ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಕಲಿ ಜಾತಿ ಪ್ರಮಾಣಪತ್ರ ಪಡೆದವರಿಗೆ, ಕೊಟ್ಟವರಿಗೆ ಶುರುವಾಯ್ತು ಸಂಕಷ್ಟ!

|
Google Oneindia Kannada News

ಬೆಂಗಳೂರು, ಆ: 30 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ಮಾಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯು ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

ಮುಂದಿನ ಒಂದು ತಿಂಗಳಲ್ಲಿ ವರದಿ ಕೊಡಿ

ಮುಂದಿನ ಒಂದು ತಿಂಗಳಲ್ಲಿ ವರದಿ ಕೊಡಿ

ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು. ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಯಿತು. ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಹೆಚ್ಚುವರಿ ಅಡ್ವೊಕೇಟ್ ಜನರಲ್ ನೇಮಕ

ಹೆಚ್ಚುವರಿ ಅಡ್ವೊಕೇಟ್ ಜನರಲ್ ನೇಮಕ

ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ಸೂಚಿಸಿದರು. ಜೊತೆಗೆ ಈ ಪ್ರಕರಣಗಳ ಸಂಪೂರ್ಣ ಮೇಲುಸ್ತುವಾರಿಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು.


ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸೂಚಿಸಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟವರ ವಿರುದ್ಧ ಕ್ರಮ!

ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟವರ ವಿರುದ್ಧ ಕ್ರಮ!

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿ ಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡುವಂತೆಯೂ ಸಿಎಂ ಸೂಚಿಸಿದ್ದಾರೆ.

Recommended Video

ತಾಲಿಬಾನಿಗಳ ಸಂದರ್ಶನ ಮಾಡಿದ್ದ ಪತ್ರಕರ್ತೆ ದೇಶ ಬಿಟ್ಟು ಹೋಗಿದ್ಯಾಕೆ? | Oneindia Kannada
ಕಾನೂನು ಇಲಾಖೆಗೆ ಸಿಎಂ ಕೊಟ್ಟ ಸೂಚನೆ!

ಕಾನೂನು ಇಲಾಖೆಗೆ ಸಿಎಂ ಕೊಟ್ಟ ಸೂಚನೆ!

ಪರಿಶಿಷ್ಟ ಜಾತಿ, ಪಂಗಡದವರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಬೇಕು. ಜೊತೆಗೆ ಈ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಅನುಷ್ಠಾನಗೊಳಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್ ಸಿ ಪಿ, ಟಿ ಎಸ್ ಪಿ ಅನುದಾನ ಬಳಕೆ ಮಾಡಿ. ಎಸ್.ಸಿ.ಪಿ-ಟಿಎಸ್ ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿ ಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೇ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸಿ ಎಂದು ಕಾನೂನು ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ.


ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ಶ್ರೀರಾಮುಲು, ಜೆ..ಸಿ. ಮಾಧುಸ್ವಾಮಿ ಸಮಿತಿಯ ಸದಸ್ಯರಾದ ಸಂಸದರು, ಶಾಸಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Chief Minister Basavaraj Bommai has instructed officials to take stringent action against the fake caste certificate holders and issuers. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X