ನಿಗಮ-ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ!

ಬೆಂಗಳೂರು, ಜುಲೈ 03 : ನಿಗಮ-ಮಂಡಳಿಗಳಿಗೆ ನೇಮಕವಾಗುವ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ನಿರಾಸೆಯಾಗಲಿದೆ. ಸದ್ಯಕ್ಕೆ ನೇಮಕಾತಿ ಪ್ರಕ್ರಿಯೆಯನ್ನು ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಅವರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡಿ ಸಮಾಧಾನಪಡಿಸಲು ಚಿಂತನೆ ನಡೆಸಲಾಗಿತ್ತು.

ಆದರೆ, ನಿಗಮ-ಮಂಡಳಿ ನೇಮಕದ ಬಳಿಕ ಮತ್ತೆ ಅಸಮಾಧಾನ ಉಂಟಾಗುವ ನಿರೀಕ್ಷೆ ಹಿನ್ನಲೆಯಲ್ಲಿ ನೇಕಮಾತಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಬಜೆಟ್ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

Boards and Corporations appointment after Budget session

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್ 30, ಜೆಡಿಎಸ್ 10 ನಿಗಮ ಮಂಡಳಿಗಳನ್ನು ಹಂಚಿಕೊಂಡಿವೆ. ಸಚಿವ ಸ್ಥಾನ ಕೈ ತಪ್ಪಿದ ಹಿರಿಯ ಶಾಸಕರನ್ನು ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಪ್ರಸ್ತಾವನೆ ಇತ್ತು.

ಈಗ ಬಜೆಟ್ ಅಧಿವೇಶನ ನಡೆಯುತ್ತಿದೆ. ಈಗ ನೇಮಕಾತಿ ಮಾಡಿದರೆ ಸ್ಥಾನ ಕೈತಪ್ಪಿದವರು ಬಂಡಾಯ ಏಳಬಹುದು ಎಂಬ ಹಿನ್ನಲೆಯಲ್ಲಿ ನೇಮಕಾತಿಯನ್ನು ಮುಂದೂಡಲಾಗಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ನೇಮಕಾತಿ ಮಾಡಲು ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+