ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ವಿತರಣೆ: ಬೊಮ್ಮಾಯಿ ಚಾಲನೆ

ಬೆಂಗಳೂರು, ಜನವರಿ 10: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಈ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ದೇಶಾದ್ಯಂತ ಈಗಾಗಲೇ 15-18 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಇಂದಿನಿಂದ ಪ್ರಿಕಾಷನ್ ಡೋಸ್​ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಆರೋಗ್ಯ ಸಿಬ್ಬಂದಿ, ಕೋವಿಡ್ ನಿಯಂತ್ರಣದ ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇಂದಿನಿಂದ ಪ್ರಿಕಾಷನ್​ ಡೋಸ್​ ನೀಡಿಕೆ ಆರಂಭವಾಗಲಿದೆ.

Booster Dose Of Vaccination In Karnataka Begins On January 10 2022

ಇದಕ್ಕಾಗಿ ಶುಕ್ರವಾರದಿಂದಲೇ ಕೋವಿನ್​ ವೆಬ್​​​​​ಸೈಟ್​ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿಸೆಂಬರ್​25 ರಂದು ದಿಢೀರ್​ ಆಗಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 15-18 ವರ್ಷದ ಮಕ್ಕಳು ಹಾಗೂ ಕೋವಿಡ್​ ಮುಂಚೂಣಿ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರಿಗೆ ಪ್ರಿಕಾಷನ್​ ಡೋಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಪ್ರಿಕಾಷನ್​( ಬೂಸ್ಟರ್​ ಡೋಸ್​) ಲಸಿಕೆ ನೀಡಿಕೆಗೆ ಚಾಲನೆ ಸಿಗಲಿದೆ.

ರೂಪಾಂತರಿ ಓಮಿಕ್ರಾನ್ ತಡೆಯಲು ಹಲವು ತಜ್ಞರು ಬೂಸ್ಟರ್ ಡೋಸ್​ಗೆ ಶಿಫಾರಸು ಮಾಡಿದ್ದರು. ಜನವರಿ 10 ರಿಂದ ಅಂದರೆ ಇಂದಿನಿಂದ ರಾಜ್ಯದಲ್ಲೂ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ.

ಬೂಸ್ಟರ್ ಡೋಸ್ ಪಡೆಯುವ ವಿಧಾನ :
ಕೋವಿನ್ ಪೋರ್ಟಲ್​​ನಲ್ಲಿ ನೋಂದಾಯಿಸಿದಂತೆ ಎರಡು ಡೋಸ್ ಪಡೆದಿರಬೇಕು.
*ಎರಡನೇ ಡೋಸ್ ಪಡೆದು 9 ತಿಂಗಳು (39 ವಾರಗಳಾಗಿರಬೇಕು)ಆಗಿರಬೇಕು.
*ಎರಡು ಡೋಸ್ ಪಡೆದಿರುವ ಬಗ್ಗೆ ಮಾಹಿತಿ ಒದಗಿಸಬೇಕು.

ಬೂಸ್ಟರ್ ಡೋಸ್​ಗೆ ಯಾವ ಲಸಿಕೆ ನೀಡಲಾಗುತ್ತದೆ?

*ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದವರು ಮೂರನೇ ಡೋಸ್ ಕೋವಿಶೀಲ್ಡ್ ಅನ್ನೇ ಪಡೆಯಬೇಕು.
*ಕೋವ್ಯಾಕ್ಸಿನ್ ಪಡೆದವರು ಮೂರನೇ ಡೋಸ್​ಗೆ ಕೋವ್ಯಾಕ್ಸಿನ್ ಅನ್ನೇ ಪಡೆಯಬೇಕು.

ಎಲ್ಲೆಲ್ಲಿ ಬೂಸ್ಟರ್ ಡೋಸ್ ಲಭ್ಯ?

*ಎಲ್ಲಾ ಸರ್ಕಾರಿ ಲಸಿಕಾಕರಣ ಕೇಂದ್ರಗಳಲ್ಲಿ ಲಭ್ಯ.
*ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲೂ ಲಭ್ಯ.
*ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸಿಗಲಿದೆ.

ನೋಂದಣಿ ಮತ್ತು ಲಸಿಕಾಕರಣಕ್ಕೆ ವೇಳೆಯನ್ನು ನಿಗದಿಪಡಿಸಿಕೊಳ್ಳುವ ಸೇವೆಗಳನ್ನು ಆನ್‌ಲೈನ್ ಮತ್ತು ಆನ್‌ಸೈಟ್ (ವಾಕ್-ಇನ್) ವಿಧಾನಗಳ ಮೂಲಕ ಪಡೆದುಕೊಳ್ಳಬಹುದು. ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡ ವಿವರವನ್ನು ಕೋವಿನ್ ಪೋರ್ಟಲ್ ಮುಖಾಂತರ ಡಿಜಿಟಲ್ ಲಸಿಕಾ ಪ್ರಮಾಣ ಪತ್ರ ಪಡೆಯಬಹುದು. ‌

ಲಸಿಕೆ ಮಾಹಿತಿ : ರಾಜ್ಯವು 18 ವರ್ಷ ಮೇಲ್ಪಟ್ಟವರಿಗೆ 4.89 ಕೋಟಿ ಲಸಿಕಾಕರಣ ನಡೆಸುವ ಗುರಿ ಹೊಂದಿದೆ. ಈವರೆಗೂ 4.8 ಕೋಟಿ (ಶೇ. 99) ಫಲಾನುಭವಿಗಳಿಗೆ ಮೊದಲನೇ ಡೋಸ್ ಮತ್ತು 3.9 ಕೋಟಿ (ಶೇ.81) ಜನರಿಗೆ ಎರಡು ಡೋಸ್ ಲಸಿಕೆ ನೀಡಲಾಗಿದೆ.

15-18 ವರ್ಷದ 31.75 ಲಕ್ಷ ಫಲಾನುಭವಿಗಳಿಗೆ ಲಸಿಕಾಕರಣ ನಡೆಸುವ ಗುರಿ ಹೊಂದಲಾಗಿದೆ. 15.5 ಲಕ್ಷ (ಶೇ. 49) ಫಲಾನುಭವಿಗಳಿಗೆ ಮೊದಲನೇ ಡೋಸ್ ಲಸಿಕೆ ನೀಡಲಾಗಿದೆ.

ಬೂಸ್ಟರ್ ಡೋಸ್ ಪಡೆದ ಬಿಸಿ ಪಾಟೀಲ್: ಕೃಷಿ ಸಚಿವರೂ ಹಾವೇರಿ ಉಸ್ತುವಾರಿಗಳಾಗಿರುವ ಬಿ.ಸಿ.ಪಾಟೀಲ್ ಬೂಸ್ಟರ್ ಡೋಸ್ ಲಸಿಕೆ ಪಡೆದರು.

ಮತಕ್ಷೇತ್ರ ಹಿರೇಕೆರೂರಿನ‌ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60 ವರ್ಷ ಮೇಲ್ಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಕಾರ್ಯಕರ್ತೆಯರು ಬೂಸ್ಟರ್ ಡೋಸ್ ಲಸಿಕೆ ಹಾಕಿದರು.

ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಕೊಮೊರ್ಬಿಡ್ ಜನರಿಗೆ ಕೊರೊನಾ ವೈರಸ್​ ವಿರುದ್ಧ ಮುನ್ನೆಚ್ಚರಿಕಾ ಡೋಸ್​​ನ್ನು ಇಂದಿನಿಂದ ನೀಡಲಾಗುತ್ತಿದ್ದು,ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ.

ಈ ಹಿಂದೆ ಮೊದಲ ಹಾಗೂ ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು.ಎಲ್ಲರೂ ತಪ್ಪದೇ‌ ಲಸಿಕಾಕರಣ ಹಾಕಿಸಿಕೊಳ್ಳುವಂತೆ‌ ಈ ವೇಳೆ ಬಿ.ಸಿ.ಪಾಟೀಲ್ ಕರೆ ನೀಡಿದರು.

ಈ ಹಿಂದೆ ಮೊದಲ, ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್​ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ. ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ.

ಮೂರನೇ ಡೋಸ್ ಲಸಿಕೆಯು ಓಮೈಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ. 88 ರಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+