ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಬೆಂಕಿ; ಗಾಬರಿಗೊಂಡ ಪ್ರಯಾಣಿಕರು
ಬೆಂಗಳೂರು, ನವೆಂಬರ್ 13: ನೆಲಮಂಗಲದ ಮುಖ್ಯರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರು ಗಾಬರಿಗೊಂಡಿದ್ದಾರೆ.
ಹೌದು, ಭಾನುವಾರ ನೆಲಮಂಗಲ: ನಗರದ ಮುಖ್ಯರಸ್ತೆಯ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಜಾಗರೂಕತೆಯಿಂದ ಭಾರಿ ಅಪಾಯದ ಘಟನೆಯೊಂದು ತಪ್ಪಿದಂತಾಗಿದೆ. ಇನ್ನೂ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋದಿಂದ ನೆಲಮಂಗಲ ಪಟ್ಟಣಕ್ಕೆ ಆಗಮಿಸುತ್ತಿದ್ದ ಬಿಎಂಟಿಸಿ ಬಸ್ ನಗರದ ಜೆಪಿ ಆಸ್ಪತ್ರೆ ಸಮೀಪ ಶಾರ್ಟ್ ಸಕ್ರ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇನ್ನೂ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಭಯಗೊಂಡಿದ್ದಾರೆ. ಬಸ್ ನಲ್ಲಿದ್ದ ಜನರು ಕೂಗಾಡಿದ್ದಾರೆ, ತಕ್ಷಣ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿ ನಂತರ ಹಿಂದೆ ಬರುತ್ತಿದ್ದ ಬಸ್‌ನಲ್ಲಿದ್ದ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ನಂದಿಸುವ ಮೂಲಕ ಜಾಗರೂಕತೆಯಿಂದ ಭಾರಿ ಅಪಾಯವನ್ನು ತಪ್ಪಿಸಿದ್ದಾರೆ.
ಅಲ್ಲದೇ ಬೆಂಕಿ ಅವಘಡದ ಘಟನೆಯಲ್ಲಿಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ. ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿದು ಜನರು ಹೆಚ್ಚಾಗಿ ಸೇರಿಕೊಂಡ ಪರಿಣಾಮ ಸ್ಥಳಕ್ಕೆ ಟೌನ್ ಇನ್‌ಸ್ಪೆಕ್ಟರ್ ಶಶಿಧರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಂಚಾರ ನಿಯಂತ್ರಣ ಮಾಡುವ ಜತೆಗೆ ಬಸ್‌ನಲ್ಲಿ ಬಂದಿದ್ದ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿಕೊಡಲಾಗಿದೆ.












Click it and Unblock the Notifications