಾಗಿದ್ದಾರೆ. 3 ಜನರು ಮೃತಪಟ್ಟಿದ್ದಾರೆ. ಧಾರವಾಡ, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಅಂಕಿ-ಅಂಶ ಬಿಡಗುಡೆ ಮಾಡಿದೆ.

Recommended Video

ಕನ್ನಡಪರ ಹೋರಾಟಗಾರರು ವಿಜಯಲಕ್ಷ್ಮಿ ಪರ ನಿಂತು ಹೋರಾಟ ಮಾಡ್ತಾರಾ? | Oneindia Kannada

English summary
Black fungus has been detected among two children in rural karnataka,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X