• search

ಬಿ.ಎಂ. ಫಾರೂಕ್ ಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ

By Sachhidananda Acharya
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಬೆಂಗಳೂರು, ಮೇ 21: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದೆ. ಈಗಾಗಲೇ ಯಾರಿಗೆ ಯಾವ ಖಾತೆ ನೀಡಬೇಕು, ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಚರ್ಚೆ ಎರಡೂ ಪಕ್ಷಗಳಲ್ಲಿ ನಡೆಯುತ್ತಿದೆ.

  ಜೆಡಿಎಸ್ ನಿಂದ ಈ ಹಿಂದೆ ಕುಮಾರಸ್ವಾಮಿಯವರ ಸಂಪುಟದಲ್ಲಿ ದಕ್ಷಿಣ ಕನ್ನಡ ಭಾಗದ ಮುಸ್ಲಿಂ ಸಮುದಾಯಕ್ಕೆ ಸೇರಿದ ಉದ್ಯಮಿ ಬಿ.ಎಂ. ಫಾರೂಕ್ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿತ್ತು. ಆದರೆ ಅವರಿಗೀಗ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ.

  ಮೈತ್ರಿ ಸರಕಾರದಲ್ಲಿ ಬಿಎಂ ಫಾರೂಕ್ ಆರೋಗ್ಯ ಸಚಿವ?

  ಎರಡು ಬಾರಿ ರಾಜ್ಯಸಭೆ ಚುನಾವಣೆಗೆ ನಿಂತು ಸೋಲೊಪ್ಪಿಕೊಂಡಿದ್ದ ಫಾರೂಕ್ ಅವರನ್ನು ಜೆಡಿಎಸ್ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಒಂದು ಹುದ್ದೆ ನೀಡಿ ಇದೀಗ ಮತ್ತೊಂದು ಸ್ಥಾನ ನೀಡಲು ಜೆಡಿಎಸ್ ಮುಖಂಡರು ಹಿಂದೇಟು ಹಾಕಿದ್ದಾರೆ.

  BM Farooq is likely to miss ministerial post

  ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಭಾಗಗಳನ್ನು ಒಳಗೊಂಡ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಜೆಡಿಎಸ್ ಒಂದೇ ಒಂದು ಸ್ಥಾನಗಳನ್ನೂ ಗೆದ್ದಿಲ್ಲ. ಈ ಭಾಗಕ್ಕೆ ಸೇರಿರುವ ಏಕೈಕ ಶಾಸಕ ಎಂದರೆ ಬಿ.ಎಂ. ಫಾರೂಕ್ ಮಾತ್ರ. ಜೊತೆಗೆ ರಾಜ್ಯಮಟ್ಟದಲ್ಲಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿರುವ ಏಕೈಕ ಮುಸ್ಲಿಂ ನಾಯಕ ಫಾರೂಕ್.

  ಹೀಗಾಗಿ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಲೆಕ್ಕಾಚಾರಗಳಿತ್ತು. ಆದರೆ ಅವರೀಗ ಕೇವಲ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.

  ಖಾತೆ ಹಂಚಿಕೆ: ಜೆಡಿಎಸ್ ಗೆ ಯಾವ ಖಾತೆ? ಕಾಂಗ್ರೆಸಿಗೆ ಯಾವ ಖಾತೆ?

  ಅವರಿಗೆ ಆರೋಗ್ಯ ಖಾತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಆರೋಗ್ಯ ಖಾತೆಯೀಗ ಕಾಂಗ್ರೆಸ್ ಪಾಲಾಗಿದೆ. ಇದಲ್ಲದೆ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರ ಖಾತೆಯೂ ಕಾಂಗ್ರೆಸ್ ಪಾಲಾಗಿದ್ದು ಫಾರೂಕ್ ಪಾಲಿಗೆ ಹಿನ್ನೆಡೆ ಎಂದೇ ಭಾವಿಸಲಾಗಿದೆ.

  ಈ ಎಲ್ಲಾ ಕಾರಣಗಳಿಗೆ ದೇವೇಗೌಡರಿಗೆ ಆಪ್ತರಾಗಿದ್ದೂ, ಹಲವು ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಆರ್ಥಿಕ ಸಂಕಷ್ಟದಲ್ಲಿದ್ದಾಗ ಕೈ ಹಿಡಿದೂ ಫಾರೂಕ್ ಸಚಿವ ಸ್ಥಾನ ತಪ್ಪಿಸಿಕೊಳ್ಳುವ ಸಾಧ್ಯತೆಗಳಿವೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Congress-JDS alliance government cabinet expansion will be held on Wednesday. During cabinet expansion businessman BM Farooq was likely to miss ministerial post.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more