Booker Prize 2025: ಕನ್ನಡತಿ & ಸಾಹಿತಿ ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ, ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ!
Booker Prize 2025: ಕನ್ನಡದ ಪ್ರಮುಖ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಗರಿಮೆ ಸಂದಿದೆ. ಸಣ್ಣ ಕತೆಗಳ ಅನುವಾದಿತ ಸಂಕಲನವಾಗಿರುವ "ಹಾರ್ಟ್ ಲ್ಯಾಂಪ್"ಗೆ ಈ ಪ್ರಶಸ್ತಿ ಸಂದಿದೆ. ಕನ್ನಡದ ಕೃತಿಯೊಂದಿಗೆ ಈ ಪ್ರಶಸ್ತಿ ಸಿಕ್ಕಿರುವುದು ಇದೇ ಮೊದಲು. ಹೀಗಾಗಿ, ಈ ಪ್ರಶಸ್ತಿ ಕನ್ನಡಿಗರಲ್ಲಿ ಪುಳಕವನ್ನುಂಟು ಮಾಡಿದೆ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾರೀ ಪೈಪೋಟಿ ಹಾಗೂ ಸ್ಪರ್ಧೆ ಇರುತ್ತದೆ. ಇಷ್ಟೊಂದು ಸ್ಪರ್ಧೆಗಳ ನಡುವೆ ಪ್ರಶಸ್ತಿ ಕನ್ನಡತಿಗೆ ಸಂದಿದೆ.
ಕೆಲವೇ ದಿನಗಳ ಹಿಂದೆ ಬೂಕರ್ ಪ್ರಶಸ್ತಿ ನನಗೆ ಸಿಗಲೆಂದು ಪ್ರಾರ್ಥಿಸಿ ಎಂದು ಮುಷ್ತಾಕ್ ಅವರು ಹೇಳಿದ್ದರು. ಬೂಕರ್ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿನ 6 ಪ್ರಮುಖ ಕೃತಿಗಳಲ್ಲಿ ಅವರ ಹಾರ್ಟ್ ಲ್ಯಾಂಪ್ ಕಥಾಗುಚ್ಛವೂ ಒಂದಾಗಿತ್ತು. ಪ್ಲೀಸ್.. ಪ್ರೇ ಫಾರ್ ಮೀ... ನನಗಾಗಿ ಪ್ರಾರ್ಥಿಸಿ ಅಂತ ವಿನಮ್ರವಾಗಿ ಅವರು ಹೇಳಿದ್ದರು. ಮುಷ್ತಾಕ್ ಅವರ ಪರಿಶ್ರಮ ಹಾಗೂ ಕಲೆಯೊಂದಿಗೆ, ಕನ್ನಡಿಗರ ಪ್ರಾರ್ಥನೆಯೂ ಸೇರಿದೆ ಎನ್ನುವಂತೆ ಅವರಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಮೂಲಕ ಕನ್ನಡದ ಕೃತಿಯೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಯನ್ನು ಗಳಿಸಿದೆ.

12 ಕಥೆಗಳ ಗುಚ್ಛ: ಇನ್ನು ಇದು 12 ಕಥೆಗಳ ಗುಚ್ಛವಾಗಿದೆ. 1990 ಹಾಗೂ 2023ರ ನಡುವೆ ಪ್ರಕಟವಾಗಿದ್ದ 12 ಕತೆಗಳನ್ನು ಒಳಗೊಂಡಿರುವ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು.12 ಕತೆಗಳನ್ನು ಒಳಗೊಂಡ ಕಥಾ ಸಂಕಲನ ಗುಚ್ಛ ಇದಾಗಿದ್ದು. 1990 ಹಾಗೂ 2023ರ ನಡುವೆ ಈ ಕತೆಗಳು ಪ್ರಕಟಗೊಂಡಿದ್ದವು. ಇನ್ನು ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದ ಮಾಡಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು & ಹೆಣ್ಣುಮಕ್ಕಳ ದೈನಂದಿನ ಬದುಕಿಗೆ ಸಂಬಂಧಿಸಿದ ವಿಷಯಗಳ ಮೇಲೆ ಈ ಕತೆಗಳು ಕೇಂದ್ರೀಕೃತವಾಗಿವೆ.
ಕನ್ನಡಕ್ಕೆ ಸಂದ ಗೌರವ: ಬೂಕರ್ ಪ್ರಶಸ್ತಿ ಎನ್ನುವುದು ಪ್ರತಿ ಸಾಹಿತಿಯ ಕನಸು. ಬೂಕರ್ ಪ್ರಶಸ್ತಿಯ ಕನಸನ್ನು ಕನ್ನಡಿಗರೂ ಕಂಡಿದ್ದರು. ಅದು ಮೊದಲ ಬಾರಿ ಈಡೇರಿದೆ. ಇದರೊಂದಿಗೆ ಕನ್ನಡದ ಕೃತಿಯೊಂದಕ್ಕೆ ಅಂತಾರಾಷ್ಟ್ರೀಯ ಮನ್ನಣೆ ಹಾಗೂ ಗೌರವ ಸಂದಿದೆ. ಪ್ರಶಸ್ತಿಯ ಮೊತ್ತವು ಅಂದಾಜು 57.28 ಲಕ್ಷ ರೂಪಾಯಿ ಆಗಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುಷ್ತಾಕ್ ಅವರು, ಯಾವ ಕಥೆಯೂ ಸಣ್ಣದಲ್ಲ. ಪ್ರತಿ ಸಣ್ಣ ವಿಷಯವೂ ಇಡೀ ಕಥೆಯ ತೂಕವನ್ನು ಒಳಗೊಂಡಿರುತ್ತದೆ ಎನ್ನುವುದು ನನ್ನ ನಂಬಿಕೆ. ಅದರಂತೆಯೇ ಈ ಪುಸ್ತಕ ಬಂದಿದೆ ಎಂದು ಹೇಳಿದರು. ಈ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಸಂತೋಷ ವ್ಯಕ್ತಪಡಿಸಿದರು.
ಇನ್ನು ಈ ಕಥೆಗಳನ್ನು ಅನುವಾದ ಮಾಡಿರುವ ಅನುವಾದಕಿ ಭಸ್ತಿ ಹರ್ಷ ಅವರು, ಇದು ನನ್ನ ಸುಂದರ ಭಾಷೆಗೆ ದೊರೆತ ಅತ್ಯಂತ ಸೊಗಸಾದ ಗೆಲುವು ಎಂದು ಹರ್ಷ ವ್ಯಕ್ತಪಡಿಸಿದರು.
ಪತ್ರಕರ್ತ ಹಾಗೂ ಬರಹಗಾರ ದಿನೇಶ್ ಅಮಿನ್ ಮಟ್ಟು ಅವರು, ಹೆಮ್ಮೆಯ ಲೇಖಕಿ Banu Mushtaq ಅವರಿಗೆ ಪ್ರೀತಿಪೂರ್ವಕ ಅಭಿನಂದನೆಗಳು. ಬಾನು ಮುಸ್ತಾಕ್ ದಂತಗೋಪುರದ ಲೇಖಕಿ ಅಲ್ಲ, ಅವರು ಫೈರ್ ಬ್ರಾಂಡ್ ಪತ್ರಕರ್ತೆಯೂ ಹೌದು ಎನ್ನುವುದು ನನ್ನಂತಹವರ ಹೆಮ್ಮೆಯನ್ನು ಇಮ್ಮಡಿಗೊಳಿಸಿದೆ.
ಬಾನು ಅವರನ್ನು ನಮ್ಮಂತಹವರಿಗೆ ಪರಿಚಯಿಸಿದ ಪಿ.ಲಂಕೇಶ್ ಅವರಿಗೂ ಅಭಿನಂದನೆಗಳು. ಈ ಪ್ರಶಸ್ತಿಯನ್ನು ಲಂಕೇಶ್ ಅವರೂ ಸಂಭ್ರಮಿಸುತ್ತಿರಬಹುದು 🙏 ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ!
ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ.
ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ 'ಹೃದಯ ದೀಪ'ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಜೇನಿನ ಹೊಳೆಯೋ, ಹಾಲಿನ ಮಳೆಯೋ ❤️
ಇನ್ನು ವೇದಿಕೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕನ್ನಡ ಭಾಷೆಯನ್ನು ವರ್ಣನೆ ಮಾಡುವುದಕ್ಕೆ ದೀಪಾ ಭಸ್ತಿ ಅವರು ಜೇನಿನ ಹೊಳೆಯೋ, ಹಾಲಿನ ಮಳೆಯೋ ಎನ್ನುವ ಸಾಲುಗಳನ್ನು ಬಳಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕನ್ನಡ ಸೊಗಸಾದ ಭಾಷೆ ಎಂದಿರುವ ಅವರು ಜೇನಿನ ಹೊಳೆಯೋ, ಹಾಲಿನ ಮಳೆಯೋ ಎಂದು ಹೇಳಿ ಇದರ ಅರ್ಥವನ್ನೂ ಇಂಗ್ಲಿಷ್‌ನಲ್ಲಿ ವಿವರಿಸಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications