ಬಿಹಾರ ಚುನಾವಣೆ ಗೆಲುವು, ಅಭಿವೃದ್ಧಿಗೆ ಒಲಿದ ಜಯ: ಶಾಸಕ ಸತೀಶ್ ರೆಡ್ಡಿ
ಬಿಹಾರ
ಚುನಾವಣೆಯ ಗೆಲುವು ಅಭಿವೃದ್ಧಿ ಕಾರ್ಯಗಳಿಗೆ ಒಲಿದ ಜಯ ಎಂದು ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕರಾದ ಸತೀಶ್ ರೆಡ್ಡಿ ಅವರು ಪ್ರತಿಪಾದಿಸಿದರು. ಬಿಹಾರ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ ಸಿಕ್ಕಿದ್ದು, ಸಂತಸದ ವಿಚಾರ. ಅಭೂತಪೂರ್ವ ಗೆಲುವನ್ನು ದಾಖಲಿಸಿದ ಎನ್‌ಡಿಎ ಅಭ್ಯರ್ಥಿಗಳಿಗೆ ಹಾಗೂ ಚುನಾವಣೆಯ ಗೆಲುವಿಗಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಪ್ರಮುಖವಾಗಿ ಮತದಾರ ಬಂಧುಗಳಿಗೆ ಧನ್ಯವಾದಗಳು ಎಂದು ಶಾಸಕ ಸತೀಶ್ ರೆಡ್ಡಿ ಅವರು ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವನ್ನು ಸಂಭ್ರಮಿಸಿದ್ದಾರೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಬೊಮ್ಮನಹಳ್ಳಿ
ಕ್ಷೇತ್ರ ಬಿಜೆಪಿ ಪಕ್ಷದ ಭದ್ರಕೋಟೆಯಾಗಿದ್ದು, ಇದೀಗ ಬಿಹಾರದಲ್ಲಿ ಕೂಡ ಅದೇ ರೀತಿಯ ಸಾಧನೆ ಮಾಡಿದೆ ಬಿಜೆಪಿ ಪಕ್ಷ. ಬಿಹಾರ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ದೇಶದಲ್ಲಿ ಎನ್‌ಡಿಎ ಮೈತ್ರಿಕೂಟದ ಹವಾ ಜೋರಾಗಿದೆ ಎಂಬುದು ದೇಶಕ್ಕೆ ಕನ್ಫರ್ಮ್ ಆಗಿದೆ. ಅದರಲ್ಲೂ ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆದ್ದು ಬೀಗಿದ ನಂತರ ದೇಶದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರು ಸಂತಸ ಹಂಚಿಕೊಂಡಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications