88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ

ಕರ್ನಾಟಕವು 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗುತ್ತಿದೆ. ಇಂದು ಸಮ್ಮೇಳನಾಧ್ಯಕ್ಷರ ಹೆಸರು ಕೂಡ ಘೋಷಣೆಯಾಗಿದೆ. ಬೂಕರ್ ಪ್ರಶಸ್ತಿ ವಿಜೇತರಾಗಿ ಪ್ರಸಿದ್ಧಿ ಪಡೆದಿರುವ ನಾಡಿನ ಹಿರಿಯ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ. ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯು ಭಾನುವಾರ ಬಳ್ಳಾರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಬಾನು ಮುಷ್ತಾಕ್‌ ಅವರ ಹೆಸರು ಅಂತಿಮಗೊಳಿಸಲಾಗಿದೆ.

ಈ ಬಾರಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಹೇಳಿದ್ದಾರೆ. ಈ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

booker-prize-winner-banu-mushtaq-to-chair-88th-kannada-sahitya-sammelana-in-ballari

ಕನ್ನಡ ಹಿರಿಯ ಸಾಹಿತಿಯಾಗಿರುವ ಬಾನು ಮುಷ್ತಾಕ್​​ ಅವರು ಸಾಮಾಜಿಕ ಕಾರ್ಯಕರ್ತೆ, ಮಹಿಳಾಪರ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿಯಾಗಿ ಹಾಗೂ ಪತ್ರಕರ್ತೆಯಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಅವರ ಸಣ್ಣ ಕತೆಗಳ ಅನುವಾದಿತ ಸಂಕಲನವಾಗಿರುವ "ಹಾರ್ಟ್‌ ಲ್ಯಾಂಪ್"ಗೆ ಬೂಕರ್ ಪ್ರಶಸ್ತಿ ಲಭಿಸಿತ್ತು. ಇವರು ಮೂಲತಃ ಹಾಸನದವರು. ಅರಸೀಕೆರೆಯಲ್ಲಿ ಶಾಲೆಗೆ ಸೇರಿದ ಬಾನು ಅವರಿಗೆ ಉರ್ದು ಮೇಲೆ ಆಸಕ್ತಿ ಇರಲಿಲ್ಲ, ಹಾಗಾಗಿ ಅವರ ಪೋಷಕರು ಕನ್ನಡವನ್ನಾದರೂ ಕಲಿಯಲಿ ಎಂದು ಶಿವಮೊಗ್ಗದ ಕ್ರಿಶ್ಚಿಯನ್​ ಕಾನ್ವೆಂಟ್​ ಶಾಲೆಗೆ ಸೇರಿಸಿದ್ದರು. ಬಳಿಕ ಅವರು ಪದವಿವರೆಗೂ ವ್ಯಾಸಂಗ ಮಾಡಿದ್ದರು.

ಪ್ರಶಸ್ತಿ ಸ್ವೀಕರಿಸಿ ಬಳಿಕ ಮಾತನಾಡಿದ್ದ ಮುಷ್ತಾಕ್ ಅವರು ಯಾವ ಕಥೆಯೂ ಸಣ್ಣದಲ್ಲ. ಪ್ರತಿ ಸಣ್ಣ ವಿಷಯವೂ ಇಡೀ ಕಥೆಯ ತೂಕವನ್ನು ಒಳಗೊಂಡಿರುತ್ತದೆ ಎನ್ನುವುದು ನನ್ನ ನಂಬಿಕೆ. ಅದರಂತೆ ಈ ಪುಸ್ತಕ ಬಂದಿದೆ. ಈ ಗೆಲುವು ವೈವಿಧ್ಯತೆಗೆ ಸಿಕ್ಕ ಜಯ ಎಂದಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬಾನು ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದರು. ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ಸಂತಸ ವ್ಯಕ್ತಪಡಿಸಿದ್ದರು.

ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳ ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದಿದ್ದರು. ಇದೀಗ ಅವರನ್ನೇ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+