ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ವಕ್ತಾರರಾಗಿ ಬಿ.ಎನ್. ಚಂದ್ರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್ ನೇಮಕ

By Lekhaka
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಬಿ.ಎನ್. ಚಂದ್ರಪ್ಪ ಅವರನ್ನು ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ಮಹಿಳಾ ಕಾಂಗ್ರೆಸ್ ರಾಜ್ಯ ಮಾಜಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಿರುವುದು ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ ತಿಳಿವಳಿಕೆಗಳ ಹಿನ್ನೆಲೆಯಲ್ಲಿ ನಿಮ್ಮನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ವಕ್ತಾರರಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇಮಕಕಾಂಗ್ರೆಸ್ ವಕ್ತಾರರಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇಮಕ

2019ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಂಸದ ಬಿಎನ್ ಚಂದ್ರಪ್ಪ, ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ವಿರುದ್ಧ ಸೋಲು ಅನುಭವಿಸಿದ್ದರು. ಸೋಲಿಗೆ ಧೃತಿಗೆಡದೆ ಪಕ್ಷದ ಕಾರ್ಯಕ್ರಮಗಳಲ್ಲಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿ, ಸಮಸ್ಯೆಗೆ ಸ್ಪಂದಿಸುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸುತಿದ್ದಾರೆ.

BN Chandrappa And Lakshmi Hebbalkar Appointed As KPCC Spokesperson

ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ಕಾಂಗ್ರೆಸ್ ನಲ್ಲಿ ಅತ್ಯಂತ ಪ್ರಭಾವಿಯಾಗಿದ್ದು, ಈವರೆಗೆ ನೀಡಲಾಗಿದ್ದ ಎಲ್ಲ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

Recommended Video

Namma Metro ಕೊರೊನ ನಂತರ ಕೆಲವು ಮಹತ್ವದ ನಿರ್ಧಾರ ಕೈಗೊಂಡಿದೆ | Oneindia Kannada

ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ನನ್ನ ಮೇಲೆ ಸಂಪೂರ್ಣ ವಿಶ್ವಾಸವನ್ನಿಟ್ಟು ಕೆಪಿಸಿಸಿ ವಕ್ತಾರೆಯನ್ನಾಗಿ ನೇಮಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಪಕ್ಷ ನಿಷ್ಠೆಯಿಂದ ಪಕ್ಷದ ಏಳಿಗೆಗಾಗಿ ಹಾಗೂ ಜನರ ಹಿತಕ್ಕಾಗಿ ಶಿಸ್ತು, ಸಂಯಮದ ಸಿಪಾಯಿಯಾಗಿ ಕೊಟ್ಟಂತಹ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದೂ ಅವರು ತಿಳಿಸಿದ್ದಾರೆ.

English summary
Former MP of Chitradurga Lok Sabha constituency, Congress leader B.N. Chandrappa and belagavi rural assembly constituency mla Lakshmi hebbalkar appointed as the KPCC spokesperson
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X