'CM ಕುರ್ಚಿ ಉಳಿಸಿಕೊಳ್ಳಲು ಬಲಾಢ್ಯರ ಒತ್ತಡಕ್ಕೆ ಮಣಿದು ಒಳ ಮೀಸಲಾತಿ ಜಾರಿ''
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕುರ್ಚಿ ಉಳಿಸಿಕೊಳ್ಳಲು ಹಾಗೂ ದಲಿತ ಸಿಎಂ ಕೂಗು ತಪ್ಪಿಸಲು ಬಲಾಡ್ಯ ಎಸ್‌ಸಿ ಸಮುದಾಯಗಳ ಒತ್ತಡಕ್ಕೆ ಮಣಿದಿದ್ದಾರೆ. ನ್ಯಾ. ನಾಗಮೋಹನ್ ದಾಸ್ ವರದಿ ಹಾಗೂ ಸುಪ್ರೀಂ ಕೋರ್ಟ್ ಆದೇಶ ತಿರಸ್ಕಾರ ಮಾಡಿ ತಾಂತ್ರಿಕ ಕಾರಣದ ನೆಪವೊಡ್ಡಿದ್ದಾರೆ. ಅವಕಾಶ ವಂಚಿತ ಎಸ್‌ಸಿ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಒಳಮೀಸಲಾತಿ ಜಾರಿ ಬಗ್ಗೆ ಬುಧವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜನಸಂಖ್ಯೆ ಆಧಾರದಲ್ಲಿ ಕಾಲಕಾಲಕ್ಕೆ ಮೀಸಲಾತಿಯನ್ನು ಪರಿಷ್ಕರಣೆ ಮಾಡುವಂತೆ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಕೇವಲ ಆರು ಜಾತಿಯಿಂದ ಪ್ರಾರಂಭವಾದಂತಹ ಎಸ್ ಪಟ್ಟಿ ಕರ್ನಾಟಕದಲ್ಲಿ ಈಗ 101 ಜಾತಿಗಳು ಸೇರಿವೆ ಕಾಂಗ್ರೆಸ್ ಸರ್ಕಾರ ಜಾತಿಗಳನ್ನು ಸೇರಿಸಿಕೊಂಡು ಹೋದರು. ಆದರೆ, ಅದಕ್ಕೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವ ಪ್ರಯತ್ನ ಮಾಡದಿರುವುದೇ ದೊಡ್ಡ ದ್ರೋಹ ಎಂದರು.

ನಾನು ಸಿಎಂ ಆಗಿದ್ದಾಗ ಎಸ್‌ಸಿ ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಲು ನ್ಯಾ. ನಾಗಮೋಹನ ದಾಸ್ ಸಮಿತಿ ವರದಿ ಪರಿಗಣಿಸಿದ್ದೆ. ಅದರಂತೆ ಎಸ್ ಸಮುದಾಯಕ್ಕೆ ಶೇ 15 ರಿಂದ ಶೇ 17, ಎಸ್‌ಟಿ ಸಮುದಾಯಕ್ಕೆ ಶೇ 3 ರಿಂದ ಶೇ 7 ರಷ್ಟು ಹೆಚ್ಚಳ ಮಾಡಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಒಳ ಮೀಸಲಾತಿ ಕೊಡಲು ಸಾಧ್ಯವಾಗಿದೆ. ಇದನ್ನು ಎಸ್ಸಿ ಸಮುದಾಯಗಳು ಹಾಗೂ ಸಿಎಂ ಸಿದ್ದರಾಮಯ್ಯ ಒಪ್ಪಿಕೊಳ್ಳಬೇಕು. ಅವರು ಹಿಂದೆ ಸಿಎಂ ಆಗಿದ್ದಾಗಲೂ ಒಳ ಮೀಸಲಾತಿ ಜಾರಿಗೆ ಒತ್ತಡ ಇತ್ತು ಆಗ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ನೆನೆಗುದಿಗೆ ಬಿದ್ದಿರುವ ಒಳ ಮೀಸಲಾತಿ ಪ್ರಕರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲಿ ಅಫಿಡವಿಟ್ ಸಲಿಸುವ ಮೂಲಕ ರಾಜ್ಯ ಸರ್ಕಾರಗಳಿಗೆ ಒಳ ಮೀಸಲಾತಿ ನೀಡುವ ಅಧಿಕಾರ ಕೊಡಿಸಿತು. ರಾಜ್ಯ ಸರ್ಕಾರ ನ್ಯಾ. ನಾಗಮೋಹನ್ ದಾಸ್ ಕಮಿಟಿ ಸುಪೀಂ ಕೋರ್ಟ್ ಆದೇಶದಂತೆ ಜಾತಿ ವರ್ಗೀಣಕರಣ ಮಾಡಿರುವ ಆದೇಶವನ್ನು ಬದಿಗೆ ಒತ್ತಿರುವುದು ನೀವು ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿದಂತಾಗುತ್ತದೆ. ಅದನ್ನು ಇಟ್ಟುಕೊಂಡು ಯಾರಾದರೂ ಕೋರ್ಟ್ ಮೊರೆ ಹೋದರೆ ಮತ್ತೆ ಆ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ನ್ಯಾ. ನಾಗಮೋಹನ ದಾಸ್ ವರದಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ.

ಒಂದೂ ಪರ್ಸೆಂಟ್ ಮೀಸಲಾತಿ ಸಹ ಸಿಕ್ಕಿಲ್ಲ
ನ್ಯಾ. ನಾಗಮೋಹನ್ ದಾಸ್ ವರದಿಯಲ್ಲಿ ಕೇವಲ ನಾಲ್ಕೈದು ಜಾತಿಗಳು ಎಲ್ಲಾ ಸವಲತ್ತು ತೆಗೆದುಕೊಂಡಿವೆ ಅಂತ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಯಾವ ಸಮುದಾಯಗಳಿಗೆ ಸವಲತ್ತು ಸಿಕ್ಕಿಲ್ಲ ಅವರನ್ನು ತುಳಿಯುವ ಪ್ರಯತ್ನ ಮಾಡಿದ್ದಾರೆ. ರಾಜ್ಯ ಸರ್ಕಾರ ಜಾರಿ ಮಾಡಿರುವ ಒಳ ಮೀಸಲಾತಿಯಿಂದ ಸ್ವೀಪರ್, ಆದಿ ಕರ್ನಾಟಕ, ಆದಿ ದ್ರಾವಿಡ, ಅಲೆಮಾರಿ ಸಮುದಾಯಗಳಿಗೆ ಒಂದೂ ಪರ್ಸೆಂಟೂ ಮೀಸಲಾತಿ ಸಿಗುವುದಿಲ್ಲ. ಆದಿ ಕರ್ನಾಟಕ, ಆದಿ ದ್ರಾವಿಡ ಸಮುದಾಯ ಮೈಸೂರು ಭಾಗದಲ್ಲಿಯೇ ಹೆಚ್ಚಾಗಿದ್ದಾರೆ. ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಸ್ಥಾನ ಉಳಿಸಿಕೊಳ್ಳಲು ಬಲಾಡ್ಯ ಎಸ್‌ಟಿ ಜಾತಿಗಳ ಒತ್ತಡಕ್ಕೆ ಮಣಿದು ನ್ಯಾ. ನಾಗಮೋಹನ್ ದಾಸ್ ವರದಿ ಹಾಗೂ ಸುಪ್ರೀಂ ಕೋರ್ಟ್ ಆದೇಶ ತಿರಸ್ಕಾರ ಮಾಡಿ ಮೂರು ಗುಂಪು ಮಾಡಿ ತಾಂತ್ರಿಕ ಕಾರಣದ ನೆಪ ಒಡ್ಡಿ ಅನ್ಯಾಯ ಮಾಡಿದ್ದಾರೆ. ಇದೆಲ್ಲ ಕಾರಣಗಳಿಂದ ದಲಿತ ಸಿಎಂ ಕೂಗು ತಪ್ಪಿಸಲು ತಳ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಇದ್ಯಾವ ಸಾಮಾಜಿಕ ನ್ಯಾಯ ಎಂದು ಅವರು ದೂರಿದರು.












Click it and Unblock the Notifications