ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧೈರ್ಯವಾಗಿರಿ, ಬ್ಲ್ಯಾಕ್ ಫಂಗಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸೋಂಕಲ್ಲ

|
Google Oneindia Kannada News

ಬೆಂಗಳೂರು, ಮೇ 17: ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಲ್ಲ ಹೀಗಾಗಿ ಯಾರೂ ಕೂಡ ಹೆದರುವ ಅವಶ್ಯಕತೆ ಇಲ್ಲ ಎಂದು ನೇತ್ರಜ್ಞ ಡಾ. ಭುಜಂಗಶೆಟ್ಟಿ ಹೇಳಿದ್ದಾರೆ.

ಇಷ್ಟು ದಿನ ಕೊರೊನಾ ಸೋಂಕು, ಅದರ ರೂಪಾಂತರಿ ಕುರಿತು ಭಯಗೊಂಡಿದ್ದ ಜನತೆ ಇದೀಗ ಬ್ಲ್ಯಾಕ್‌ ಫಂಗಸ್ ಬಗ್ಗೆ ಕೇಳಿ ದಿಕ್ಕೇ ತೋಚದಂತಾಗಿ ಕುಳಿತಿದ್ದಾರೆ.

ಕೋವಿಡ್ ನಂತರದ ಸೋಂಕನ್ನು ಬ್ಲ್ಯಾಕ್‌ ಫಂಗಸ್ ಎಂದು ತಪ್ಪಾಗಿ ಕರೆಯಲಾಗುತ್ತಿದೆ: ತಜ್ಞರುಕೋವಿಡ್ ನಂತರದ ಸೋಂಕನ್ನು ಬ್ಲ್ಯಾಕ್‌ ಫಂಗಸ್ ಎಂದು ತಪ್ಪಾಗಿ ಕರೆಯಲಾಗುತ್ತಿದೆ: ತಜ್ಞರು

ಆದರೆ ವೈದ್ಯರ ಈ ಹೇಳಿಕೆಯು ಸ್ವಲ್ಪ ಸಮಾಧಾನ ತಂದಿದೆ, ಕೋವಿಡ್ ಸೋಂಕು ತಗುಲಿದ ಮಧುಮೇಹಿಗಳಲ್ಲಿ ಅತಿಯಾದ ಸ್ಟೀರಾಯ್ಡ್ ಬಳಕೆಯಿಂದಾಗಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಆದರೆ ಇದ್ಯಾವುದೇ ಕಾರಣಕ್ಕೂ ಮತ್ತೊಬ್ಬರಿಗೆ ಹರಡುವ ಸೋಂಕಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Black Fungus Will Not Spread One To One Says Experts

ಬ್ಲ್ಯಾಕ್ ಫಂಗಸ್ ಮೊದಲ ಕಣ್ಣಿನ ಮೇಲೆ ದಾಳಿ ಮಾಡುತ್ತದೆ, ಬಳಿಕ ಕ್ರಮೇಣವಾಗಿ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ, ಹೀಗಾಗಿ ಯಾವುದೇ ಲಕ್ಷಣಗಳು ಕಂಡು ಬಂದರೂ ವೈದ್ಯರನ್ನು ಸಂಪರ್ಕಿಸಿದರೆ ಉತ್ತಮ ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ 97 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಸೋಂಕಿನ ಲಕ್ಷಣಗಳು ಕಂಡುಬಂದರೇ ತಕ್ಷಣ ಚಿಕಿತ್ಸೆ ಪಡೆದುಕೊಳ್ಳಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆದುಕೊಳ್ಳಿ. ರಾಜ್ಯದಲ್ಲಿ 97 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಆದರೆ ಕೊರೊನಾ ರೀತಿಯಲ್ಲಿಯೇ ಬ್ಲ್ಯಾಕ್ ಫಂಗಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ ಎಂಬುದು ಸುಳ್ಳು ಎಂದು ಸ್ಪಷ್ಟ ಪಡಿಸಿದರು.

ನ್ನು ಬ್ಲ್ಯಾಕ್ ಫಂಗಸ್ ಮುಚ್ಚಿಡುವಂತಹ ಕಾಯಿಲೆಯಲ್ಲ. ಬ್ಲ್ಯಾಕ್ ಫಂಗಸ್ ಬಂದರೆ ಅದು ಎಲ್ಲರಿಗೂ ಗೊತ್ತಾಗುತ್ತದೆ. ಆರಂಭದಲ್ಲಿ ಕಣ್ಣಿಗೆ ಅಟ್ಯಾಕ್ ಆಗುತ್ತದೆ. ಕಣ್ಣಲ್ಲಿ ನೋವು, ಊತ ಕಾಣಿಸಿಕೊಳ್ಳುತ್ತದೆ. ಬಳಿಕ ಮೂಗು, ಬಳಿಕ ಮೆದುಳಿಗೆ ಅಟ್ಯಾಕ್ ಆಗುತ್ತದೆ. ಕಣ್ಣಿಗೆ ತೊಂದರೆಯಾದಾಗಲೇ ಆಸ್ಪತ್ರೆಗೆ ದಾಖಲಾಗುತ್ತಾರೆ. ಹಾಗಾಗಿ ಬ್ಲ್ಯಾಕ್ ಫಂಗಸ್ ಲಕ್ಷಣ ಕಂಡುಬಂದರೆ ಮುಚ್ಚಿಡಲಾಗದು ಎಂದರು.

Recommended Video

Black Fungus ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ | Oneindia Kannada

ಶುಗಲ್ ಇರುವವರು ಅಧಿಕ ಸ್ಟಿರಾಯ್ಡ್ ಬಳಕೆ ಮಾಡಿದಲ್ಲಿ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಹೆಚ್ಚು ಎಂದು ವಿವರಿಸಿದ ಆರೋಗ್ಯ ಸಚಿವರು, ಕೊರೊನಾ ಸೋಂಕು ಬಂದವರು ಸ್ಟಿರಾಯ್ಡ್ ಬಳಸಿದರೆ ಅಂತವರಲ್ಲಿ ಶುಗರ್ ಸ್ವಾಭಾವಿಕವಾಗಿ ಹೆಚ್ಚಾಗುತ್ತದೆ ಇಂತವರು ಶುಗರ್ ನಿಯಂತ್ರಣದಲ್ಲಿಟ್ಟುಕೊಂಡಿರಬೇಕು ಎಂದು ತಿಳಿಸಿದ್ದಾರೆ.

English summary
Experts Says Black Fungus Will Not Spread One To One Says Experts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X