ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಗಲಕೋಟೆ, ಚಾಮರಾಜನಗರ, ಮೈಸೂರು ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

|
Google Oneindia Kannada News

ಬಾಗಲಕೋಟೆ, ಮೈಸೂರು, ಚಾಮರಾಜನಗರ, ಫೆ.22: ಬಾಗಲಕೋಟೆ, ಚಾಮರಾಜನಗರ, ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

ಈ ಮೂರು ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕರಿಗೆ ಗುರುವಾರ ತಡರಾತ್ರಿ 2 ಗಂಟೆಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ.

ತಕ್ಷಣ ಎಲ್ಲಾ ರೈಲ್ವೆ ನಿಲ್ದಾಣಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಯಿತು ಆದರೆ ಎಲ್ಲಿಯೂ ಬಾಂಬ್ ಇಟ್ಟಿರುವು ಕುರಿತು ಕುರುಹು ಕಂಡು ಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಕೇಂದ್ರ ರೈಲ್ವೆ ಕಂಟ್ರೋಲ್ ರೂಂಗೆ ತಡರಾತ್ರಿ ಸುಮಾರು 1.30ಕ್ಕೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಒಡ್ಡಿದ್ದಾನೆ.

ಹೀಗಾಗಿ ತಪಾಸಣೆ ನಡೆಸಿರುವ ಪೊಲೀಸರು ಕರೆ ಮಾಡಿದ ನಂಬರ್​ ಸಂಗ್ರಹಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ನಿಲ್ದಾಣಕ್ಕೂ ಹುಸಿ ಬಾಂಬ್​ ಕರೆ ಬಂದಿದ್ದು, ಅಲ್ಲಿಯೂ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

Bomb threat call to 3 railway stations in karnataka

ಚಾಮರಾಜನಗರ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಪ್ರಮುಖ ಸ್ಥಳಗಳಲ್ಲಿಯೂ ಪರಿಶೀಲನೆ ನಡೆಸಿದ್ದಾರೆ.

English summary
anonymous call have been received and they have issued bomb threat in mysuru chamarajanagar and Bagalkot railway station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X