BREAKING: ಬೈಲಹೊಂಗಲದ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 8 ಮಂದಿಗೆ ಗಂಭೀರ ಗಾಯ, 2 ಸಾವು
ಬೆಳಗಾವಿ: ಜಿಲ್ಲೆಯ ಬೈಲಹೊಂಗಲದ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎಂಟು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಾಗಳುಗಳನ್ನು ಹತ್ತಿರ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಬೆಳಗಾವಿ ಪೊಲೀಸರು ಮಾಹಿತಿ ಅಧಿಕೃತ ಮಾಹಿತಿ ನೀಡಿದ್ದಾರೆ.
ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿನ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಇಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾರಿ ಮಧ್ಯಯೇ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಬೆಳಗಾವಿ ಎಸ್‌ಪಿ ಕೆ.ರಾಮರಾಜನ್ ಅವರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಕಾರ್ಮಿಕರಿಗೆ ತುರ್ತು ಎಲ್ಲ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಕಾರ್ಖಾನೆಯಲ್ಲಿ ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟ ಸಂಭವಿಸಿದೆ. ಸ್ಟೀಮ್ ಪದಾರ್ಥದಿಂದ ಈ ಘಟನೆ ಆಗಿರಬಹುದು. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆಗೆ ಸಾಗಿಸಲಾಯಿತು. ಉಳಿದವರನ್ನು ಕೆಎಲ್‌ಇ ಆಸ್ಪತ್ರೆಗೆ ರವಾನಿಸಲಾಗಿದೆ. ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯಲ್ಲಿ ಈ ದುರಂತಕ್ಕೆ ನಿಖರ ಕಾರಣ ತಿಳಿದು ಬರಲಿದೆ ಎಂದು ಎಸ್‌ಪಿ ಕೆ.ರಾಮರಾಜನ್ ಅವರು ಮಾಹಿತಿ ನೀಡಿದರು.
ಕಾರ್ಖಾನೆಯಲ್ಲಿ ಒಂದು ಕಡೆ ಕಬ್ಬು ಬಳಸಿ ಸಕ್ಕರೆ ತಯಾರು ಮಾಡಲಾಗುತ್ತದೆ. ಮತ್ತೊಂದೆಡೆ ಇದ್ದ ಮಳ್ಳಿ ಎಂಬ ಧ್ರವರೂಪದ ವಸ್ತುವನ್ನು ಬಾಯ್ಲರಿಗೆ ಹಾಕಲಾಗಿದೆ. ಬಾಯ್ಲರ್ ಅತ್ಯಧಿಕ ಬಿಸಿ ಇದ್ದ ಪರಿಣಾಮ ದಿಢೀರ ಸ್ಫೋಟಿಸಿದೆ. ಆಗ ಅಲ್ಲಿಯೇ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಈ ತೆಳುವಾದ ಮಳ್ಳಿ ಮೈ ಮೇಲೆಲ್ಲ ಬಿದ್ದಿದೆ. ದುರಂತ ಆಗಿ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಗೆ ಸೇರಿಸುವ ಮುನ್ನವೇ ಒಬ್ಬರು ಮೃತಪಟ್ಟಿದ್ದಾರೆ. ನಂತರ ಮತ್ತೊಬ್ಬ ಕಾರ್ಮಿಕ ಉಸಿರು ಚೆಲ್ಲಿದ್ದಾರೆ.
ಕಾರ್ಖಾನೆಯಲ್ಲಿ ಈ ಬಾಯ್ಲರ್ ತುಂಬಾ ಹಳೆಯದಾಗಿತ್ತು ಎನ್ನಲಾಗಿದೆ. ದುರಂಗ ಸಂಭವಿಸುತ್ತಿದ್ದಂತೆ ಝೀರೋ ಟ್ರಾಫಿಕ್‌ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಗಳುಗಳ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಹೆಚ್ಚಿನ ಸಾವು ನೋವು ಸಂಭವಿಸದಿರಲಿ ಎಂದು ಸ್ಥಳೀಯರು ಪ್ರಾರ್ಥಿಸುತ್ತಿದ್ದಾರೆ.












Click it and Unblock the Notifications