ಪ್ರಯಾಣಿಕರಿಗೆ ಶಾಕಿಂಗ್‌ ನ್ಯೂಸ್‌! ಆ ದಿನ ನಿಮಗೆ ಬಸ್‌ ಸಿಗಲ್ಲ

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಸಾರಿಗೆ ನಿಗಮಗಳು ರಾಜ್ಯಾದ್ಯಂತ ಜನರಿಗೆ ಪ್ರಯಾಣ ಸೇವೆ ಕಲ್ಪಿಸುತ್ತಿವೆ. ಒಂದು ದಿನ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾದರೂ ಪ್ರಯಾಣಿಕರ ಪರದಾಟ ನೋಡಲಾಗುವುದಿಲ್ಲ. ಆದರೆ, ಸಾರಿಗೆ ನೌಕಕರು ಇನ್ನೇನು ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ವಿವಿಧ ಸಾರಿಗೆ ನೌಕರರ ಸಂಘಟನೆಗಳು ಜೊತೆಗೂಡಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರಂತೆ. ಹಾಗಾಗಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ನಾಲ್ಕೂ ನಿಗಮಗಳ ಸಾರಿಗೆ ಸಿಬ್ಬಂದಿ ಪ್ರಯಾಣಿಕರಿಗೆ ಶಾಕ್‌ ಕೊಡಲು ತೀರ್ಮಾನಿಸಿದ್ದಾರೆ.

BMTC KSRTC Employees Plan To Go On Strike Across Karnataka

ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಈಗಾಗಲೇ ಇದೇ 26ರವರೆಗೆ (ನಾಳೆ) ಡೆಡ್‌ಲೈನ್‌ ಕೂಡ ನೀಡಿದ್ದಾರೆ. ಅಷ್ಟರೊಳಗೆ ಸರ್ಕಾರ ಸಾರಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಷ್ಕರದ ದಿನಾಂಕ ಘೋಷಣೆ ಮಾಡುವುದಾಗಿ ವಾರ್ನಿಂಗ್‌ ಕೂಡ ಕೊಟ್ಟಿದ್ದಾರೆ. ಈ ಸಂಬಂಧ ಸೆಪ್ಟೆಂಬರ್‌ 27ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಿಸಲಿದ್ದಾರೆ.

ಸಾರಿಗೆ ನಿಗಮಗಳು ಈವರೆಗೆ ಉಳಿಸಿಕೊಂಡಿರುವ ಬಾಕಿಗೆ ಸರಿದೂಗಿಸಲು 4,562 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು. ಗ್ಯಾರಂಟಿ ಯೋಜನೆಯಾದ ʼಶಕ್ತಿʼಯ ಬಾಕಿ ಹಣವಾದ 1,346 ಕೋಟಿ ರೂಪಾಯಿಗಳನ್ನು ನಿಗಮಗಳಿಗೆ ನೀಡಬೇಕು. ಇಂಧನ ಬಾಕಿಗೆ ಸರಿಸುಮಾರ್‌ 998 ಕೋಟಿ ರೂಪಾಯಿಗಳನ್ನು ಸರ್ಕಾರವು ನಿಗಮಗಳಿಗೆ ಕೊಡಬೇಕು ಎಂದು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಶಕ್ತಿ ಯೋಜನೆಗಾಗಿ ಪ್ರತಿ ತಿಂಗಳು ಸಾರಿಗೆ ನಿಗಮಗಳಿಗೆ ಖರ್ಚಾಗುವ ಹಣವನ್ನು ತಿಂಗಳ ಮೊದಲ ವಾರದಲ್ಲೇ ಬಿಡುಗಡೆ ಮಾಡಬೇಕು. ಕಾಲಕ್ಕೆ ತಕ್ಕಂತೆ ಪ್ರಯಾಣ ದರ ನಿರ್ಧರಿಸಲು ತಜ್ಞರ ಸಮಿತಿ ರಚಿಸಬೇಕು. ಒಂದು ವೇಳೆ ಇದನ್ನು ಒಪ್ಪದಿದ್ದರೆ, ಸಾರಿಗೆ ನಿಗಮಗಳ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಾರಿಗೆ ಸಿಬ್ಬಂದಿಗೆ ವೇತನ ಪರಿಷ್ಕರಣೆ, 38 ತಿಂಗಳ ಬಾಕಿ ಪಾವತಿ, ನಿವೃತ್ತ ನೌಕರರಿಗೆ ಆದೇಶದ ಪ್ರಕಾರ ಕೂಡಲೇ ಹಣ ಪಾವತಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.

BMTC KSRTC Employees Plan To Go On Strike Across Karnataka

ಅಂಕಿಅಂಶಗಳ ಪ್ರಕಾರ ನಾಲ್ಕು ನಿಗಮಗಳಲ್ಲಿ ಒಟ್ಟು 23,978 ಬಸ್ಸುಗಳಿವೆ. ಸುಮಾರು 1,04,450 ಮಂದಿ ಸಾರಿಗೆ ನೌಕರರು ಕೆಲಸ ಮಾಡುತ್ತಿದ್ದು, 2020ರಲ್ಲಿ ರಾಜ್ಯಾದ್ಯಂತ ಬಸ್‌ ಸಂಚಾರ ನಿಲ್ಲಿಸಿ, ಬೀದಿಗಿಳಿದಿದ್ದರು. ಅಂದಿನ ಬಿಜೆಪಿ ಸರ್ಕಾರಕ್ಕೆ ಇದು ದೊಡ್ಡ ತಲೆನೋವಾಗಿತ್ತು. ಬಸ್‌ಗಳಿಲ್ಲದೆ ಪ್ರಯಾಣಿಕರು ಪರದಾಡಿದ್ದರು. ಕೊನೆಗೆ ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಮುಷ್ಕರ ಕೈಬಿಟ್ಟಿದ್ದರು. ಈಗ ಮತ್ತೊಮ್ಮೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.

ಒಂದು ವೇಳೆ ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದಾರೆ ಹಿಂದಿನಿಂತೆ ಮತ್ತೆ ರಾಜ್ಯಾದ್ಯಂತ ಬಸ್‌ ಸಂಚಾರ ಸ್ತಬ್ಧವಾಗಲಿದೆ. ಇದರಿಂದ ಪ್ರಯಾಣಿಕರಿಗೆ ಮತ್ತಷ್ಟು ಪರದಾಟ ಗ್ಯಾರಂಟಿ ಎನ್ನಲಾಗಿದೆ. ಇನ್ನು ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿದ್ದು, ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಸಂಬಂಧ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+