ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಬಿ.ಎಂ.ಫಾರೂಕ್ ಸೇರ್ಪಡೆ?

|
Google Oneindia Kannada News

ಬೆಂಗಳೂರು, ಜೂನ್ 09 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಜೂನ್ 12ರಂದು ನಡೆಯಲಿದೆ. ಒಟ್ಟು ಮೂರು ಸಚಿವ ಸ್ಥಾನಗಳು ಖಾಲಿ ಇದ್ದು, ಸಂಪುಟ ಸೇರುವ ಶಾಸಕರು ಯಾರು? ಎಂಬುದು ಇನ್ನೂ ನಿಗೂಢವಾಗಿದೆ.

ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರು ಸಂಪುಟ ಸೇರಲಿದ್ದಾರೆ ಎಂಬ ಸುದ್ದಿ ಭಾನುವಾರ ಹಬ್ಬಿದೆ. ಅಲ್ಪ ಸಂಖ್ಯಾತ ಕೋಟಾದರಿ ಫಾರೂಕ್ ಅವರನ್ನು ಸೇರಿಸಿಕೊಳ್ಳಲು ಜೆಡಿಎಸ್ ಚಿಂತನೆ ನಡೆಸಿದೆ.

ಸಂಪುಟ ವಿಸ್ತರಣೆ: ಅತೃಪ್ತರನ್ನು ನಿರ್ಲಕ್ಷಿಸಿದ ಕಾಂಗ್ರೆಸ್, ಕಾರಣವೇನು?ಸಂಪುಟ ವಿಸ್ತರಣೆ: ಅತೃಪ್ತರನ್ನು ನಿರ್ಲಕ್ಷಿಸಿದ ಕಾಂಗ್ರೆಸ್, ಕಾರಣವೇನು?

ಜೆಡಿಎಸ್‌ ಕೋಟಾದ 2, ಕಾಂಗ್ರೆಸ್‌ ಕೋಟಾದ 1 ಸಚಿವ ಸ್ಥಾನ ಖಾಲಿ ಇದೆ. ಮೂರು ಸ್ಥಾನಗಳಿಗೆ 6 ಕ್ಕೂ ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ಆದ್ದರಿಂದ, ಸಂಪುಟ ಸೇರುವವರು ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಕೈ ತಪ್ಪಿದ ಸಚಿವ ಸ್ಥಾನ: ಪಕ್ಷ ತೊರೆಯುವ ಸೂಚನೆ ನೀಡಿದ ಬಿಸಿ.ಪಾಟೀಲ್ಕೈ ತಪ್ಪಿದ ಸಚಿವ ಸ್ಥಾನ: ಪಕ್ಷ ತೊರೆಯುವ ಸೂಚನೆ ನೀಡಿದ ಬಿಸಿ.ಪಾಟೀಲ್

BM Farookh may join HD Kumaraswamy cabinet on June 12

ಜೆಡಿಎಸ್ ಕೋಟಾದ ಎರಡೂ ಸ್ಥಾನಗಳಿಂದ ಪಕ್ಷೇತರ ಶಾಸಕರಾದ ಆರ್.ಶಂಕರ್ (ರಾಣೆಬೆನ್ನೂರು) ಮತ್ತು ಎಚ್.ನಾಗೇಶ್ (ಮುಳುಬಾಗಿಲು) ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಬಿ.ಎಂ.ಫಾರೂಕ್ ಅವರ ಹೆಸರು ಕೇಳಿ ಬರುತ್ತಿದೆ.

ಸಚಿವ ಸಂಪುಟ ವಿಸ್ತರಣೆ ದಿನಾಂಕ ಫಿಕ್ಸ್‌: ಯಾರಾಗಲಿದ್ದಾರೆ ಸಚಿವರು?ಸಚಿವ ಸಂಪುಟ ವಿಸ್ತರಣೆ ದಿನಾಂಕ ಫಿಕ್ಸ್‌: ಯಾರಾಗಲಿದ್ದಾರೆ ಸಚಿವರು?

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಲೇ ಬಿ.ಎಂ.ಫಾರೂಕ್, ಬಸವರಾಜ ಹೊರಟ್ಟಿ ಅವರು ಸಂಪುಟ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ವಿಧಾನ ಪರಿಷತ್ ಸದಸ್ಯರಾದ ಇಬ್ಬರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ.

ಜೆಡಿಎಸ್ ತನ್ನ ಪಾಲಿನ ಕೋಟಾದಲ್ಲಿ ಒಂದು ಸ್ಥಾನವನ್ನು ಬಿ.ಎಂ.ಫಾರೂಕ್ ಅವರಿಗೆ ನೀಡಲಿದೆ ಎಂಬ ಸುದ್ದಿ ಹಬ್ಬಿದೆ. ಮತ್ತೊಂದು ಸ್ಥಾನವನ್ನು ಪಕ್ಷೇತರ ಶಾಸಕರಿಗೆ ಬಿಟ್ಟುಕೊಡಲಿದೆ. ಕಾಂಗ್ರೆಸ್‌ ಕೋಟಾದಡಿ ಸಂಪುಟ ಸೇರುವವರು ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಿದ್ದಾರೆ. ಜೂನ್ 12ರಂದು ಬೆಳಗ್ಗೆ 11.30ಕ್ಕೆ ಸಂಪುಟ ವಿಸ್ತರಣೆ ನಡೆಯಲಿದೆ.

English summary
Legislative Council member B.M.Farookh may join Chief Minister H.D.Kumaraswamy cabinet. Cabinet expansion will be held on June 12, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X